ಉಗ್ರರು ಅಡಗಿದ್ದ ಗುಹೆಗಳ ನಾಶಕ್ಕೆ ಸೇನೆಗೆ ಸೂಚನೆ 
ದೇಶ

ಗುಹೆಗಳಲ್ಲಿ ಉಗ್ರರ ಅಡಗುದಾಣ ಪತ್ತೆ: ಭಾರತೀಯ ಯೋಧರಿಗೆ ಹೊಸ ಸವಾಲು; ಗುಹೆಗಳ ನಾಶಕ್ಕೆ ಸೇನೆಗೆ ಸೂಚನೆ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ನೈಸರ್ಗಿಕ ಗುಹೆಗಳಲ್ಲಿ ಉಗ್ರರ ಅಡಗುದಾಣ ಪತ್ತೆಯಾದ ಹಿನ್ನಲೆಯಲ್ಲಿ ಗುಹೆಗಳನ್ನು ನಾಶಪಡಿಸಲು ಸೇನೆಗೆ ಸೂಚನೆ ನೀಡಲಾಗಿದೆ.

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ನೈಸರ್ಗಿಕ ಗುಹೆಗಳಲ್ಲಿ ಉಗ್ರರ ಅಡಗುದಾಣ ಪತ್ತೆಯಾದ ಹಿನ್ನಲೆಯಲ್ಲಿ ಗುಹೆಗಳನ್ನು ನಾಶಪಡಿಸಲು ಸೇನೆಗೆ ಸೂಚನೆ ನೀಡಲಾಗಿದೆ.

ಕಣಿವೆರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಹಾವಳಿ ಮುಂದುವರೆದಿರುವಂತೆಯೇ ಭಾರತೀಯ ಸೈನಿಕರಿಗೆ ಹೊಸ ಹೊಸ ಸವಾಲುಗಳು ಎದುರಾಗುತ್ತಿದ್ದು, ಪೂಂಛ್‌ ಮತ್ತು ರಜೌರಿ ಜಿಲ್ಲೆಗಳಲ್ಲಿ ಹಳ್ಳತಿಟ್ಟುಗಳ ಭೂಪ್ರದೇಶದಲ್ಲಿ ಸಹಜವಾಗಿರುವ ಗುಹೆಗಳು ಭದ್ರತಾಪಡೆಗಳಿಗೆ ಹೊಸ ಸವಾಲಾಗಿ ಪರಿಣಮಿಸಿವೆ. ಉಗ್ರರ ಅಡಗುತಾಣಗಳಾಗಿರುವ ಇವುಗಳನ್ನು ಶೀಘ್ರ ನಾಶಪಡಿಸುವಂತೆ ಸೇನೆ ಮುಖ್ಯಸ್ಥ ಜನರಲ್‌ ಮನೋಜ್‌ ಪಾಂಡೆ ಅವರು ಕಮಾಂಡರ್‌ಗಳಿಗೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

ಈ ಕುರಿತು ಇಂಡಿಯಾಟಿವಿ ವರದಿ ಮಾಡಿದ್ದು, ಸೋಮವಾರ ಗಡಿಯ ಅವಳಿ ಜಿಲ್ಲೆಗಳಿಗೆ ಭೇಟಿ ನೀಡಿ ಭದ್ರತಾ ಪರಿಸ್ಥಿತಿಯನ್ನು ಅವಲೋಕಿಸಿದ ಸೇನೆ ಮುಖ್ಯಸ್ಥ ಜನರಲ್‌ ಮನೋಜ್‌ ಪಾಂಡೆ ಅವರು ಅರಣ್ಯ ಪ್ರದೇಶದಲ್ಲಿ ಉಗ್ರರ ಅಡಗುತಾಣಗಳ ಮೇಲೆ ದಾಳಿ ನಡೆಸುವಂತೆ ಸ್ಥಳೀಯ ಕಮಾಂಡರ್‌ಗಳಿಗೆ ಸೂಚನೆ ನೀಡಿದ್ದಾರೆ. ಎಲೆ, ರೆಂಬೆಗಳ ದಟ್ಟ ಗೊಂಚಲಿನ ಕೆಳಗೆ ಯಾರಿಗೂ ಕಾಣದಂತಿರುವ ಗುಹೆಗಳನ್ನು ನಾಶ ಮಾಡುವಂತೆಯೂ ಸೈನಿಕರಿಗೆ ಸೂಚಿಸಿದ್ದಾರೆ.

ಪೀರ್‌ ಪಂಜಾಲ್‌ ಪರ್ವತಸಾಲು ಎಂದೇ ಹೆಸರುವಾಸಿಯಾಗಿರುವ ರಜೌರಿ– ಪೂಂಛ್‌ನ ಅರಣ್ಯ ಪ್ರದೇಶಗಳಲ್ಲಿ ಗುಹೆಗಳ ಅಡಗುತಾಣಗಳಲ್ಲಿ ಉಗ್ರರು ನೆಲೆಸಿದ್ದರು ಎಂಬ ವರದಿಗಳಿವೆ. ದಾಳಿ ನಡೆಸುವ ಮೊದಲು ಮತ್ತು ದಾಳಿ ನಡೆಸಿದ ನಂತರ ಅವರು ಇಲ್ಲಿ ಆಶ್ರಯ ಪಡೆದಿದ್ದರು. ಈ ಗುಹೆಗಳು ಸುತ್ತು ಬಳಸಿದ ಹಾದಿಗಳನ್ನು ಹೊಂದಿದ್ದು ಉಗ್ರರ ಕಾರ್ಯತಂತ್ರಕ್ಕೆ ಅನುಕೂಲಕರವಾಗಿವೆ.

ಗುಹೆಗಳ ಒಳ ಪ್ರವೇಶಿಸುವ ಮಾರ್ಗಗಳ ಪತ್ತೆಗೆ ಯತ್ನಿಸಲಾಗಿದೆ. ಕೆಲ ಸ್ಥಳೀಯರ ಬೆಂಬಲದೊಂದಿಗೆ ಆಹಾರ ಪಡೆದು ಈ ಗುಹೆಗಳನ್ನು ಆಶ್ರಯ ತಾಣವಾಗಿ ಉಗ್ರರು ಬಳಸುತ್ತಿದ್ದರು ಎನ್ನಲಾಗಿದೆ. ಈ ಕಾರಣ ಇಲ್ಲಿ ವ್ಯಾಪಕವಾಗಿ ಶೋಧ ಕಾರ್ಯ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT