Covid-19: ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಏರಿಕೆ; 24 ಗಂಟೆಗಳಲ್ಲಿ 640 ಹೊಸ ಪ್ರಕರಣ
ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 640 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 2,997 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿದೆ.
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 640 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 2,997 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿದೆ.
ಸದ್ಯ ಈವರೆಗೆ 4.50 ಕೋಟಿ (4,50,07,212) ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿದೆ.
ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ಕೇರಳದಲ್ಲಿ ಮತ್ತೊಂದು ಸಾವು ವರದಿಯಾಗಿದ್ದು, ದೇಶದಲ್ಲಿ ಈವರೆಗೆ ಸಾವಿಗೀಡಾದವರ ಸಂಖ್ಯೆ 5,33,328ಕ್ಕೆ ಏರಿಕೆಯಾಗಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.
ಸದ್ಯ ಈವರೆಗೆ ದೇಶದಲ್ಲಿ 4,44,70,887 ಮಂದಿ ಕೋವಿಡ್‌ನಿಂದ ಚೇತರಿಸಿಕೊಂಡಿದ್ದಾರೆ.
ಆರೋಗ್ಯ ಸಚಿವಾಲಯದ ವೆಬ್‌ಸೈಟ್ ಪ್ರಕಾರ, ಒಟ್ಟು ಸೋಂಕು ಪ್ರಕರಣಗಳ ಪೈಕಿ ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.81 ರಷ್ಟಿದೆ. ಮರಣ ಪ್ರಮಾಣ ಶೇ 1.19 ರಷ್ಟಿದೆ.
ದೇಶದಲ್ಲಿ ಇದುವರೆಗೆ 220.67 ಕೋಟಿ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ನೀಡಲಾಗಿದೆ.