ಭಜನ್ ಲಾಲ್ ಶರ್ಮಾ 
ದೇಶ

ಹಿಂದಿನ ಸರ್ಕಾರಗಳ ಎಲ್ಲಾ ಯೋಜನೆಗಳೂ ಮುಂದುವರೆಯಲಿವೆ: ರಾಜಸ್ಥಾನ ಸಿಎಂ

ರಾಜಸ್ಥಾನದಲ್ಲಿ ಹಿಂದಿನ ಸರ್ಕಾರಗಳ ಎಲ್ಲಾ ಯೋಜನೆಗಳೂ ಮುಂದುವರೆಯಲಿವೆ ಎಂದು ರಾಜಸ್ಥಾನ ಸಿಎಂ ಭಜನ್ ಲಾಲ್ ಶರ್ಮಾ ಹೇಳಿದ್ದಾರೆ. 

ಜೈಪುರ: ರಾಜಸ್ಥಾನದಲ್ಲಿ ಹಿಂದಿನ ಸರ್ಕಾರಗಳ ಎಲ್ಲಾ ಯೋಜನೆಗಳೂ ಮುಂದುವರೆಯಲಿವೆ ಎಂದು ರಾಜಸ್ಥಾನ ಸಿಎಂ ಭಜನ್ ಲಾಲ್ ಶರ್ಮಾ ಹೇಳಿದ್ದಾರೆ. 

ಹಿಂದಿನ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಯಾವುದೇ ಜನಕಲ್ಯಾಣ ಯೋಜನೆಗಳನ್ನೂ ರದ್ದುಗೊಳಿಸಲಾಗುವುದಿಲ್ಲ ಎಂದು ಭಜನ್ ಲಾಲ್ ಶರ್ಮ ತಿಳಿಸಿದ್ದಾರೆ.
 
ಬಿಜೆಪಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಉತ್ತಮ ಆಡಳಿತ ದಿನ ಕಾರ್ಯಕ್ರಮದಲ್ಲಿ ಸಿಎಂ ಮಾತನಾಡುತ್ತಿದ್ದರು. 

ಸಾರ್ವಜನಿಕ ಕಲ್ಯಾಣ ಉದ್ದೇಶಗಳಿಗಾಗಿ ಹಿಂದಿನ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದ ಕಾರ್ಯಕ್ರಮಗಳನ್ನು ಬಿಜೆಪಿಯ ಹೊಸ ಸರ್ಕಾರ ರದ್ದುಗೊಳಿಸಲಾಗುತ್ತದೆ ಎಂದು ಕಾಂಗ್ರೆಸ್ ಆರೋಪಿಸಿತ್ತು, ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಸಿಎಂ ಎಲ್ಲಾ ಯೋಜನೆಗಳೂ ಮುಂದುವರೆಯಲಿವೆ ಎಂದು ತಿಳಿಸಿದ್ದಾರೆ.

ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಔಷಧಿಗಳ ಲಭ್ಯತೆಯನ್ನು ಮುಂದುವರಿಸಲಾಗುವುದು ಮತ್ತು ಅಗತ್ಯ ಔಷಧಿಗಳ ಸಂಖ್ಯೆಯನ್ನು ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.

ಮಾಜಿ ಪ್ರಧಾನಿ ವಾಜಪೇಯಿ ಅವರು ಬಡವರ ಕಲ್ಯಾಣಕ್ಕಾಗಿ ಯೋಜನೆಗಳನ್ನು ಮಾಡಿದರು ಮತ್ತು ಪ್ರಧಾನಿ ನರೇಂದ್ರ ಮೋದಿ ಅದನ್ನು ಮತ್ತಷ್ಟು ಮುಂದಕ್ಕೆ ಕೊಂಡೊಯ್ದರು ಎಂದು ಶರ್ಮಾ ಹೇಳಿದ್ದಾರೆ.  

ಉಪಮುಖ್ಯಮಂತ್ರಿ ದಿಯಾ ಕುಮಾರಿ ಮತ್ತು ಪಕ್ಷದ ಇತರ ನಾಯಕರು ವಾಜಪೇಯಿ ಅವರ ಜನ್ಮದಿನದಂದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಸರ್ಕಾರಿ ಸ್ವಾಮ್ಯದ ಸವಾಯಿ ಮಾನ್ ಸಿಂಗ್ ಆಸ್ಪತ್ರೆಗೆ ಸಿಎಂ ದಿಢೀರ್ ಭೇಟಿ ನೀಡಿ, ಸೌಲಭ್ಯದ ಸ್ಥಿತಿಯನ್ನು ಸುಧಾರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಆಂಧ್ರಪ್ರದೇಶ: ಖಾಸಗಿ ಬಸ್ ಕಂದಕಕ್ಕೆ ಉರುಳಿ ಕನಿಷ್ಠ 9 ಮಂದಿ ಸಾವು, ಹಲವರು ಗಾಯ

ಬೆಳಗಾವಿ ಅಧಿವೇಶನ ಮಧ್ಯೆ ಡಿನ್ನರ್ ಪಾಲಿಟಿಕ್ಸ್: ಸಿಎಂ ಬೆನ್ನಲ್ಲೇ 30ಕ್ಕೂ ಹೆಚ್ಚು ಶಾಸಕರ ಜೊತೆ ಡಿಸಿಎಂ ಮೀಟಿಂಗ್

ವಿಜಯಪುರ: ವಚನಶಿಲಾ ಮಂಟಪದ ಸ್ಥಾಪಕ ಚನ್ನಬಸವ ಸ್ವಾಮೀಜಿ ಲಿಂಗೈಕ್ಯ

ಮಾದಕ ದ್ರವ್ಯ ಮಾರಾಟ ಮಾಡುತ್ತಿದ್ದ 300 ವಿದೇಶಿ ಪ್ರಜೆಗಳ ಗಡಿಪಾರು: ಪರಿಷತ್ ನಲ್ಲಿ ಪರಮೇಶ್ವರ್ ಮಾಹಿತಿ

2ನೇ ಟಿ20: 51 ರನ್ ಗಳ ಅಂತರದಿಂದ ಗೆದ್ದು ಬೀಗಿದ ದಕ್ಷಿಣ ಆಫ್ರಿಕಾ! ಅನಗತ್ಯ ದಾಖಲೆ ಬರೆದ ಅರ್ಷದೀಪ್

SCROLL FOR NEXT