ಸಂಗ್ರಹ ಚಿತ್ರ 
ದೇಶ

ರಜೌರಿಯಲ್ಲಿ ಸೇನಾ ವಾಹನದ ಮೇಲೆ ಉಗ್ರರ ದಾಳಿ: ಮತ್ತೋರ್ವ ಯೋಧ ಬಲಿ, ಹುತಾತ್ಮ ಸೈನಿಕರ ಸಂಖ್ಯೆ 4ಕ್ಕೆ ಏರಿಕೆ

ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಗುರುವಾರ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮತ್ತೋರ್ವ ಯೋಧ ಹುತಾತ್ಮರಾಗಿದ್ದು. ಇದರೊಂದಿಗೆ ಹುತಾತ್ಮ ಯೋಧರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.

ಪೂಂಚ್ (ಜಮ್ಮು): ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಗುರುವಾರ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮತ್ತೋರ್ವ ಯೋಧ ಹುತಾತ್ಮರಾಗಿದ್ದು. ಇದರೊಂದಿಗೆ ಹುತಾತ್ಮ ಯೋಧರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.

ಗುರುವಾರ ಮಧ್ಯಾಹ್ನ 3.45ಕ್ಕೆ ರಜೌರಿಯ ಪೂಂಚ್ ನವ್ವಿ ಥಾನಮಂಡಿಯಲ್ಲಿ ಹೋಗುತ್ತಿದ್ದ ಎರಡು ಸೇನಾ ವಾಹನಗಳ ಮೇಲೆ ಭಯೋತ್ಪಾದಕರು ಹೊಂಚು ಹಾಕಿ ದಾಳಿ ನಡೆಸಿದ್ದರು. ಭಯೋತ್ಪಾದಕರ ಏಕಾಏಕಿ ದಾಳಿಗೆ ಯೋಧರು ತಕ್ಷಣವೇ ಪ್ರತ್ಯುತ್ತರ ನೀಡಿದರು. ಕೂಡಲೇ ಸ್ಥಳದಲ್ಲಿ  ಎನ್‌ಕೌಂಟರ್ ಆರಂಭವಾಗಿತ್ತು.

ಈ ವೇಳೆ ನಡೆದ ಚಕಮಕಿಯಲ್ಲಿ ಮೂವರು ಯೋಧರು ಪ್ರಾಣ ಕಳೆದುಕೊಂಡು, ಇಬ್ಬರು ಗಾಯಗೊಂಡಿದ್ದರು. ಇದೀಗ ಮತ್ತೋರ್ವ ಯೋಧ ಹುತಾತ್ಮರಾಗಿದ್ದಾರೆಂದು ಸೇನಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರಿದಿದೆ ಎಂದು ತಿಳಿದುಬಂದಿದೆ.

ನವೆಂಬ್ 22 ರಂದು ಉಗ್ರರು ಹಾಗೂ ಸೈನಿಕರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಕರ್ನಾಟಕ ಯೋಧ ಸೇರಿದಂತೆ ಐವರು ಯೋಧರು ಹುತಾತ್ಮರಾಗಿದ್ದರು. ಇದಕ್ಕೂ ಮೊದಲು ಸೆಪ್ಟೆಂಬರ್ ನಲ್ಲಿ ನಡೆದ ದಾಳಿಗೆ ಇಬ್ಬರು ಯೋಧರು ಹುತಾತ್ಮರಾಗಿದ್ದರು. ಈ ವರ್ಷ ರಜೌರಿ, ಪೂಂಚ್ ಮತ್ತು ರೆಸಾಯ್ ಜಿಲ್ಲೆಗಳಲ್ಲಿ ಯೋಧರು ಮತ್ತು ಉಗ್ರರ ನಡುವಿನ ಮುಖಾಮುಖಿ, ಉಗ್ರರ ದಾಳಿಯಲ್ಲಿ 54 ಜನರು ಸಾವನ್ನಪ್ಪಿದ್ದಾರೆ. ಈ ಪೈಕಿ 19 ಯೋಧರು. 28 ಮಂದಿ ಉಗ್ರರು ಹಾಗೂ 7 ನಾಗರೀಕರು ಸೇರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?