ದೇಶ

2024ರ ಲೋಕಸಭಾ ಚುನಾವಣೆ: ಮೈತ್ರಿ ಕುರಿತ ಚರ್ಚೆಗೆ ಐವರು ಸದಸ್ಯರ ಸಮಿತಿ ರಚಿಸಿದ ಕಾಂಗ್ರೆಸ್

Ramyashree GN

ನವದೆಹಲಿ: 2024ರಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಇತರ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವ ಕುರಿತಾದ ಚರ್ಚೆ ನಡೆಸಲು ಕಾಂಗ್ರೆಸ್ ಮಂಗಳವಾರ ಐವರು ಸದಸ್ಯರನ್ನೊಳಗೊಂಡ ಸಮಿತಿಯನ್ನು ರಚಿಸಿದೆ.

ಪಕ್ಷದ ಹಿರಿಯ ನಾಯಕ ಮುಕುಲ್ ವಾಸ್ನಿಕ್ ರಾಷ್ಟ್ರೀಯ ಮೈತ್ರಿ ಸಮಿತಿಯ ಸಂಚಾಲಕರಾಗಿದ್ದು, ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಸೇರಿದ್ದಾರೆ.

ಮಾಜಿ ಕೇಂದ್ರ ಸಚಿವ ಸಲ್ಮಾನ್ ಖುರ್ಷಿದ್ ಮತ್ತು ಹಿರಿಯ ನಾಯಕ ಮೋಹನ್ ಪ್ರಕಾಶ್ ಕೂಡ ಸಮಿತಿಯ ಸದಸ್ಯರಾಗಿದ್ದಾರೆ.

'2024 ರ ಸಾರ್ವತ್ರಿಕ ಚುನಾವಣೆಯ ಪೂರ್ವದಲ್ಲಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತಕ್ಷಣದಿಂದಲೇ ಜಾರಿಗೆ ಬರುವಂತೆ ರಾಷ್ಟ್ರೀಯ ಮೈತ್ರಿ ಸಮಿತಿಯನ್ನು ರಚಿಸಿದ್ದಾರೆ' ಎಂದು ಪಕ್ಷವು ಹೇಳಿಕೆಯಲ್ಲಿ ತಿಳಿಸಿದೆ.

ಇತರ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವ ವಿಚಾರಕ್ಕೆ ಸಂಬಂಧಿಸಿದಂತೆ ಈ ಸಮಿತಿಯು ಎಲ್ಲಾ ಆಯಾಮಗಳಿಂದಲೂ ಪರಿಶೀಲಿಸಲಿದೆ ಎಂದು ಮೂಲಗಳು ತಿಳಿಸಿವೆ.

SCROLL FOR NEXT