ಸುಟ್ಟುಹೋದ ಸ್ಥಿತಿಯಲ್ಲಿ ಪತ್ತೆಯಾಗಿರುವ ಮೊಬೈಲ್ ಫೋನ್. 
ದೇಶ

ಸಂಸತ್ ಭದ್ರತಾ ಲೋಪ: ಆರೋಪಿಗಳ ಮೊಬೈಲ್​ ಫೋನ್​ಗಳು ರಾಜಸ್ಥಾನದಲ್ಲಿ ಪತ್ತೆ!

ಡಿಸೆಂಬರ್​ 13ರಂದು ಸಂಸತ್ತಿನಲ್ಲಿ ನಡೆದ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತನಿಖೆ ಮುಂದುವರಿದಿದೆ. ಈ ನಡುವೆ ಆರೋಪಿಗಳ ಮೊಬೈಲ್​ ಫೋನ್​ಗಳು ರಾಜಸ್ಥಾನದಲ್ಲಿ ಪತ್ತೆಯಾಗಿವೆ.

ನವದೆಹಲಿ: ಡಿಸೆಂಬರ್​ 13ರಂದು ಸಂಸತ್ತಿನಲ್ಲಿ ನಡೆದ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತನಿಖೆ ಮುಂದುವರಿದಿದೆ. ಈ ನಡುವೆ ಆರೋಪಿಗಳ ಮೊಬೈಲ್​ ಫೋನ್​ಗಳು ರಾಜಸ್ಥಾನದಲ್ಲಿ ಪತ್ತೆಯಾಗಿವೆ.

ದೆಹಲಿ ಪೊಲೀಸ್ ಇಲಾಖೆಯ ವಿಶೇಷ ಘಟಕ ಈ ಪ್ರಕರಣದ ತನಿಖೆ ನಡೆಸುತ್ತಿದ್ದು, ಇಂದು (ಡಿ.17) ಬೆಳಗ್ಗೆ ಆರೋಪಿಗಳಿಗೆ ಸಂಬಂಧಿಸಿದ ಸುಟ್ಟ ಸ್ಥಿತಿಯಲ್ಲಿದ್ದ ಮೊಬೈಲ್​ ಫೋನ್​ಗಳ ಬಿಡಿ ಭಾಗಗಳು, ಬಟ್ಟೆಗಳು ಮತ್ತು ಶೂಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಎಲ್ಲಾ ಫೋನ್​ಗಳು ಕೂಡ ಪ್ರಕರಣದ ಮಾಸ್ಟರ್​ ಮೈಂಡ್​ ಲಲಿತ್​ ಝಾ ಬಳಿ ಇತ್ತು ಎಂದು ತಿಳಿದುಬಂದಿದೆ. ಎಲ್ಲ ಫೋನ್​ಗಳನ್ನು ಮುರಿದು ಹಾಕಿ ಬಳಿಕ ಬೆಂಕಿ ಹಚ್ಚಿ ಸುಟ್ಟು ಹಾಕಲಾಗಿದ್ದು, ಎಲ್ಲವೂ ರಾಜಸ್ಥಾನದಲ್ಲಿ ಪತ್ತೆಯಾಗಿವೆ.

ಸರ್ಕಾರಕ್ಕೆ ತಮ್ಮ ಸಂದೇಶ ರವಾನಿಸಲು, ಆಡಳಿತದ ಮೇಲೆ ಪ್ರಭಾವ ಬೀರುವ ಕೆಲವು ಮಾರ್ಗಗಳ ಬಗ್ಗೆ ಐವರು ಆರೋಪಿಗಳು ಫೋನ್ ಗಳಲ್ಲಿ ಚರ್ಚೆ ನಡೆಸಿದ್ದರು ಎಂದು ಹೇಳಲಾಗಿತ್ತು.

ಆರಂಭದಲ್ಲಿ ಆರೋಪಿಗಳು ತಮ್ಮ ದೇಹಕ್ಕೆ ಅಗ್ನಿಶಾಮಕ ಜೆಲ್​ ಲೇಪಿಸಿಕೊಂಡು ಸದನದಲ್ಲೇ ಬೆಂಕಿ ಹಚ್ಚಿಕೊಳ್ಳುವ ಬಗ್ಗೆ ಯೋಜನೆ ರೂಪಿಸಿದ್ದರು. ಆದರೆ, ಭದ್ರತಾ ಕಾರಣ ಮತ್ತು ಹಣದ ಕೊರತೆಯಿಂದ ಇದು ಅಸಾಧ್ಯ ಎಂಬ ಕಾರಣಕ್ಕೆ ಕೈಬಿಟ್ಟಿದ್ದರು. ಸಂಸತ್ತಿನ ಒಳಗೆ ಕರಪತ್ರಗಳನ್ನು ಹಂಚುವ ಬಗ್ಗೆಯೂ ಯೋಚಿಸಿದ್ದರು. ಆದರೆ ಅಂತಿಮವಾಗಿ ಕಲರ್ ಸ್ಪ್ರೇ ಮಾಡುವ ನಿರ್ಧಾರ ಕೈಕೊಂಡಿದ್ದರು.

ಡಿ.13ರಂದು ಲೋಕಸಭಾ ಕಲಾಪದ ಶೂನ್ಯ ವೇಳೆಯಲ್ಲಿ ಆರೋಪಿ ಸಾಗರ್ ಶರ್ಮಾ, ಸಂದರ್ಶಕರ ಗ್ಯಾಲರಿಯಿಂದ ಚೇಂಬರ್‌ಗೆ ಜಿಗಿದ ಆಘಾತಕಾರಿ ದೃಶ್ಯಗಳಿಗೆ ಸಾಕ್ಷಿಯಾಯಿತು.ಹಳದಿ ಹೊಗೆ ಹೊರಸೂಸುವ ಡಬ್ಬಿಯನ್ನು ತೆರೆದು ಸ್ಪೀಕರ್ ಕುರ್ಚಿಯನ್ನು ತಲುಪುವ ಪ್ರಯತ್ನದಲ್ಲಿ ಸಾಗರ್​ ಶರ್ಮ ಡೆಸ್ಕ್‌ನಿಂದ ಡೆಸ್ಕ್‌ಗೆ ಜಿಗಿದದ್ದ. ಆದರೆ, ಕೆಲ ಸಂಸದರು ಆತನನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿದ್ದರು. ಈ ವೇಳೆ ಅಲ್ಲಿಯೇ ಇದ್ದ ಮನೋರಂಜನ್ ಕೂಡ ಹೊಗೆ ಡಬ್ಬಿ ತೆರೆದು ಓಡಲು ಆರಂಭಿಸಿದ್ದ. ಆದರೆ, ಆತನನ್ನು ಕೂಡ ಶೀಘ್ರದಲ್ಲೇ ವಶಕ್ಕೆ ಪಡೆಯಲಾಯಿತು. ಲೋಕಸಭೆಯ ಒಳಗೆ ನಡೆದ ಈ ಆಘಾತಕಾರಿ ಘಟನೆಗೂ ಮುನ್ನ ನೀಲಂ ದೇವಿ ಮತ್ತು ಅಮೋಲ್ ಶಿಂಧೆ ಸಂಸತ್ತಿನ ಹೊರಗೆ ಹೊಗೆ ಡಬ್ಬಿಗಳನ್ನು ಸಿಡಿಸಿದ್ದರು. ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT