ಅಹ್ಮದಾಬಾದ್: ಪ್ರಧಾನಿ ಮೋದಿ ವಿರುದ್ಧ ಮಾನಹಾನಿಕರ ಟೀಕೆಗಳನ್ನು ಮಾಡಿದ್ದಕ್ಕಾಗಿ ಕಾಂಗ್ರೆಸ್ ನ ಸಂಸದ ವಿರ್ಜಿ ತುಮ್ಮರ್ ವಿರುದ್ಧ ಪ್ರಕರಣ ದಾಖಲಾಗಿದೆ.
ಗುಜರಾತ್ ನ ಅಮ್ರೇಲಿ ಜಿಲ್ಲೆಯಲ್ಲಿ ಸೋಮವಾರ ನಡೆದ ಕಾರ್ಯಕ್ರಮವೊಂದರಲ್ಲಿ ಸಂಸದ ಮಾನಹಾನಿಕರ ಟೀಕೆ ಮಾಡಿದ್ದಾರೆ. ಆದರೆ, ಯಾರನ್ನೂ ನೋಯಿಸುವುದು ನನ್ನ ಉದ್ದೇಶವಲ್ಲ, ಸಾರ್ವಜನಿಕರಿಗಾಗಿ ಧ್ವನಿ ಎತ್ತುವುದಾಗಿದೆ ಎಂದು ಎಂದು ತುಮ್ಮರ್ ಹೇಳಿದ್ದಾರೆ.
ದೂರಿನ ಆಧಾರದ ಮೇಲೆ, ಅಮ್ರೇಲಿ ನಗರ ಪೊಲೀಸರು ತುಮ್ಮರ್ ವಿರುದ್ಧ ಕ್ರಿಮಿನಲ್ ಮಾನನಷ್ಟ ಮತ್ತು ಉದ್ದೇಶಪೂರ್ವಕ ಅವಮಾನಕ್ಕೆ ಸಂಬಂಧಿಸಿದಂತೆ ಭಾರತೀಯ ದಂಡ ಸಂಹಿತೆಯ (ಐಪಿಸಿ) 499, 500 ಮತ್ತು 504 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಜೆ ಪಿ ಭಂಡಾರಿ ತಿಳಿಸಿದ್ದಾರೆ.
ಡಿ.22 ರ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಕಾಂಗ್ರೆಸ್ ಸಂಸದ, ಮೋದಿ ಅವರನ್ನು ದಲಾಲ್ (ಮಧ್ಯವರ್ತಿ) ಎಂದು ಹೇಳಿದ್ದರು. ಈ ಹೇಳಿಕೆ ವಿರುದ್ಧ ಬಿಜೆಪಿಯ ಅಮ್ರೇಲಿ ಜಿಲ್ಲೆಯ ಪ್ರಧಾನ ಕಾರ್ಯದರ್ಶಿ ಮೆಹುಲ್ ಧೋರಾಜಿಯಾ ದೂರು ನೀಡಿದ್ದರು.