ಸ್ವಾಮಿ ಪ್ರಸಾದ್ ಮೌರ್ಯ 
ದೇಶ

ಹಿಂದೂ ಧರ್ಮ ಎಂಬುದು ಮೋಸ: ಎಸ್ಪಿ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ಹೇಳಿಕೆ

ಸಮಾಜವಾದಿ ಪಕ್ಷದ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ಅವರು ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿದ್ದು, ಹಿಂದೂ ಧರ್ಮ ಎಂಬುದು ಮೋಸ. ಸುಪ್ರೀಂ ಕೋರ್ಟ್ ಸಹ ಇದನ್ನೇ ಹೇಳಿದೆ ಎಂದು ಹೇಳಿದ್ದಾರೆ.

ನವದೆಹಲಿ: ಸಮಾಜವಾದಿ ಪಕ್ಷದ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ಅವರು ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿದ್ದು, ಹಿಂದೂ ಧರ್ಮ ಎಂಬುದು ಮೋಸ. ಸುಪ್ರೀಂ ಕೋರ್ಟ್ ಸಹ ಇದನ್ನೇ ಹೇಳಿದೆ ಎಂದು ಹೇಳಿದ್ದಾರೆ.

"ಹಿಂದೂ ಧರ್ಮ ಏಕ್ ಧೋಖಾ ಹೈ(ಹಿಂದೂ ಎಂಬುದು ಮೋಸ)" ಎಂದು ಸ್ವಾಮಿ ಪ್ರಸಾದ್ ಮೌರ್ಯ ಹೇಳಿದ್ದು, ಸುಪ್ರೀಂ ಕೋರ್ಟ್, ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮತ್ತು ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗಳನ್ನು ಉಲ್ಲೇಖಿಸಿದ್ದಾರೆ. ಹಿಂದೂ ಧರ್ಮ ಒಂದು ಧರ್ಮವಲ್ಲ, ಅದು ಕೇವಲ "ಜೀವನ ವಿಧಾನ" ಎಂದು ಎಸ್ಪಿ ನಾಯಕ ಹೇಳಿದ್ದಾರೆ.

ಮೋಹನ್ ಭಾಗವತ್ ಕೂಡ ಒಂದಲ್ಲ ಎರಡೆರಡು ಬಾರಿ ಹಿಂದೂ ಎನ್ನುವುದು ಧರ್ಮವಲ್ಲ, ಜೀವನ ವಿಧಾನ ಎಂದು ಹೇಳಿದ್ದರು. ಪ್ರಧಾನಿ ನರೇಂದ್ರ ಮೋದಿ ಕೂಡ ಹಿಂದೂ ಧರ್ಮ ಒಂದು ಧರ್ಮವಲ್ಲ ಎಂದು ಹೇಳಿದ್ದಾರೆ. ಅವರು ಇಂತಹ ಹೇಳಿಕೆ ನೀಡಿದಾಗ ಭಾವನೆಗಳಿಗೆ ಧಕ್ಕೆಯಾಗುವುದಿಲ್ಲ. ಆದರೆ ಸ್ವಾಮಿ ಪ್ರಸಾದ್ ಮೌರ್ಯ ಅದನ್ನು ಹೇಳಿದರೆ, ಅಶಾಂತಿಗೆ ಕಾರಣವಾಗುತ್ತದೆ ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುತ್ತದೆ ” ಎಂದು ವಾಗ್ದಾಳಿ ನಡೆಸಿದ್ದಾರೆ.

1955ರ ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ‘ಹಿಂದೂ ಒಂದು ಧರ್ಮವಲ್ಲ, ಬದಲಿಗೆ ಜೀವನ ವಿಧಾನ’ ಎಂದು ಹೇಳಲಾಗಿದೆ. ಅದು 200ಕ್ಕೂ ಹೆಚ್ಚು ಧರ್ಮಗಳ ಕಲೆಬೆರಕೆಯಾಗಿದೆ ಎಂದು ಮೌರ್ಯ ಹೇಳಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಎಕ್ಸ್ ನಲ್ಲಿ ಪೋಸ್ಟ್ ಮಾಡಲಾಗಿರುವ ವಿಡಿಯೊವೊಂದರಲ್ಲಿ, “ಬ್ರಾಹ್ಮಣ್ಯದ ಬೇರುಗಳು ತುಂಬಾ ಆಳವಾಗಿವೆ ಹಾಗೂ ಎಲ್ಲ ಅಸಮಾನತೆಗೆ ಕಾರಣ ಕೂಡಾ ಬ್ರಾಹ್ಮಣ್ಯವೇ ಆಗಿದೆ. ಹಿಂದೂ ಎಂಬ ಯಾವುದೇ ಧರ್ಮ ಇಲ್ಲ. ಅದೆಲ್ಲ ಕೇವಲ ಹುಸಿ. ಈ ಬ್ರಾಹ್ಮಣ ಧರ್ಮವನ್ನೇ ಹಿಂದೂ ಧರ್ಮವೆಂದು ಕರೆಯುವ ಮೂಲಕ ಈ ದೇಶದ ದಲಿತರು, ಬುಡಕಟ್ಟು ಸಮುದಾಯಗಳು ಹಾಗೂ ಹಿಂದುಳಿದ ವರ್ಗಗಳನ್ನು ಸೆಳೆಯುವ ಪಿತೂರಿ ನಡೆಯುತ್ತಿದೆ” ಎಂದು ಸ್ವಾಮಿ ಪ್ರಸಾದ್ ಮೌರ್ಯ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel