ಅರವಿಂದ್ ಕೇಜ್ರಿವಾಲ್ 
ದೇಶ

ಅಬಕಾರಿ ನೀತಿ ಪ್ರಕರಣ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಇಡಿ ಸಮನ್ಸ್

ರದ್ದಾದ ಅಬಕಾರಿ ನೀತಿ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಡಿಸೆಂಬರ್ 21 ರಂದು ವಿಚಾರಣೆಗೆ ಹಾಜರಾಗುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯ ಸೋಮವಾರ ಸಮನ್ಸ್‌ ಜಾರಿ ಮಾಡಿದೆ.

ನವದೆಹಲಿ: ರದ್ದಾದ ಅಬಕಾರಿ ನೀತಿ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಡಿಸೆಂಬರ್ 21 ರಂದು ವಿಚಾರಣೆಗೆ ಹಾಜರಾಗುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯ ಸೋಮವಾರ ಸಮನ್ಸ್‌ ಜಾರಿ ಮಾಡಿದೆ.

ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಇಂದು ಎರಡನೇ ಬಾರಿ ದೆಹಲಿ ಸಿಎಂಗೆ ಸಮನ್ಸ್ ಜಾರಿ ಮಾಡಿದೆ.

ಈ ಹಿಂದೆ ನವೆಂಬರ್ 2 ರಂದು ಕೇಜ್ರಿವಾಲ್‌ ಅವರಿಗೆ ಇಡಿ ಸಮನ್ಸ್ ನೀಡಿತ್ತು. ಆದರೆ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದ ಪೂರ್ವ ನಿಗದಿತ ಕಾರ್ಯಕ್ರಮಗಳನ್ನು ಉಲ್ಲೇಖಿಸಿ ಜಾರಿ ನಿರ್ದೇಶನಾಲಯದ ಮುಂದೆ ವಿಚಾರಣೆಗೆ ಹಾಜರಾಗಲು ದೆಹಲಿ ಸಿಎಂ ನಿರಾಕರಿಸಿದ್ದರು. 

ಈಗ ಮತ್ತೊಮ್ಮೆ ಎಎಪಿಯ ರಾಷ್ಟ್ರೀಯ ಸಂಚಾಲಕ ಕೇಜ್ರಿವಾಲ್ ಅವರಿಗೆ ಇಡಿ ಸಮನ್ಸ್ ನೀಡಿದ್ದು, ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಪ್ರಶ್ನಿಸಲು ಮತ್ತು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಅವರ ಹೇಳಿಕೆ ದಾಖಲಿಸಿಕೊಳ್ಳಲು ಸಮನ್ಸ್ ನೀಡಲಾಗಿದೆ ಎಂದು ಇಡಿ ಅಧಿಕಾರಿಗಳು ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತಕ್ಕೆ ಭೇಟಿ ನೀಡುವಂತೆ ತಾರಿಕ್ ರೆಹಮಾನ್‌ಗೆ ಪ್ರಧಾನಿ ಮೋದಿ ಆಹ್ವಾನ!

AI ಇಂಪ್ಯಾಕ್ಟ್ ಶೃಂಗಸಭೆ ಟಾರ್ಗೆಟ್: ವಿದೇಶಿಗರಿಂದ ದಾಳಿ ಸಾಧ್ಯತೆ, ಗುಪ್ತಚರ ವರದಿ ಬೆನ್ನಲ್ಲೇ G20 ಗ್ರೇಡ್ ಸೈಬರ್ ಭದ್ರತಾ ವ್ಯವಸ್ಥೆ!

T20 World Cup 2026: ಸ್ಕಾಟ್ಲೆಂಡ್ ವಿರುದ್ಧ ನೇಪಾಳಕ್ಕೆ 7 ವಿಕೆಟ್ ಗಳ ಭರ್ಜರಿ ಜಯ!

ಭಾರತದಲ್ಲಿ ವಯಸ್ಸಿನ ಆಧಾರದ ಮೇಲೆ 'ಸಾಮಾಜಿಕ ಜಾಲತಾಣ ನಿಷೇಧ' ಕುರಿತು ಚರ್ಚೆ: ಅಶ್ವಿನಿ ವೈಷ್ಣವ್

'ಕರಾವಳಿ' ಹೂಡಿಕೆ ವಿವಾದ: ಪ್ರಿಯಾಂಕ್ ಖರ್ಗೆ ಸಹಜವಾಗಿ ಹೇಳಿದ್ದಾರೆ, ಆದರೆ ದಕ್ಷಿಣ ಕನ್ನಡ ಬದಲಾಗುತ್ತಿದೆ; ಪರಮೇಶ್ವರ್

SCROLL FOR NEXT