ದೇಶ

ಮನೆ ತೆರವು ಆದೇಶ ಪ್ರಶ್ನಿಸಿ ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದ ಮಹುವಾ

Lingaraj Badiger

ನವದೆಹಲಿ: ಇತ್ತೀಚೆಗೆ ಲೋಕಸಭೆಯಿಂದ ಉಚ್ಛಾಟಿತರಾಗಿರುವ ತೃಣಮೂಲ ಕಾಂಗ್ರೆಸ್ ನಾಯಕಿ ಮಹುವಾ ಮೊಯಿತ್ರಾ ಅವರು ತಮ್ಮ ಸರ್ಕಾರಿ ನಿವಾಸ ತೆರವು ಆದೇಶದ ವಿರುದ್ಧ ಸೋಮವಾರ ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಸಂಸದೆ ಸ್ಥಾನದಿಂದ ಉಚ್ಛಾಟನೆಗೊಂಡ ಬೆನ್ನಲ್ಲೇ ಜನವರಿ 7, 2024 ರೊಳಗೆ ಸರ್ಕಾರಿ ನಿವಾಸ ಖಾಲಿ ಮಾಡುವಂತೆ ಕೇಂದ್ರ ಸರ್ಕಾರ ಮಹುವಾ ಮೊಯಿತ್ರಾ ಅವರಿಗೆ ಸೂಚಿಸಿದೆ.

ಡಿಸೆಂಬರ್ 11 ರಂದು ಮನೆ ಕಾಲಿ ಮಾಡುವಂತೆ ಎಸ್ಟೇಟ್ ನಿರ್ದೇಶನಾಲಯ ಹೊರಡಿಸಿದ ಆದೇಶವನ್ನು ರದ್ದುಗೊಳಿಸಬೇಕು ಅಥವಾ 2024 ರ ಲೋಕಸಭೆಯ ಫಲಿತಾಂಶದವರೆಗೆ ಪರ್ಯಾಯ ವಸತಿ ವ್ಯವಸ್ಥೆ ಮಾಡಬೇಕು ಎಂದು ಕೋರಿ ಮಹುವಾ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಮಂಗಳವಾರ ವಿಚಾರಣೆ ಪಟ್ಟಿ ಮಾಡುವ ಸಾಧ್ಯತೆ ಇದೆ.

ಲೋಕಸಭೆಯಲ್ಲಿ ಪ್ರಶ್ನೆ ಕೇಳುವುದಕ್ಕೆ ಲಂಚ ಪಡೆದ ಆರೋಪದ ಮೇಲೆ ಮಹುವಾ ಮೊಯಿತ್ರಾ ಅವರನ್ನು ಸಂಸದ ಸ್ಥಾನದಿಂದ ಉಚ್ಚಾಟಿಸಲಾಗಿದೆ.

SCROLL FOR NEXT