ರಮಣ್ ಸಿಂಗ್ 
ದೇಶ

ಛತ್ತೀಸ್‌ಗಢ ವಿಧಾನಸಭೆಯ ನೂತನ ಸ್ಪೀಕರ್ ಆಗಿ ಮಾಜಿ ಸಿಎಂ ರಮಣ್ ಸಿಂಗ್ ಆಯ್ಕೆ

ಬಿಜೆಪಿಯ ಹಿರಿಯ ಶಾಸಕ ಹಾಗೂ ಛತ್ತೀಸ್‌ಗಢ ಮಾಜಿ ಮುಖ್ಯಮಂತ್ರಿ ರಮಣ್ ಸಿಂಗ್ ಅವರು ಮಂಗಳವಾರ ರಾಜ್ಯ ವಿಧಾನಸಭೆಯ ಸ್ಪೀಕರ್ ಆಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ರಾಯ್‌ಪುರ: ಬಿಜೆಪಿಯ ಹಿರಿಯ ಶಾಸಕ ಹಾಗೂ ಛತ್ತೀಸ್‌ಗಢ ಮಾಜಿ ಮುಖ್ಯಮಂತ್ರಿ ರಮಣ್ ಸಿಂಗ್ ಅವರು ಮಂಗಳವಾರ ರಾಜ್ಯ ವಿಧಾನಸಭೆಯ ಸ್ಪೀಕರ್ ಆಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಹೊಸ ವಿಧಾನಸಭೆಯ ಮೊದಲ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ಕಲಾಪ ಆರಂಭವಾಗುತ್ತಿದ್ದಂತೆ ಹಂಗಾಮಿ ಸ್ಪೀಕರ್ ರಾಮ್‌ವಿಚಾರ್ ನೇತಮ್ ಅವರು ಬಿಜೆಪಿ ಮತ್ತು ಕಾಂಗ್ರೆಸ್ ಶಾಸಕರು ಹಾಗೂ ಜಿಜಿಪಿಯ ಒಬ್ಬ ಶಾಸಕರಿಗೆ ಪ್ರಮಾಣ ವಚನ ಬೋಧಿಸಿದರು.

ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ, ವಿರೋಧ ಪಕ್ಷದ ನಾಯಕ ಚರಣ್ ದಾಸ್ ಮಹಂತ್, ಉಪಮುಖ್ಯಮಂತ್ರಿಗಳಾದ ಅರುಣ್ ಸಾವೊ ಮತ್ತು ವಿಜಯ್ ಶರ್ಮಾ, ಮಾಜಿ ಸಿಎಂಗಳಾದ ರಮಣ್ ಸಿಂಗ್ ಮತ್ತು ಭೂಪೇಶ್ ಬಘೇಲ್ ಅವರು ಹಂಗಾಮಿ ಸ್ಪೀಕರ್ ಅವರಿಂದ ಪ್ರಮಾಣ ವಚನ ಸ್ವೀಕರಿಸಿದರು.

ಶಾಸಕರ ಪ್ರಮಾಣ ವಚನ ಸ್ವೀಕಾರದ ನಂತರ, ಸಿಎಂ ಸಾಯಿ ಸಿಂಗ್ ಅವರು, ಸ್ಪೀಕರ್ ಆಗಿ ಆಯ್ಕೆ ಮಾಡುವ ಪ್ರಸ್ತಾವನೆಯನ್ನು ಮಂಡಿಸಿದರು. ಅದನ್ನು ಉಪ ಮುಖ್ಯಮಂತ್ರಿ ಸಾವೊ ಅವರು ಅನುಮೋದಿಸಿದರು.

ನಂತರ 71 ವರ್ಷದ ರಮಣ್ ಸಿಂಗ್ ಅವರನ್ನು ವಿಧಾನಸಭೆಯ ಸ್ಪೀಕರ್ ಆಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ಮೃತರ ಸಂಖ್ಯೆ 165ಕ್ಕೆ ಏರಿಕೆ; ನಾಪತ್ತೆಯಾದವರಲ್ಲಿ 133 ಮಂದಿ ಭಾರತೀಯರು

Iran ಸರ್ವೋಚ್ಚ ನಾಯಕ Mojtaba Khamenei ಸತ್ತಿಲ್ಲ, ಗಂಭೀರವಾಗಿ ಗಾಯಗೊಂಡಿದ್ದಾರೆ: ಹಳೇ Vidoe ಬಿಡುಗಡೆ ಬೆನ್ನಲ್ಲೇ ಅಸಲಿಯತ್ತು ಬಿಚ್ಚಿಟ್ಟ Donald Trump..!

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ