ಪ್ರಾತಿನಿಧಿಕ ಚಿತ್ರ 
ದೇಶ

Covid-19: ದೇಶದಲ್ಲಿಂದು 752 ಮಂದಿಗೆ ಕೋವಿಡ್ ಪಾಸಿಟಿವ್, ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆ

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 752 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಮೇ 21 ರಿಂದೀಚೆಗೆ ಪತ್ತೆಯಾದ ಅತಿ ಹೆಚ್ಚು ಪ್ರಕರಣಗಳಾಗಿವೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 3,420ಕ್ಕೆ ಏರಿಕೆಯಾಗಿದೆ ಎಂದು ಶನಿವಾರ ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳು ತಿಳಿಸಿವೆ.

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 752 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಮೇ 21 ರಿಂದೀಚೆಗೆ ಪತ್ತೆಯಾದ ಅತಿ ಹೆಚ್ಚು ಪ್ರಕರಣಗಳಾಗಿವೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 3,420ಕ್ಕೆ ಏರಿಕೆಯಾಗಿದೆ ಎಂದು ಶನಿವಾರ ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳು ತಿಳಿಸಿವೆ.

ಇದೇ ಅವಧಿಯಲ್ಲಿ ದೇಶದಾದ್ಯಂತ ನಾಲ್ವರು ಸೋಂಕಿನಿಂದ ಪ್ರಾಣಕಳೆದುಕೊಂಡಿದ್ದು, ಈವರೆಗೆ ಸಾವಿಗೀಡಾದವರ ಸಂಖ್ಯೆ 5,33,332 ಕ್ಕೆ ಏರಿಕೆಯಾಗಿದೆ. ಕೇರಳದಿಂದ ಇಬ್ಬರು, ರಾಜಸ್ಥಾನ ಮತ್ತು ಕರ್ನಾಟಕದಲ್ಲಿ ತಲಾ ಒಬ್ಬರು 24 ಗಂಟೆಗಳ ಅವಧಿಯಲ್ಲಿ ಮೃತಪಟ್ಟಿದ್ದಾರೆ. 

ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ದೇಶದಲ್ಲಿ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 4.50 ಕೋಟಿ (4,50,07,964) ಕ್ಕೆ ಏರಿಕೆಯಾಗಿದೆ.

ಆರೋಗ್ಯ ಸಚಿವಾಲಯದ ವೆಬ್‌ಸೈಟ್‌ನಲ್ಲಿ ನೀಡಿರುವ ಮಾಹಿತಿ ಪ್ರಕಾರ, ಈವರೆಗೂ ದೇಶದಲ್ಲಿ 4,44,71,212 ಮಂದಿ ಕೋವಿಡ್‌ನಿಂದ ಚೇತರಿಸಿಕೊಂಡಿದ್ದಾರೆ. ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.81 ರಷ್ಟಿದೆ. ಮರಣ ಪ್ರಮಾಣ ಶೇ 1.19 ರಷ್ಟಿದೆ.

ದೇಶದಲ್ಲಿ ಇದುವರೆಗೆ 220.67 ಕೋಟಿಗೂ ಅಧಿಕ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!