ದೇಶ

ರಾಜ್ಯಸಭೆಯಲ್ಲೂ ಟೆಲಿಕಾಂ ಮಸೂದೆ ಅಂಗೀಕಾರ

Lingaraj Badiger

ನವದೆಹಲಿ: ದೂರಸಂಪರ್ಕ ವಲಯವನ್ನು ನಿಯಂತ್ರಿಸುವ 138 ವರ್ಷಗಳಷ್ಟು ಹಳೆಯದಾದ ಭಾರತೀಯ ಟೆಲಿಗ್ರಾಫ್ ಕಾಯಿದೆಯನ್ನು ಬದಲಾಯಿಸಲು ಕೇಂದ್ರ ಸರ್ಕಾರ ಮಂಡಿಸಿದ್ದ ದೂರಸಂಪರ್ಕ ಮಸೂದೆ 2023 ಅನ್ನು ಗುರುವಾರ ರಾಜ್ಯಸಭೆಯಲ್ಲಿ ಅಂಗೀಕರಿಸಲಾಗಿದೆ.

ನಿನ್ನೆ ಲೋಕಸಭೆಯಲ್ಲಿ ಅಂಗೀಕಾರಗೊಂಡಿದ್ದ ದೂರಸಂಪರ್ಕ ಮಸೂದೆ, 2023 ಅನ್ನು ಇಂದು ಧ್ವನಿ ಮತದ ಮೂಲಕ ರಾಜ್ಯಸಭೆಯಲ್ಲಿ ಅಂಗೀಕರಿಸಲಾಗಿದೆ.

ಕೇಂದ್ರ ಐಟಿ ಸಚಿವ ಅಶ್ವಿನಿ ವೈಷ್ಣವ್ ಅವರು ಸೋಮವಾರ ಲೋಕಸಭೆಯಲ್ಲಿ ಟೆಲಿಕಾಂ ಮಸೂದೆಯನ್ನು ಮಂಡಿಸಿದ್ದರು ಮತ್ತು ಈ ಮಸೂದೆಗ ಕಳೆದ ಆಗಸ್ಟ್‌ನಲ್ಲಿ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿತ್ತು.

ಪ್ರಸ್ತಾವಿತ ಮಸೂದೆಯು ರಾಷ್ಟ್ರೀಯ ಭದ್ರತೆಯನ್ನು ಉಲ್ಲೇಖಿಸಿ, ಯಾವುದೇ ದೂರಸಂಪರ್ಕ ಸೇವೆಗಳನ್ನು ಸ್ಥಗಿತಗೊಳಿಸಬಹುದು, ನೆಟ್‌ವರ್ಕ್‌ಗಳು ಅಥವಾ ಅವುಗಳ ಘಟಕಗಳನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಲು, ನಿರ್ವಹಿಸಲು ಅಥವಾ ಅಮಾನತುಗೊಳಿಸಲು ಕೇಂದ್ರ ಸರ್ಕಾರಕ್ಕೆ ಅಧಿಕಾರ ನೀಡುತ್ತದೆ.

ಅದೇ ರೀತಿ, ಪ್ರಸ್ತಾವಿತ ಶಾಸನವು ನಿರ್ದಿಷ್ಟ ವ್ಯಕ್ತಿಗಳಿಂದ ಕಳುಹಿಸಲಾದ ಅಥವಾ ಸ್ವೀಕರಿಸಿದ ನಿರ್ದಿಷ್ಟ ದೂರಸಂಪರ್ಕ ಸಾಧನಗಳ ಮೂಲಕ ಅಥವಾ ನಿರ್ದಿಷ್ಟ ವಿಷಯಗಳಿಗೆ ಸಂಬಂಧಿಸಿದ ಕೆಲವು ಸಂದೇಶಗಳನ್ನು "ಭಾರತದ ಸಾರ್ವಭೌಮತೆ, ಸಮಗ್ರತೆ ಮತ್ತು ರಾಷ್ಟ್ರೀಯ ಭದ್ರತೆಗೆ ಧಕ್ಕೆ ತರುವಂತೆ ಇರಬಾರದು" ಎಂದು ಸೂಚನೆ ನೀಡುವ ಅಧಿಕಾರವನ್ನು ಸರ್ಕಾರಕ್ಕೆ ನೀಡುತ್ತದೆ".

SCROLL FOR NEXT