ಜಾದವ್‌ಪುರ ವಿಶ್ವವಿದ್ಯಾಲಯ 
ದೇಶ

'ಅನಧಿಕೃತ' ಘಟಿಕೋತ್ಸವ: ಜಾದವ್‌ಪುರ ವಿಶ್ವವಿದ್ಯಾಲಯದ ಹಂಗಾಮಿ ಉಪಕುಲಪತಿಯನ್ನು ಕಿತ್ತೆಸೆದ ಬಂಗಾಳ ರಾಜ್ಯಪಾಲರು!

ಪಶ್ಚಿಮ ಬಂಗಾಳದ ರಾಜ್ಯಪಾಲ ಸಿವಿ ಆನಂದ್ ಬೋಸ್ ಅವರು ಶನಿವಾರ ಸಂಜೆ ಜಾದವ್‌ಪುರ ವಿಶ್ವವಿದ್ಯಾಲಯದ ಹಂಗಾಮಿ ಉಪಕುಲಪತಿ ಬುದ್ಧದೇವ್ ಸಾವೊ ಅವರನ್ನು ಅಶಿಸ್ತಿನ ಆಧಾರದ ಮೇಲೆ ಹುದ್ದೆಯಿಂದ ತೆಗೆದುಹಾಕಿದ್ದಾರೆ.

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜ್ಯಪಾಲ ಸಿವಿ ಆನಂದ್ ಬೋಸ್ ಅವರು ಶನಿವಾರ ಸಂಜೆ ಜಾದವ್‌ಪುರ ವಿಶ್ವವಿದ್ಯಾಲಯದ ಹಂಗಾಮಿ ಉಪಕುಲಪತಿ ಬುದ್ಧದೇವ್ ಸಾವೊ ಅವರನ್ನು ಅಶಿಸ್ತಿನ ಆಧಾರದ ಮೇಲೆ ಹುದ್ದೆಯಿಂದ ತೆಗೆದುಹಾಕಿದ್ದಾರೆ. 

ಭಾನುವಾರ ನಡೆಯಲಿದ್ದು ವಿಶ್ವವಿದ್ಯಾಲಯದ ಘಟಿಕೋತ್ಸವದ ಮುನ್ನಾದಿನದಂದು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ರಾಜಭವನದ ಅಧಿಕಾರಿಯೊಬ್ಬರು ಈ ಮಾಹಿತಿ ನೀಡಿದ್ದಾರೆ. ಪ್ರೊಫೆಸರ್ ಬುದ್ಧದೇಬ್ ಸಾವೊ ಅವರಿಗೆ 2023ರ ಆಗಸ್ಟ್ 17ರ ಆದೇಶ ಸಂಖ್ಯೆ CU/WB/22/23 ರ ಮುಂದಿನ ಆದೇಶದವರೆಗೆ ಜಾದವ್‌ಪುರ ವಿಶ್ವವಿದ್ಯಾಲಯದ ಉಪಕುಲಪತಿಗಳ ಕಚೇರಿಯ ಅಧಿಕಾರಗಳನ್ನು ಚಲಾಯಿಸುವ ಮತ್ತು ಕರ್ತವ್ಯಗಳನ್ನು ನಿರ್ವಹಿಸುವ ಜವಾಬ್ದಾರಿಯನ್ನು ಹಿಂಪಡೆಯಲಾಗಿದೆ. ಈ ಆದೇಶವು ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರತಿ ವರ್ಷ ಡಿಸೆಂಬರ್ 24ರಂದು ನಡೆಯುತ್ತಿದ್ದ ಘಟಿಕೋತ್ಸವ ಸಮಾರಂಭದಲ್ಲಿ ಈ ಬಾರಿ ಅನಿಶ್ಚಿತತೆಯ ವಾತಾವರಣ ನಿರ್ಮಾಣವಾಗಿದ್ದು, ಕಾರ್ಯಕ್ರಮದ ಆತಿಥ್ಯ ವಹಿಸಲು ನಿರ್ಣಾಯಕವಾಗಿರುವ ನ್ಯಾಯಾಲಯದ ಸಭೆ ನಡೆಸಲು ವಿಶ್ವವಿದ್ಯಾಲಯಕ್ಕೆ ರಾಜ್ಯಪಾಲರು ಅವಕಾಶ ನೀಡಲಿಲ್ಲ. 'ಅನಧಿಕೃತ' ಘಟಿಕೋತ್ಸವಕ್ಕೆ ತಮ್ಮ ಪಾಲಕರು ಕಷ್ಟಪಟ್ಟು ದುಡಿದ ಹಣವನ್ನು ವ್ಯಯಿಸಬೇಕಾಗಿದೆ ಎಂದು ವಿದ್ಯಾರ್ಥಿಗಳು ದೂರಿದ್ದಾರೆ ಎಂದು ಗವರ್ನರ್ ಬೋಸ್ ಹೇಳಿದ್ದಾರೆ.

ಈ ವರ್ಷದ ಆರಂಭದಲ್ಲಿ, ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾನಿಲಯವು ಮೊದಲ ವರ್ಷದ ವಿದ್ಯಾರ್ಥಿ ಸ್ವರ್ಣದೀಪ್ ಕುಂದು ವಿಶ್ವವಿದ್ಯಾಲಯದ ಹಾಸ್ಟೆಲ್ ಬಾಲ್ಕನಿಯಿಂದ ಬಿದ್ದು ಸಾವನ್ನಪ್ಪಿದ್ದು ಹೆಚ್ಚು ಸುದ್ದಿಯಾಗಿತ್ತು. ರ್ಯಾಗಿಂಗ್‌ಗೆ ಬಲಿಯಾಗಿದ್ದಾನೆ ಎಂದು ಅವರ ಕುಟುಂಬದವರು ಆರೋಪಿಸಿದ್ದರು. ಈ ಘಟನೆಯನ್ನು ಖಂಡಿಸಿ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

SCROLL FOR NEXT