ನವದೆಹಲಿ: ಉಪರಾಷ್ಟ್ರಪತಿ ಧಂಖರ್ ಕುರಿತು ಅಪಹಾಸ್ಯ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದ ವಿರುದ್ಧ ನಿವೃತ್ತ ಮುಖ್ಯ ನ್ಯಾಯಮೂರ್ತಿ ಹಾಲಿ ರಾಜ್ಯಸಭಾ ಸದಸ್ಯ ರಂಜನ್ ಗೊಗೊಯ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ರಾಜ್ಯಸಭಾ ಸಂಸದರೂ ಆಗಿರುವ ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ಅವರು ಮಂಗಳವಾರ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೊಂದಿಗೆ ಸಂವಾದ ನಡೆಸುತ್ತಿರುವಾಗ ಉಪರಾಷ್ಟ್ರಪತಿ ಜಗದೀಪ್ ಧಂಖರ್ ಬಾಗುತ್ತಿರುವ ಹಳೆಯ ಚಿತ್ರವನ್ನು ಪೋಸ್ಟ್ ಮಾಡಿದ್ದು, ಅವರು ಧಂಕರ್ ಅವರ ಸೌಜನ್ಯವನ್ನು "ಗೇಲಿ" ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.
ಇದನ್ನೂ ಓದಿ: ಉಪ ರಾಷ್ಟ್ರಪತಿ ಧಂಖರ್ ಬಗ್ಗೆ ಅಪಹಾಸ್ಯದ ಮಿಮಿಕ್ರಿ: ರಾಷ್ಟ್ರಪತಿ, ಪ್ರಧಾನಿ ಸೇರಿ ಹಲವರಿಂದ ಖಂಡನೆ, ದೂರು ದಾಖಲು
ಟ್ವೀಟರ್ ನಲ್ಲಿ ಈ ಕುರಿತು ಸುದೀರ್ಘ ಟ್ವೀಟ್ ಮಾಡಿರುವ ರಂಜನ್ ಗೊಗೊಯ್ ಅವರು, "ಗವರ್ನರ್ ಆಗಿದ್ದರೂ, ಅವರು ಮಮತಾ ಬ್ಯಾನರ್ಜಿ ಅವರೊಂದಿಗೆ ಸಂವಹನ ನಡೆಸುವಾಗ ನಮಸ್ಕರಿಸುತ್ತಿದ್ದಾರೆ. ಏಕೆಂದರೆ ಅದು ಅವರ ಸಂಸ್ಕಾರ, ಮೌಲ್ಯ ಮತ್ತು ಅವರು ಸೌಜನ್ಯಯುತರು. ಕಾಂಗ್ರೆಸ್ ನಾಯಕರು ಅವರ ಸೌಜನ್ಯವನ್ನು ಗೇಲಿ ಮಾಡುತ್ತಿದ್ದಾರೆ. ಪದನಿಮಿತ್ತ ರಾಜ್ಯಸಭಾ ಅಧ್ಯಕ್ಷರಾಗಿರುವ ಧಂಖರ್ ಅವರು ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಮಾತನಾಡುವಾಗ ನಮಸ್ಕರಿಸುತ್ತಿರುವ ವಿಡಿಯೊವನ್ನು ಕೆಲವು ವಿರೋಧ ಪಕ್ಷದ ನಾಯಕರು ಹಂಚಿಕೊಂಡ ನಂತರ ತಮ್ಮ ನೋವನ್ನು ವ್ಯಕ್ತಪಡಿಸಿದ್ದರು. ಅದು ಅವರ ಸ್ವಭಾವವಾಗಿದ್ದು, ಮುಂದೆ ಯಾರಿದ್ದಾರೆ ಎಂಬುದು ಮುಖ್ಯವಲ್ಲ ಎಂದು ಟ್ವೀಟ್ ಮಾಡಿದ್ದಾರೆ.
ತೃಣಮೂಲ ಕಾಂಗ್ರೆಸ್ ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಸಂಸತ್ತಿನಲ್ಲಿ ವಿರೋಧ ಪಕ್ಷದ ಸಂಸದರನ್ನು ಸಾಮೂಹಿಕವಾಗಿ ಅಮಾನತುಗೊಳಿಸಿರುವುದನ್ನು ವಿರೋಧಿಸಿ ಪ್ರತಿಭಟನೆಯ ಸಂದರ್ಭದಲ್ಲಿ ಧಂಖರ್ ಅವರ ನಡವಳಿಕೆಯನ್ನು ವ್ಯಂಗ್ಯ ಮಾಡಿದ್ದರು. ಇದನ್ನು ಮಾಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ತಮ್ಮ ಮೊಬೈಲ್ ನಲ್ಲಿ ಚಿತ್ರೀಕರಿಸುತ್ತಿದ್ದರು. ಈ ವಿಡಿಯೋ ವೈರಲ್ ಆಗುತ್ತಲೇ ಈ ಕುರಿತು ಸ್ಪಷ್ಟನೆ ನೀಡಿದ್ದ ಕಾಂಗ್ರೆಸ್ ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು 'ಧಂಖರ್ ಬಗ್ಗೆ ನನಗೆ ತುಂಬಾ ಗೌರವವಿದೆ ಮತ್ತು ಅವರ ಉದ್ದೇಶವು ಅವರನ್ನು ನೋಯಿಸುವುದಿಲ್ಲ. ಮಿಮಿಕ್ರಿ ಒಂದು ಕಲೆ ಎಂದು ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದರು.
ಇದನ್ನೂ ಓದಿ: ಸಂಸತ್ತು, ಉಪ ರಾಷ್ಟ್ರಪತಿಗಳ ಹುದ್ದೆಗೆ ಮಾಡಿದ ಅವಮಾನವನ್ನು ಸಹಿಸಲು ಸಾಧ್ಯವಿಲ್ಲ: 'ಮಿಮಿಕ್ರಿ' ಬಗ್ಗೆ ಸಭಾಪತಿ ಧನ್ಕರ್ ಖೇದ
ಅಂದಹಾಗೆ ಧಂಖರ್ ಅವರು ದೇಶದ ಉಪಾಧ್ಯಕ್ಷರಾಗುವ ಮೊದಲು ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿದ್ದರು. ರಂಜನ್ ಗೊಗೊಯ್ ಅವರು 2020 ರಿಂದ ಸದನದ ನಾಮನಿರ್ದೇಶಿತ ಸದಸ್ಯರಾಗಿದ್ದಾರೆ.