ರಕ್ಷಣಾ ಸಚಿವ ರಾಜನಾಥ್ ಸಿಂಗ್ 
ದೇಶ

ಲೋಕಸಭೆಯಲ್ಲಿ ಭದ್ರತಾ ಲೋಪ: ಸಂಸತ್ತಿನಲ್ಲಿ ವಿಪಕ್ಷಗಳ ಕೋಲಾಹಲ; ಎಚ್ಚರಿಕೆ ಅಗತ್ಯ ಎಂದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಗುರುವಾರ ಸಂಸತ್ತಿನಲ್ಲಿ ಭದ್ರತಾ ಲೋಪದ ಕುರಿತು ಹೇಳಿಕೆ ನೀಡಿದ್ದಾರೆ, ಅಲ್ಲದೇ ಎಲ್ಲರಿಗೂ ಪ್ರವೇಶ ಪಾಸ್‌ಗಳನ್ನು ನೀಡದಂತೆ ಎಲ್ಲಾ ಸಂಸದರಿಗೆ ಎಚ್ಚರಿಕೆ ನೀಡಿದ್ದಾರೆ.

ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಗುರುವಾರ ಸಂಸತ್ತಿನಲ್ಲಿ ಭದ್ರತಾ ಲೋಪದ ಕುರಿತು ಹೇಳಿಕೆ ನೀಡಿದ್ದಾರೆ, ಅಲ್ಲದೇ ಎಲ್ಲರಿಗೂ ಪ್ರವೇಶ ಪಾಸ್‌ಗಳನ್ನು ನೀಡದಂತೆ ಎಲ್ಲಾ ಸಂಸದರಿಗೆ ಎಚ್ಚರಿಕೆ ನೀಡಿದ್ದಾರೆ.

ಶೂನ್ಯ ವೇಳೆಯಲ್ಲಿ ಇಬ್ಬರು ಆರೋಪಿಗಳು ಲೋಕಸಭೆ ಪ್ರವೇಶಿಸಿ ಕಲರ್ ಗ್ಯಾಸ್ ಬಿಡುಗಡೆ ಮಾಡಿದ ಒಂದು ದಿನದ ನಂತರ ಸರ್ಕಾರದಿಂದ ನೀಡಲಾದ ಮೊದಲ ಹೇಳಿಕೆ ಇದಾಗಿದೆ.

ಈ ನಡುವೆ ಪ್ರಧಾನಿ ಮೋದಿ ಅಥವಾ ಕೇಂದ್ರ ಗೃಹ ಸಚಿವ ಅಮಿತ್ ಶಾ ಈ ಬಗ್ಗೆ ಹೇಳಿಕೆ ನೀಡಬೇಕು ಎಂದು ಪ್ರತಿಪಕ್ಷಗಳು ಒತ್ತಾಯಿಸುತ್ತಿವೆ.

ಇಂದು ಬೆಳಗ್ಗೆ 11 ಗಂಟೆಗೆ ಸಂಸತ್ ಕಲಾಪ ಆರಂಭವಾದ ಕೂಡಲೇ ಲೋಕಸಭೆ ಮತ್ತು ರಾಜ್ಯಸಭೆ ಎರಡರಲ್ಲೂ ಘೋಷಣೆಗಳು ಆರಂಭವಾದವು. ಪ್ರತಿಪಕ್ಷದ ಸದಸ್ಯರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನೂ ಕೂಗಿದರು. ಈ ವೇಳೆ ಸರ್ಕಾರದ ಪರವಾಗಿ ಮಾತನಾಡಿದ ರಾಜನಾಥ್ ಸಿಂಗ್ ಅವರು, ಇದು ದುರದೃಷ್ಟಕರ ಸಂಗತಿ. ಸದನದಲ್ಲಿ ಗೊಂದಲದ ವಾತಾವರಣ ಸೃಷ್ಟಿಸುವವರಿಗೆ ಪಾಸ್ ನೀಡದಂತೆ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷದ ಎಲ್ಲ ಸಂಸದರು ಖಚಿತಪಡಿಸಿಕೊಳ್ಳಬೇಕು. ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.

ಸರ್ಕಾರ ಹೇಳಿಕೆ ನೀಡುತ್ತಿರುವ ನಡುವಲ್ಲೇ ಪ್ರತಿಪಕ್ಷದ ಸದಸ್ಯರು ಶೇಮ್, ಶೇಮ್ ಎಂಬ ಘೋಷಣೆಗಳನ್ನು ಕೂಗಿದ್ದರಿಂದ ಉಭಯ ಸದನಗಳ ಕಲಾಪವನ್ನು ಮುಂದೂಡಬೇಕಾಯಿತು.

ಇಬ್ಬರು ಆಗಂತುಕರು ಸಂಸತ್ತಿನ ಸಂದರ್ಶಕರ ಗ್ಯಾಲರಿಯಿಂದ ಲೋಕಸಭೆಯ ಸದಸ್ಯರ ಪೀಠಕ್ಕೆ ಜಿಗಿದು ಹಳದಿ ಬಣ್ಣದ ಆಶ್ರುವಾಯು ಸಿಡಿಸುತ್ತಾ ಓಡಾಡಿದ ಘಟನೆ ಬುಧವಾರ ಲೋಕಸಭೆಯಲ್ಲಿ ನಡೆದಿತ್ತು.ಪರಿಣಾಮ ಸದನವನ್ನುಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಲಾಯಿತು.

ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳುವಂತೆ ಇಬ್ಬರು ಸಾರ್ವಜನಿಕ ಗ್ಯಾಲರಿಯಿಂದ ಜಿಗಿದಿದ್ದಾರೆ.

ಶೂನ್ಯ ವೇಳೆಯಲ್ಲಿ ಒಬ್ಬರು ಅಶ್ರುವಾಯು ಎರಚುತ್ತಾ ಸಾರ್ವಜನಿಕ ಗ್ಯಾಲರಿಯಿಂದ ಜಿಗಿದರೆ ಮತ್ತೊಬ್ಬ ಲೋಕಸಭೆಯ ಬೆಂಚುಗಳ ಮೇಲೆ ಹಾರುತ್ತಿರುವುದು ಕಂಡುಬಂದಿದೆ ಎಂದು ಚೌಧರಿ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

SCROLL FOR NEXT