ಕೃಷ್ಣ ಜನ್ಮಭೂಮಿ ಪ್ರಕರಣ 
ದೇಶ

ಕೃಷ್ಣ ಜನ್ಮಭೂಮಿ ಪ್ರಕರಣ: ಶಾಹಿ ಈದ್ಗಾ ಸಂಕೀರ್ಣದ ಸಮೀಕ್ಷೆಗೆ ಅಲಹಾಬಾದ್ ಹೈಕೋರ್ಟ್ ಅನುಮತಿ

ಮಹತ್ವದ ಬೆಳವಣಿಗೆಯಲ್ಲಿ ಕೃಷ್ಣ ಜನ್ಮಭೂಮಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ಶಾಹಿ ಈದ್ಗಾ ಸಂಕೀರ್ಣದ ಸಮೀಕ್ಷೆಗೆ ಅನುಮತಿ ನೀಡಿದೆ.

ಅಲಹಾಬಾದ್: ಮಹತ್ವದ ಬೆಳವಣಿಗೆಯಲ್ಲಿ ಕೃಷ್ಣ ಜನ್ಮಭೂಮಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ಶಾಹಿ ಈದ್ಗಾ ಸಂಕೀರ್ಣದ ಸಮೀಕ್ಷೆಗೆ ಅನುಮತಿ ನೀಡಿದೆ.

ಹೌದು.. ಜ್ಞಾನವ್ಯಾಪಿ ಪ್ರಕರಣದಂತೆಯೇ ಹಿಂದೂ-ಮುಸ್ಲಿಂ ಸಮುದಾಯಗಳ ತಿಕ್ಕಾಟಕ್ಕೆ ಕಾರಣವಾಗಿರುವ ಮತ್ತೊಂದು ಪುಣ್ಯಕ್ಷೇತ್ರ ಕೃಷ್ಣ ಜನ್ಮಭೂಮಿ ಮಥುರಾದಲ್ಲಿರುವ ಶಾಹಿ ಈದ್ಗಾ ಸಂಕೀರ್ಣದ ಸಮೀಕ್ಷೆಗೆ ಅಲಹಾಬಾದ್ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ.

ಹಿಂದೂಪರ ಸಂಘಟನೆಗಳು ಸಲ್ಲಿಸಿದ್ದ ಮನವಿಯನ್ನು ಸ್ವೀಕರಿಸಿರುವ ಅಲಹಾಬಾದ್ ಹೈಕೋರ್ಟ್ ವಿವಾದಿತ ಶಾಹಿ ಈದ್ಗಾ ಸಂಕೀರ್ಣದ ವೈಜ್ಞಾನಿಕ ಸಮೀಕ್ಷೆ ನಡೆಸಲು ಅನುಮತಿ ನೀಡಿದೆ. 

ಶಾಹಿ ಈದ್ಗಾ ಮಸೀದಿಯ ವಾದ ತಿರಸ್ಕರಿಸಿದ ಕೋರ್ಟ್
ಇನ್ನು ಈ ಕುರಿತು ಮಾತನಾಡಿರುವ ಕೃಷ್ಣ ಜನ್ಮಭೂಮಿ ಪ್ರಕರಣ ಹಿಂದೂ ಸಂಘಟನೆಗಳ ಪರ ವಕೀಲ ವಿಷ್ಣು ಶಂಕರ್ ಜೈನ್ ಅವರು, 'ವಕೀಲ ಕಮಿಷನರ್‌ನಿಂದ ಶಾಹಿ ಈದ್ಗಾ ಮಸೀದಿ ಸಮೀಕ್ಷೆಗೆ ನಾವು ಒತ್ತಾಯಿಸಿದ್ದ ನಮ್ಮ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ಅನುಮತಿಸಿದೆ. ಸಮೀಕ್ಷೆ ವಿಧಾನಗಳನ್ನು ಡಿಸೆಂಬರ್ 18 ರಂದು ನಿರ್ಧರಿಸಲಾಗುವುದು. ಶಾಹಿ ಈದ್ಗಾ ಮಸೀದಿಯ ವಾದವನ್ನು ನ್ಯಾಯಾಲಯ ತಿರಸ್ಕರಿಸಿದೆ. ನಮ್ಮ ಬೇಡಿಕೆಯು ಶಾಹಿ ಈದ್ಗಾ ಮಸೀದಿ ಸರ್ವೆಯಾಗಿತ್ತು. ಶಾಹಿ ಈದ್ಗಾ ಸಂಕೀರ್ಣದಲ್ಲಿ ಹಿಂದೂ ದೇವಾಲಯದ ಸಾಕಷ್ಟು ಚಿಹ್ನೆಗಳು ಇವೆ. ಮತ್ತು ನಿಜವಾದ ಸ್ಥಾನವನ್ನು ತಿಳಿಯಲು, ವಕೀಲ ಕಮಿಷನರ್ ಅಗತ್ಯವಿದೆ. ಇದು ನ್ಯಾಯಾಲಯದ ಮಹತ್ವದ ತೀರ್ಪು ಎಂದು ಹೇಳಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ದೇಗುಲದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಅವರು, "ತೀರ್ಪು ಬರುವುದು ಒಳ್ಳೆಯದು. ಸಮೀಕ್ಷೆ ಮುಖ್ಯವಾಗಿದೆ... ಸಮೀಕ್ಷೆಯು ಸತ್ಯಗಳನ್ನು ಸ್ಪಷ್ಟವಾಗಿ ತೋರಿಸುತ್ತದೆ..." ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT