ಡಿಕೆ ಸುರೇಶ್ 
ದೇಶ

ಇಂದು ಡಿಕೆ ಸುರೇಶ್ ಸೇರಿ ಮೂವರು ಸಂಸದರ ಅಮಾನತು: ಸಸ್ಪೆಂಡ್ ಆದವರ ಸಂಖ್ಯೆ 146ಕ್ಕೆ ಏರಿಕೆ

ಸಂಸತ್ ಭದ್ರತಾ ಲೋಪ ಖಂಡಿಸಿ ಕಲಾಪಕ್ಕೆ ಅಡ್ಡಿಪಡಿಸಿದ ಮೂವರು ಕಾಂಗ್ರೆಸ್ ಸಂಸದರನ್ನು ಗುರುವಾರ ಚಳಿಗಾಲದ ಅಧಿವೇಶನದ ಉಳಿದ ಭಾಗಕ್ಕೆ ಲೋಕಸಭೆಯಿಂದ ಅಮಾನತುಗೊಳಿಸಲಾಗಿದ್ದು, ಇದರೊಂದಿಗೆ ಅಮಾನತುಗೊಂಡ ಸಂಸದರ ಸಂಖ್ಯೆ 146ಕ್ಕೆ ಏರಿಸಲಾಗಿದೆ.

ನವದೆಹಲಿ: ಸಂಸತ್ ಭದ್ರತಾ ಲೋಪ ಖಂಡಿಸಿ ಕಲಾಪಕ್ಕೆ ಅಡ್ಡಿಪಡಿಸಿದ ಮೂವರು ಕಾಂಗ್ರೆಸ್ ಸಂಸದರನ್ನು ಗುರುವಾರ ಚಳಿಗಾಲದ ಅಧಿವೇಶನದ ಉಳಿದ ಭಾಗಕ್ಕೆ ಲೋಕಸಭೆಯಿಂದ ಅಮಾನತುಗೊಳಿಸಲಾಗಿದ್ದು, ಇದರೊಂದಿಗೆ ಅಮಾನತುಗೊಂಡ ಸಂಸದರ ಸಂಖ್ಯೆ 146ಕ್ಕೆ ಏರಿಸಲಾಗಿದೆ.

ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು ಡಿ ಕೆ ಸುರೇಶ್, ದೀಪಕ್ ಬೈಜ್ ಮತ್ತು ನಕುಲ್ ನಾಥ್ ಅವರನ್ನು ಅಮಾನತುಗೊಳಿಸುವ ಪ್ರಸ್ತಾಪ ಮಂಡಿಸಿದರು.

ದೀಪಕ್ ಬೈಜ್, ಡಿ ಕೆ ಸುರೇಶ್, ನಕುಲ್ ನಾಥ್ ಅವರು ಸದನದ ಬಾವಿಗೆ ಇಳಿದು ಸದನದಲ್ಲಿ ಫಲಕಗಳನ್ನು ಪ್ರದರ್ಶಿಸುವ ಮೂಲಕ ಅಶಿಸ್ತಿನಿಂದ ವರ್ತಿಸಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಈ ಸದನ ಅವರನ್ನು ಸದನದಿಂದ ಅಮಾನತುಗೊಳಿಸಬಹುದು ಎಂದು ಜೋಶಿ ಹೇಳಿದರು.

ಇದಕ್ಕೂ ಮುನ್ನ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು, ಸದನದಲ್ಲಿ ಪ್ರತಿಭಟನೆ ನಡೆಸದಂತೆ ಈ ಮೂವರು ಸಂಸದರಿಗೆ ಎಚ್ಚರಿಕೆ ನೀಡಿದ್ದರು.

ಇಂದು ಬೆಳಗ್ಗೆ ಸದನ ಆರಂಭವಾಗುತ್ತಿದ್ದಂತೆ, ಹೆಚ್ಚಿನ ಸಂಖ್ಯೆಯ ಸಂಸದರನ್ನು ಅಮಾನತುಗೊಳಿಸಿದ್ದನ್ನು ವಿರೋಧಿಸಿ ಪ್ರತಿಪಕ್ಷ ಸಂಸದರು ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದರು ಮತ್ತು ಸಂಸತ್ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಯ ಬಗ್ಗೆ ಚರ್ಚೆಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು.

ಇದುವರೆಗೆ ಲೋಕಸಭೆಯಿಂದ 100 ಸಂಸದರನ್ನು ಹಾಗೂ ರಾಜ್ಯಸಭೆಯಿಂದ 46 ಸಂಸದರನ್ನು ಅಮಾನತುಗೊಳಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಮೊಜ್ತಾಬಾ ಖಮೇನಿ ಜೀವಂತವಾಗಿ ಇದ್ದಾರೋ ಅಥವಾ ಇಲ್ಲವೋ? ಆತಂಕದ ಹಳೆಯ Video ಬಿಡುಗಡೆ ಮಾಡಿದ ಇರಾನ್!