ದೇಶ

ಸಂಸತ್ ಭದ್ರತೆ ಉಲ್ಲಂಘನೆ ಹಿಂದೆ ನಿರುದ್ಯೋಗ, ಬೆಲೆ ಏರಿಕೆ ಕಾರಣ: ರಾಹುಲ್ ಗಾಂಧಿ

Srinivas Rao BV

ನವದೆಹಲಿ: ಸಂಸತ್ ಭವನದ ಭದ್ರತೆ ಉಲ್ಲಂಘನೆ ಘಟನೆಗೆ ನಿರುದ್ಯೋಗ, ಬೆಲೆ ಏರಿಕೆ ಕಾರಣ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. 

ಚುನಾವಣಾ ತಯಾರಿ ಸಭೆಯ ಭಾಗವಾಗಿ ವರದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ,  ಯುವಕರಿಗೆ ಉದ್ಯೋಗ ಸಿಗದ ಕಾರಣ ಸಂಸತ್ ಭದ್ರತೆ ಉಲ್ಲಂಘನೆ ಘಟನೆ ನಡೆದಿದೆ. ಪ್ರಧಾನಿ ಮೋದಿ ನೀತಿಗಳಿಂದ ಯುವಕರಿಗೆ ಉದ್ಯೋಗಗಳು ಸಿಗುತ್ತಿಲ್ಲ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ದೇಶದೆಲ್ಲೆಡೆ ಕುದಿಯುತ್ತಿರುವ ನಿರುದ್ಯೋಗ ಸಮಸ್ಯೆ ದೇಶದ ಬಹುದೊಡ್ಡ ಸಮಸ್ಯೆಯಾಗಿದೆ. 2001 ರ ಸಂಸತ್ತಿನಲ್ಲಿ ನಡೆದ ಭಯೋತ್ಪಾದಕ ದಾಳಿಯ ವಾರ್ಷಿಕ ದಿನದಂದು ನಡೆದ ಪ್ರಮುಖ ಭದ್ರತಾ ಉಲ್ಲಂಘನೆಯಲ್ಲಿ, ಶೂನ್ಯ ವೇಳೆಯಲ್ಲಿ ಇಬ್ಬರು ವ್ಯಕ್ತಿಗಳು ಸಾರ್ವಜನಿಕ ಗ್ಯಾಲರಿಯಿಂದ ಲೋಕಸಭೆಯ ಚೇಂಬರ್‌ಗೆ ಜಿಗಿದರು, ಕಲರ್ ಸ್ಮೋಕ್ ಬಿಡುಗಡೆ ಮಾಡಿ ಘೋಷಣೆಗಳನ್ನು ಕೂಗಿದ್ದರು.

ಅದೇ ಸಮಯದಲ್ಲಿ, ಇತರ ಇಬ್ಬರು -- ಅಮೋಲ್ ಶಿಂಧೆ ಮತ್ತು ನೀಲಂ ದೇವಿ - ಸಂಸತ್ತಿನ ಆವರಣದ ಹೊರಗೆ "ತನಾಶಾಹಿ ನಹೀ ಚಲೇಗಿ" ಎಂದು ಕೂಗುತ್ತಾ ಡಬ್ಬಿಗಳಿಂದ ಬಣ್ಣದ ಹೊಗೆಯನ್ನು ಬಿಡುಗಡೆ ಮಾಡಿದರು.

ಭದ್ರತಾ ಲೋಪದ ಬಗ್ಗೆ ಪ್ರತಿಪಕ್ಷಗಳು ಸರ್ಕಾರದಿಂದ ಉತ್ತರವನ್ನು ಕೇಳುತ್ತಿವೆ ಮತ್ತು ಈ ವಿಷಯದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಂಸತ್ತಿನಲ್ಲಿ ಹೇಳಿಕೆ ನೀಡುವಂತೆ ವಿಪಕ್ಷಗಳಿ ಒತ್ತಾಯಿಸಿವೆ.

SCROLL FOR NEXT