ಮುಖ್ಯ ನ್ಯಾಯಾಧೀಶ ಚಂದ್ರಚೂಡ್ 
ದೇಶ

ಜಿಲ್ಲಾ ನ್ಯಾಯಾಧೀಶನಿಂದ ಲೈಂಗಿಕ ಕಿರುಕುಳ: ಸಾಯಲು ಅನುಮತಿ ಕೋರಿ ಸಿಜೆಐಗೆ ಮಹಿಳಾ ನ್ಯಾಯಾಧೀಶೆ ಪತ್ರ

ಮಹಿಳಾ ಸಿವಿಲ್ ನ್ಯಾಯಾಧೀಶೆಯೊಬ್ಬರು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ(ಸಿಜೆಐ) ಡಿವೈ ಚಂದ್ರಚೂಡ್ ಅವರಿಗೆ ಪತ್ರ ಬರೆದಿದ್ದು, ಕೆಲಸದ ಸ್ಥಳದಲ್ಲಿ ಅವರಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

ಲಖನೌ: ಪ್ರಸ್ತುತ ಉತ್ತರ ಪ್ರದೇಶದ ಬುಂದೇಲ್‌ಖಂಡ್ ಪ್ರದೇಶದ ಬಂದಾ ಜಿಲ್ಲೆಯಲ್ಲಿ ನಿಯೋಜನೆಗೊಂಡಿರುವ ಮಹಿಳಾ ಸಿವಿಲ್ ನ್ಯಾಯಾಧೀಶೆಯೊಬ್ಬರು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ(ಸಿಜೆಐ) ಡಿವೈ ಚಂದ್ರಚೂಡ್ ಅವರಿಗೆ ಪತ್ರ ಬರೆದಿದ್ದು, ಕೆಲಸದ ಸ್ಥಳದಲ್ಲಿ ಅವರಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

ಬಂದಾ ಸಿವಿಲ್ ನ್ಯಾಯಾಧೀಶ ಅರ್ಪಿತಾ ಸಾಹು ಅವರು ಸಿಜೆಐಗೆ ಬರೆದ ಪತ್ರದಲ್ಲಿ, ಬಾರಾಬಂಕಿ ಸಿವಿಲ್ ನ್ಯಾಯಾಲಯದಲ್ಲಿ ಪೋಸ್ಟಿಂಗ್ ಸಮಯದಲ್ಲಿ ಅವರು ಅನುಭವಿಸಿದ ದೈಹಿಕ ಮತ್ತು ಮಾನಸಿಕ ಹಿಂಸೆಯ ವಿವರಗಳನ್ನು ಒಳಗೊಂಡಿದೆ. ಜಿಲ್ಲಾ ನ್ಯಾಯಾಧೀಶರು ತನಗೆ ನೀಡಿದ ಕಿರುಕುಳ ಮತ್ತು ನೋವಿನ ಕಥೆಯನ್ನು ಅವರು ಪತ್ರದಲ್ಲಿ ವಿವರಿಸಿದ್ದಾರೆ.

ಎರಡು ಪುಟಗಳ ಪತ್ರದಲ್ಲಿ, ಅದರ ಪ್ರತಿಯು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ಗೆ ಲಭ್ಯವಾಗಿದ್ದು, ನ್ಯಾಯಾಧೀಶೆ ಸಾಹು ಅವರು, ಜಿಲ್ಲಾ ನ್ಯಾಯಾಧೀಶರ ಅನುಚಿತ ಬೇಡಿಕೆಗಳು ಮತ್ತು ಕಿರುಕುಳದ ನಿದರ್ಶನಗಳನ್ನು ಉಲ್ಲೇಖಿಸಿದ್ದಾರೆ. ಅನುಚಿತವಾಗಿ ವರ್ತಿಸದಂತೆ ಹಲವು ಬಾರಿ ಕೇಳಿಕೊಂಡರೂ ಅದನ್ನು ಲೆಕ್ಕಿಸದೇ ರಾತ್ರಿ ಭೇಟಿಯಾಗುವಂತೆ ಜಿಲ್ಲಾ ನ್ಯಾಯಾಧೀಶರು ಒತ್ತಡ ಹೇರುತ್ತಿದ್ದರು ಎಂದು ಆರೋಪಿಸಿದ್ದಾರೆ.

ಈ ಸಂಬಂಧ ನಾನು ಹಲವು ಬಾರಿ ದೂರುಗಳನ್ನು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಇದರಿಂದ ಬೇಸತ್ತು ತನ್ನ ಜೀವನವನ್ನು ಗೌರವಯುತವಾಗಿ ಕೊನೆಗೊಳಿಸಲು ಅನುಮತಿ ಕೋರಿ ಪತ್ರ ಬರೆಯುತ್ತಿದ್ದೇನೆ ಎಂದು ಅವರು ಸಿಜೆಐಗೆ ಬರೆದ ಪತ್ರದಲ್ಲಿ ಹೇಳಿದ್ದಾರೆ.

ನನಗೆ ಮಿತಿಮೀರಿದ ಲೈಂಗಿಕ ಕಿರುಕುಳ ನೀಡಲಾಗಿದೆ. ನನ್ನನ್ನು ಸಂಪೂರ್ಣ ಕಸದಂತೆ ನಡೆಸಿಕೊಳ್ಳಲಾಗಿದೆ. ನಾನು ಬೇಡದ ಕೀಟದಂತೆ ಅನಿಸುತ್ತಿದೆ. ಇತರರಿಗೆ ನ್ಯಾಯ ಒದಗಿಸಬೇಕೆಂದು ನಾನು ಆಶಿಸಿದ್ದೇನೆ ಎಂದು ನ್ಯಾಯಾಧೀಶೆ ಅರ್ಪಿತಾ ಸಾಹು ಅವರು ತಾವು ಸಿಜೆಐಗೆ ಬರೆದ ಪತ್ರ ತಮ್ಮ ಅಳಲು ತೋಡಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT