ಬಸ್-ಆಟೋ ಅಪಘಾತ 
ದೇಶ

ಕರ್ನಾಟಕದ ಶಬರಿಮಲೆ ಭಕ್ತರಿದ್ದ ಬಸ್​-ಆಟೋ ಮಧ್ಯೆ ಅಪಘಾತ: ಸ್ಥಳದಲ್ಲೇ ಐವರು ಸಾವು

ಕರ್ನಾಟಕದಿಂದ ಬರುತ್ತಿದ್ದ ಶಬರಿಮಲೆ ಯಾತ್ರಾರ್ಥಿಗಳ ಬಸ್‌ಗೆ ಆಟೋ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಹಾಗೂ ಆಟೋದಲ್ಲಿದ್ದ ನಾಲ್ವರು ಪ್ರಯಾಣಿಕರು ಸೇರಿದಂತೆ ಐವರು ಸಾವನ್ನಪ್ಪಿರುವ  ಘಟನೆ ಜಿಲ್ಲೆಯ ಮಂಚೇರಿಯಲ್ಲಿ ಶುಕ್ರವಾರ ಸಂಜೆ ಸುಮಾರು 6 ಗಂಟೆಗೆ ಸಂಭವಿಸಿದೆ.

ಮಲಪ್ಪುರಂ: ಕರ್ನಾಟಕದಿಂದ ಬರುತ್ತಿದ್ದ ಶಬರಿಮಲೆ ಯಾತ್ರಾರ್ಥಿಗಳ ಬಸ್‌ಗೆ ಆಟೋ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಹಾಗೂ ಆಟೋದಲ್ಲಿದ್ದ ನಾಲ್ವರು ಪ್ರಯಾಣಿಕರು ಸೇರಿದಂತೆ ಐವರು ಸಾವನ್ನಪ್ಪಿರುವ  ಘಟನೆ ಜಿಲ್ಲೆಯ ಮಂಚೇರಿಯಲ್ಲಿ ಶುಕ್ರವಾರ ಸಂಜೆ ಸುಮಾರು 6 ಗಂಟೆಗೆ ಸಂಭವಿಸಿದೆ.

ನಿನ್ನೆ ಸಂಜೆ ಆರು ಗಂಟೆಗೆ ಮಂಚೇರಿ-ಅರೀಕೋಡು ರಸ್ತೆಯ ಚೆಟ್ಟಿಅಂಗಡಿ ಎಂಬಲ್ಲಿ ಅಪಘಾತ ನಡೆದಿದೆ. ಶಬರಿಮಲೆ ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಕರ್ನಾಟಕ ಬಸ್ ಮತ್ತು ಆಟೋ ಮಧ್ಯೆ ಅಪಘಾತವಾಗಿದೆ.

ಅಪಘಾತದಲ್ಲಿ ಆಟೋ ರಿಕ್ಷಾ ಚಾಲಕ ಅಬ್ದುಲ್ ಮಜೀದ್ (50) ಮತ್ತು ಪ್ರಯಾಣಿಕರಾದ ಥೆಸ್ಲೀಮಾ (34) ಮುಹ್ಸಿನಾ (32) ಮತ್ತು ಅವರ ಮಕ್ಕಳಾದ ರೈಹಾ ಫಾತಿಮಾ (4) ಮತ್ತು ರಿನ್ಶಾ ಫಾತಿಮಾ (7) ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ದೇಹಗಳನ್ನು ಮಂಚೇರಿ ವೈದ್ಯಕೀಯ ಕಾಲೇಜಿನಲ್ಲಿ ಇರಿಸಲಾಗಿದೆ.

ಅಪಘಾತದ ಬಗ್ಗೆ ಪ್ರತಿಕ್ರಿಯಿಸಿದ ಮಲಪ್ಪುರಂ ಜಿಲ್ಲಾ ಪೊಲೀಸ್ ಮುಖ್ಯಸ್ಥ ಶಶಿಧರನ್ ಎಸ್, ಮೋಟಾರು ವಾಹನ ಇಲಾಖೆಯೊಂದಿಗೆ ಪೊಲೀಸರು ಜಂಟಿ ತನಿಖೆ ನಡೆಸಲಿದ್ದಾರೆ. ಅಪಘಾತ ಸ್ಥಳವನ್ನು ಸರಿಯಾಗಿ ಪರಿಶೀಲಿಸಿ ರಸ್ತೆಯಲ್ಲಿ ಏನಾದರೂ ಸಮಸ್ಯೆಗಳಿವೆಯೇ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತದೆ. ಮುಂದೆ ಇಂತಹ ಅಪಘಾತಗಳು ಸಂಭವಿಸದಂತೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು. ಘಟನೆಯಲ್ಲಿ ಐವರು ಶಬರಿಮಲೆ ಯಾತ್ರಾರ್ಥಿಗಳು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್