ಪ್ರಾತಿನಿಧಿಕ ಚಿತ್ರ 
ದೇಶ

ಕೊರೊನಾ ವೈರಸ್: 24 ಗಂಟೆಗಳಲ್ಲಿ ದೇಶದಲ್ಲಿ 594 ಮಂದಿಗೆ ಕೋವಿಡ್ ಪಾಸಿಟಿವ್; 21 ಜೆಎನ್.1 ಪ್ರಕರಣ ಪತ್ತೆ

ಕಳೆದ 24 ಗಂಟೆಗಳ ಅವಧಿಯಲ್ಲಿ ಭಾರತದಲ್ಲಿ 594 ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿವೆ. ಈ ಮೂಲಕ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2,669ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿವೆ.

ನವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ ಭಾರತದಲ್ಲಿ 594 ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿವೆ. ಈ ಮೂಲಕ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2,669ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿವೆ.

ಸದ್ಯ ದೇಶದಲ್ಲಿ ವರದಿಯಾಗಿರುವ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 4.50 ಕೋಟಿ (4,50,06,572) ಆಗಿದೆ.

ಇದೇ ವೇಳೆ ಈವರೆಗೆ 5,33,327 ಮಂದಿ ಕೋವಿಡ್‌ನಿಂದ ಸಾವಿಗೀಡಾಗಿದ್ದಾರೆ. 24 ಗಂಟೆಗಳಲ್ಲಿ ಆರು ಜನರು ಮೃತಪಟ್ಟಿದ್ದು, ಈ ಪೈಕಿ ಕೇರಳದ ಮೂವರು, ಕರ್ನಾಟಕದ ಇಬ್ಬರು ಮತ್ತು ಪಂಜಾಬ್‌ನ ಒಬ್ಬರು ಸೋಂಕಿಗೆ ಬಲಿಯಾಗಿದ್ದಾರೆ ಎಂದು ಬೆಳಿಗ್ಗೆ 8 ಗಂಟೆಗೆ ಲಭ್ಯವಾದ ಅಂಕಿಅಂಶಗಳು ತಿಳಿಸಿವೆ.

ಕೋವಿಡ್‌ನಿಂದ ಈವರೆಗೆ ಚೇತರಿಸಿಕೊಂಡವರ ಸಂಖ್ಯೆ 4,44,70,576ಕ್ಕೆ ಏರಿಕೆಯಾಗಿದೆ.

ಆರೋಗ್ಯ ಸಚಿವಾಲಯದ ವೆಬ್‌ಸೈಟ್ ಪ್ರಕಾರ, ರಾಷ್ಟ್ರೀಯ ಕೋವಿಡ್ ಚೇತರಿಕೆ ದರವು ಶೇ 98.81 ರಷ್ಟಿದ್ದು, ಮರಣ ಪ್ರಮಾಣ ಶೇ 1. 19 ರಷ್ಟಿದೆ.

ದೇಶದಲ್ಲಿ ಇದುವರೆಗೆ 220.67 ಕೋಟಿ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.

ಭಾರತದಲ್ಲಿ 21 ಜೆಎನ್.1 ಪ್ರಕರಣ ಪತ್ತೆ

ಕೊರೊನಾವೈರಸ್‌ ಸೋಂಕಿನ ಉಪತಳಿ JN.1 ರ 21 ಪ್ರಕರಣಗಳು ದೇಶದಾದ್ಯಂತ ಪತ್ತೆಯಾಗಿವೆ ಎಂದು ನೀತಿ ಆಯೋಗದ ಸದಸ್ಯ (ಆರೋಗ್ಯ) ಡಾ. ವಿಕೆ ಪಾಲ್ ತಿಳಿಸಿದ್ದಾರೆ. ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಜಿನೋಮ್‌ ಸೀಕ್ವೆನ್ಸಿಂಗ್‌ನಲ್ಲಿ ತೊಡಗಿಕೊಂಡಿದೆ ಎಂದು ಹೇಳಿದರು. 

ಪತ್ತೆಯಾಗಿರುವ 21 ಪ್ರಕರಣಗಳ ಪೈಕಿ ಗೋವಾದಲ್ಲಿ 19 ಮತ್ತು ಕೇರಳ ಮತ್ತು ಮಹಾರಾಷ್ಟ್ರದಲ್ಲಿ ತಲಾ ಒಂದು ಪ್ರಕರಣಗಳು ಪತ್ತೆಯಾಗಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT