ಅಲಹಾಬಾದ್ ವಿವಿ ಹಾಸ್ಟೆಲ್ ಕೊಠಡಿಯಲ್ಲಿ ಬಾಂಬ್ ತಯಾರಿಸುತ್ತಿದ್ದ ವೇಳೆ ಸ್ಫೋಟ: ವಿದ್ಯಾರ್ಥಿಗೆ ಗಾಯ
ಅಲಹಾಬಾದ್ ವಿಶ್ವವಿದ್ಯಾಲಯ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ಕೋಣೆಯಲ್ಲಿ ತಾನೇ ತಯಾರಿಸುತ್ತಿದ್ದ ಬಾಂಬ್ ಸ್ಫೋಟಗೊಂಡು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಯಾಗರಾಜ್: ಅಲಹಾಬಾದ್ ವಿಶ್ವವಿದ್ಯಾಲಯ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ಕೋಣೆಯಲ್ಲಿ ತಾನೇ ತಯಾರಿಸುತ್ತಿದ್ದ ಬಾಂಬ್ ಸ್ಫೋಟಗೊಂಡು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬುಧವಾರ ಈ ಘಟನೆ ನಡೆದಿದೆ. ಎಂ.ಎ ವಿದ್ಯಾರ್ಥಿಯಾಗಿರುವ ಪ್ರಭಾತ್ ಯಾದವ್ ಎಂಬುವವರು ತಮ್ಮ ಕೋಣೆಯಲ್ಲಿ ಏಕೆ ಬಾಂಬ್ ತಯಾರಿಸುತ್ತಿದ್ದರು ಎಂಬ ಮಾಹಿತಿ ತಿಳಿದು ಬಂದಿಲ್ಲ ಎಂದು ಸಹಾಯಕ ಪೊಲೀಸ್ ಆಯುಕ್ತ ರಾಜೇಶ್ ಕುಮಾರ್ ಹೇಳಿದ್ದಾರೆ.
ಚಿಂತಾಜನಕ ಸ್ಥಿತಿಯಲ್ಲಿದ್ದ ಅವರನ್ನು ಎಸ್ಆರ್ಎನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆಯಲ್ಲಿ ಮತ್ತೊಬ್ಬ ವಿದ್ಯಾರ್ಥಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದಿದ್ದಾರೆ. ಪ್ರಭಾತ್ ವಿರುದ್ಧ ಶೀಘ್ರದಲ್ಲೇ ಪ್ರಕರಣ ದಾಖಲಿಸಲಾಗುವುದು ಎಂದು ರಾಜೇಶ್ ಮಾಹಿತಿ ನೀಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.