ದೇಶ

ಕಲಾಪಕ್ಕೆ ಅಡ್ಡಿ: ಮತ್ತೆ ಇಬ್ಬರು ಸಂಸದರ ಅಮಾನತು, ಒಟ್ಟು ಸಂಖ್ಯೆ 143ಕ್ಕೆ ಏರಿಕೆ

Srinivasamurthy VN

ನವದೆಹಲಿ: ಕಲಾಪಕ್ಕೆ ಅಡ್ಡಿ ಪಡಿಸಿ, ಸದನದಲ್ಲಿ ದುರ್ನಡತೆ ತೋರಿದ ಆರೋಪದ ಮೇರೆಗೆ ಮತ್ತೆ ಇಬ್ಬರು ಸಂಸದರನ್ನು ಅಮಾನತು ಮಾಡಲಾಗಿದ್ದು, ಆ ಮೂಲಕ ಅಮಾನತಗೊಂಡ ಸಂಸದರ ಸಂಖ್ಯೆ 143ಕ್ಕೆ ಏರಿಕೆಯಾಗಿದೆ.

ಇಂದು ಕಲಾಪಕ್ಕೆ ಅಡ್ಡಿ ಪಡಿಸಿ, ಸದನದಲ್ಲಿ ದುರ್ನಡತೆ ತೋರಿದ ಆರೋಪದ ಮೇರೆಗೆ ಕೇರಳ ಕಾಂಗ್ರೆಸ್ ಸಂಸದ ಥಾಮಸ್ ಚಾಜಿಕಡನ್ (ಮಣಿ) ಮತ್ತು ಸಿಪಿಐಎಂ ಸಂಸದ ಎ ಎಂ ಆರಿಫ್ ಅವರನ್ನು ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ ಲೋಕಸಭೆ ಅಮಾನತು ಮಾಡಿದೆ. ಈ ಮೂಲಕ ಅಮಾನತುಗೊಂಡ ಸಂಸದರ ಸಂಖ್ಯೆ 143ಕ್ಕೆ ಏರಿಕೆಯಾಗಿದೆ. ಇದು ಸಂಸತ್ ಕಲಾಪದ ಇತಿಹಾಸದಲ್ಲೇ ಅತ್ಯಧಿಕ ಎಂದು ಹೇಳಲಾಗಿದೆ.

ಕಳೆದ ವಾರದಿಂದ ಲೋಕಸಭೆಯಲ್ಲಿ ಭಾರೀ ಭದ್ರತಾ ಲೋಪದ ಬಗ್ಗೆ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸಂಸತ್ ಭದ್ರತಾ ವೈಫಲ್ಯದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂಸತ್ತಿನಲ್ಲಿ ಭಾಷಣ ಮಾಡಬೇಕು ಎಂದು ಅವರು ಒತ್ತಾಯಿಸುತ್ತಿದ್ದಾರೆ.

SCROLL FOR NEXT