ಪ್ರಾತಿನಿಧಿಕ ಚಿತ್ರ 
ದೇಶ

ಕೋವಿಡ್-19: ದೇಶದಲ್ಲಿಂದು 628 ಮಂದಿಗೆ ಕೋವಿಡ್ ಪಾಸಿಟಿವ್, ಸಕ್ರಿಯ ಪ್ರಕರಣಗಳ ಸಂಖ್ಯೆ 4,054

ದೇಶದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 628 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿದೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 4,054 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ. 

ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 628 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿದೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 4,054 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ. 

ಮುಂಜಾನೆ 8 ಗಂಟೆಗೆ ಲಭ್ಯವಾದ ನವೀಕೃತ ಮಾಹಿತಿ ಪ್ರಕಾರ, ದೇಶದಾದ್ಯಂತ ಒಟ್ಟು 5,33,334 ಮಂದಿ ಕೋವಿಡ್‌ನಿಂದಾಗಿ ಪ್ರಾಣಕಳೆದುಕೊಂಡಿದ್ದಾರೆ. 24 ಗಂಟೆಗಳಲ್ಲಿ ಕೇರಳದಲ್ಲಿ ಒಬ್ಬರು ಸಾವಿಗೀಡಾಗಿದ್ದಾರೆ ಎನ್ನಲಾಗಿದೆ.  ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 4,50,09,248 (4.50 ಕೋಟಿ) ಆಗಿದೆ. 

ಆರೋಗ್ಯ ಸಚಿವಾಲಯದ ವೆಬ್‌ಸೈಟ್ ಪ್ರಕಾರ, ಸೋಂಕಿನಿಂದ ಈವರೆಗೆ 4,44,71,860 (4.44 ಕೋಟಿ) ಮಂದಿ ಚೇತರಿಸಿಕೊಂಡಿದ್ದಾರೆ. ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.81 ರಷ್ಟಿದೆ. ಮರಣ ಪ್ರಮಾಣ ಶೇ 1.19 ರಷ್ಟಿದೆ. 

ಸಚಿವಾಲಯದ ಅಂಕಿಅಂಶಗಳ ಪ್ರಕಾರ, ದೇಶದಲ್ಲಿ ಈವರೆಗೆ 220.67 ಕೋಟಿ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video