ಸೋನಿಯಾ ಗಾಂಧಿ - ಮಲ್ಲಿಕಾರ್ಜುನ ಖರ್ಗೆ 
ದೇಶ

ಅಯೋಧ್ಯೆ ರಾಮಮಂದಿರ ಲೋಕಾರ್ಪಣೆ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿಗೆ ಆಹ್ವಾನ

ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆ ಸಮಾರಂಭಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಮತ್ತು ಲೋಕಸಭೆಯ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರಿಗೆ ಆಹ್ವಾನ ನೀಡಲಾಗಿದೆ.

ನವದೆಹಲಿ: ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆ ಸಮಾರಂಭಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಮತ್ತು ಲೋಕಸಭೆಯ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರಿಗೆ ಆಹ್ವಾನ ನೀಡಲಾಗಿದೆ.

ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಅವರಿಗೆ ಆಮಂತ್ರಣಗಳನ್ನು ಕಳುಹಿಸಿದೆ. ಆದರೆ, ಕಾಂಗ್ರೆಸ್ ನಾಯಕರು ಈ ಸಮಾರಂಭದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇಲ್ಲ ಎಂದು ಮೂಲಗಳು ತಿಳಿಸಿವೆ.

ಖರ್ಗೆ, ಸೋನಿಯಾ ಮತ್ತು ಚೌಧರಿ ಅವರಿಗೆ ಪ್ರತ್ಯೇಕವಾಗಿ ಆಹ್ವಾನ ಪತ್ರಿಕೆಗಳನ್ನು ಕಳುಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಮಾಜಿ ಪ್ರಧಾನಿಗಳಾದ ಮನಮೋಹನ್ ಸಿಂಗ್ ಮತ್ತು ಹೆಚ್‌ಡಿ ದೇವೇಗೌಡರಿಗೂ ಕಾರ್ಯಕ್ರಮಕ್ಕೆ ಆಹ್ವಾನ ಬಂದಿದೆ.

ಆಮಂತ್ರಣ ಪತ್ರಗಳನ್ನು ಟ್ರಸ್ಟ್‌ಗೆ ಸಂಬಂಧಿಸಿದವರ ನಿಯೋಗದಿಂದ ತಲುಪಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಮುಂದಿನ ದಿನಗಳಲ್ಲಿ ಇತರೆ ಪ್ರತಿಪಕ್ಷ ನಾಯಕರಿಗೂ ಹೆಚ್ಚಿನ ಆಹ್ವಾನ ಕಳುಹಿಸುವ ಸಾಧ್ಯತೆ ಇದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚು.ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಬೆಂಗಳೂರಿನಲ್ಲಿ 5 ಪ್ರತ್ಯೇಕ ಕಮಿಷನರೇಟ್‌ ಸ್ಥಾಪನೆ; 1,022 ಹೊಸ ಹುದ್ದೆ ಸೃಷ್ಟಿಗೆ ಸಚಿವ ಸಂಪುಟ ಅಸ್ತು

ಹಬ್ಬಗಳ ಹೊತ್ತಲ್ಲೆ ಕಾಂಗ್ರೆಸ್‌ನಿಂದ ಜನತೆಗೆ ಮತ್ತೊಂದು ಶಾಕ್: Nandini ಹಾಲಿನ ದರ ಲೀಟರ್‌ಗೆ 8 ರೂ. ಏರಿಕೆಗೆ ಸಂಪುಟ ಸಮ್ಮತಿ!

ನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್‌ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ