ದೇಶ

ಮೆಟ್ರೋ, ರೈಲು ನಿಲ್ದಾಣದಲ್ಲಿ ಮದ್ಯ ಮಾರಾಟಕ್ಕೆ ಅನುಮತಿ: ಯೋಗಿ ಸರ್ಕಾರದ ವಿರುದ್ಧ ಅಖಿಲೇಶ್ ಯಾದವ್ ವಾಗ್ದಾಳಿ

Lingaraj Badiger

ಲಖನೌ: ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ ಮತ್ತು ಮೆಟ್ರೋ ನಿಲ್ದಾಣಗಳಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಿದ ಬಿಜೆಪಿ ಸರ್ಕಾರದ ವಿರುದ್ಧ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಬುಧವಾರ ತೀವ್ರ ವಾಗ್ದಾಳಿ ನಡೆಸಿದ್ದು, ಮದ್ಯ ಸೇವನೆ ಮತ್ತು ಅಪರಾಧಕ್ಕೆ ನೇರ ಸಂಬಂಧವಿದೆ ಎಂದು ಹೇಳಿದ್ದಾರೆ.

ಆಡಳಿತಾರೂಢ ಭಾರತೀಯ ಜನತಾ ಪಕ್ಷ(ಬಿಜೆಪಿ) ಆಲ್ಕೋಹಾಲ್ ಸೇವನೆಯು "ತುಂಬಾ ಒಳ್ಳೆಯದು" ಎಂದು ನಂಬಿದರೆ, ಅದು ತನ್ನ ಪಕ್ಷದ ಕಚೇರಿಗಳಲ್ಲಿ ಮದ್ಯವನ್ನು ಮಾರಾಟ ಮಾಡಲು ಆರಂಭಿಸಬೇಕು ಎಂದು ಯಾದವ್ ಕಿಡಿ ಕಾರಿದ್ದಾರೆ.

ಮಂಗಳವಾರ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಅಧ್ಯಕ್ಷತೆಯಲ್ಲಿ ನಡೆದ ಉತ್ತರ ಪ್ರದೇಶ ಸಚಿವ ಸಂಪುಟ ಸಭೆಯಲ್ಲಿ, ವಿಮಾನ ನಿಲ್ದಾಣ, ಮೆಟ್ರೋ ಮತ್ತು ರೈಲು ನಿಲ್ದಾಣಗಳಲ್ಲಿ ಹಾಗೂ ಕ್ರೂಸ್ ಹಡಗುಗಳಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡುವ 2024-25 ರ ಅಬಕಾರಿ ನೀತಿಗೆ ಅನುಮತಿ ನೀಡಲಾಗಿದೆ.

ಈ ಕುರಿತು ಹಿಂದಿಯಲ್ಲಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅಖಿಲೇಶ್ ಯಾದವ್, "ರೈಲ್ವೆ ಮತ್ತು ಮೆಟ್ರೋ ನಿಲ್ದಾಣ ಮತ್ತು ಕ್ರೂಸ್ ಹಡಗುಗಳಲ್ಲಿ ಮದ್ಯ ಮಾರಾಟ ಮಾಡುವ ಮೂಲಕ 1 ಟ್ರಿಲಿಯನ್ ಅಮೆರಿಕನ್ ಡಾಲರ್ ಆರ್ಥಿಕತೆ ಸಾಧಿಸಲು ಉತ್ತರ ಪ್ರದೇಶ ಬಿಜೆಪಿ ಸರ್ಕಾರಕ್ಕೆ ಉಳಿದಿರುವ ಏಕೈಕ ಮಾರ್ಗವಾಗಿದೆ" ಎಂದು ಟೀಕಿಸಿದ್ದಾರೆ.

SCROLL FOR NEXT