ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ 
ದೇಶ

ಗಣರಾಜ್ಯೋತ್ಸವಕ್ಕೆ ಫ್ರಾನ್ಸ್ ಅಧ್ಯಕ್ಷ  ಇಮಾನ್ಯುಯಲ್ ಮ್ಯಾಕ್ರನ್ ಭಾರತದ ಮುಖ್ಯ ಅತಿಥಿ

ಮಹತ್ವದ ಬೆಳವಣಿಗೆಯಲ್ಲಿ ಈ ಬಾರಿಯ ಗಣರಾಜ್ಯೋತ್ವವ ಕಾರ್ಯಕ್ರಮಕ್ಕೆ ಭಾರತದ ಮುಖ್ಯ ಅತಿಥಿಯಾಗಿ ಫ್ರಾನ್ಸ್ ಅಧ್ಯಕ್ಷ ಇಮಾನ್ಯುಯಲ್ ಮ್ಯಾಕ್ರನ್ ರನ್ನು ಆಹ್ವಾನಿಸಲು ಭಾರತ ಸರ್ಕಾರ ನಿರ್ಧರಿಸಿದೆ ಎಂದು ಹೇಳಲಾಗಿದೆ.

ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಈ ಬಾರಿಯ ಗಣರಾಜ್ಯೋತ್ವವ ಕಾರ್ಯಕ್ರಮಕ್ಕೆ ಭಾರತದ ಮುಖ್ಯ ಅತಿಥಿಯಾಗಿ ಫ್ರಾನ್ಸ್ ಅಧ್ಯಕ್ಷ ಇಮಾನ್ಯುಯಲ್ ಮ್ಯಾಕ್ರನ್ ರನ್ನು ಆಹ್ವಾನಿಸಲು ಭಾರತ ಸರ್ಕಾರ ನಿರ್ಧರಿಸಿದೆ ಎಂದು ಹೇಳಲಾಗಿದೆ.

ಈ ಬಾರಿಯ ಗಣರಾಜ್ಯೋತ್ಸವದಲ್ಲಿ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಜನವರಿ 26 ರಂದು ನಡೆಯಲಿರುವ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಆಗಮಿಸಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಮೊದಲು ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರನ್ನು ಗಣ ರಾಜ್ಯೋತ್ಸವದ ಮುಖ್ಯ ಅತಿಥಿಯಾಗುವಂತೆ ಆಹ್ವಾನ ನೀಡಲಾಗಿತ್ತು. ಆದರೆ, ಅವರು ಜನವರಿಯಲ್ಲಿ ಭಾರತಕ್ಕೆ ಪ್ರಯಾಣಿಸಲು ಸಾಧ್ಯವಿಲ್ಲ ಎಂದು ಅಸಹಾಯಕತೆ ವ್ಯಕ್ತಪಡಿಸಿದ ನಂತರ ಫ್ರಾನ್ಸ್ ಅಧ್ಯಕ್ಷರಿಗೆ ಮನವಿ ಮಾಡಿಕೊಳ್ಳಲಾಗಿತ್ತು. ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಅವರನ್ನು ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿದ್ದು, ಅವರೇ ಈ ಬಾರಿ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.

ಭಾರತದ ಜೊತೆ ಫ್ರಾನ್ಸ್ ರಾಫೆಲ್ ಯುದ್ಧ ವಿಮಾನ ಒಪ್ಪಂದ
ಅಂದಹಾಗೆ ಫ್ರಾನ್ಸ್ ಜೊತೆ ಭಾರತ ಸಾಕಷ್ಟು ಯೋಜನೆಗಳಲ್ಲಿ ಒಪ್ಪಂದಗಳನ್ನು ಮಾಡಿಕೊಂಡಿದ್ದು, ಈ ಪೈಕಿ ಗೇಮ್ ಚೇಂಜರ್ ಎಂದೇ ಪರಿಗಣಿಸಲಾಗುತ್ತಿರುವ ರಾಫೆಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಕೂಡ ಸೇರಿದೆ. ಭಾರತ ಮತ್ತು ಫ್ರಾನ್ಸ್ ದೇಶಗಳು 36 ರಾಫೆಲ್ ಯುದ್ಧ ವಿಮಾನ (Rafale Aircraft ) ವ್ಯವಹಾರ ಒಪ್ಪಂದಕ್ಕೆ 23 ಸೆಪ್ಟಂಬರ್ 2016ರಂದು ಸಹಿ ಹಾಕಿದ್ದವು.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಫ್ರಾನ್ಸ್ ಹಾಗೂ ಯುಎಇ ಪ್ರವಾಸಕ್ಕೆ ಹೊರಟ ಸಂದರ್ಭದಲ್ಲಿ ಭಾರತದ ರಕ್ಷಣಾ ಸಚಿವಾಲಯ ಫ್ರಾನ್ಸ್‌ನಿಂದ ಹೊಸದಾಗಿ 26 ರಫೇಲ್ ಯುದ್ಧ ವಿಮಾನ ಖರೀದಿ ಹಾಗೂ 3 ಸ್ಕಾರ್ಪಿಯನ್ ದರ್ಜೆಯ ಸಾಂಪ್ರದಾಯಿಕ ಸಬ್‌ಮೆರಿನ್‌ಗಳನ್ನು ಖರೀದಿ ಮಾಡಲು ಸಮ್ಮತಿ ಸೂಚಿಸಿತ್ತು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT