ನರೇಂದ್ರ ಮೋದಿ 
ದೇಶ

2 ಕೋಟಿ ದಾಟಿದ ಪ್ರಧಾನಿ ಮೋದಿ ಯೂಟ್ಯೂಬ್ ಚಾನಲ್ ಚಂದಾದಾರರ ಸಂಖ್ಯೆ!

ಪ್ರಧಾನಿ ನರೇಂದ್ರ ಮೋದಿ ಅವರ ಸಾಮಾಜಿಕ ಜಾಲತಾಣ ಯೂಟ್ಯೂಬ್ ಖಾತೆ ಮತ್ತೊಂದು ಪ್ರಮುಖ ಮೈಲಿಗಲ್ಲು ದಾಖಲಿಸಿದೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಸಾಮಾಜಿಕ ಜಾಲತಾಣ ಯೂಟ್ಯೂಬ್ ಖಾತೆ ಮತ್ತೊಂದು ಪ್ರಮುಖ ಮೈಲಿಗಲ್ಲು ದಾಖಲಿಸಿದೆ.

ಯೂಟ್ಯೂಬ್ ನ ಚಂದಾದಾರರ ಸಂಖ್ಯೆ 2 ಕೋಟಿ ದಾಟಿದ್ದು, ಜಾಗತಿಕ ನಾಯಕರ ಪಟ್ಟಿಯಲ್ಲಿ ಮೋದಿ ಗರಿಷ್ಠ ಸಂಖ್ಯೆಯ ಚಂದಾದಾರರನ್ನು ಹೊಂದಿರುವ ನಾಯಕರಾಗಿದ್ದಾರೆ.

ಈ ವರದಿ ಪ್ರಕಟಿಸುವ ವೇಳೆಗೆ ಪ್ರಧಾನಿ ಮೋದಿ ಅವರ ಚಾನಲ್ ಗೆ 4,533,513,448 ವೀಕ್ಷಣೆ ಹೊಂದಿತ್ತು.

ಮೋದಿ ಅವರು ತಮ್ಮ ವೈಯಕ್ತಿಕ ಯೂಟ್ಯೂಬ್ ಚಾನೆಲ್‌ನಲ್ಲಿ 2 ಕೋಟಿ ಚಂದಾದಾರರನ್ನು ಹೊಂದಿರುವ ವಿಶ್ವದ ಏಕೈಕ ನಾಯಕರಾಗಿದ್ದಾರೆ ಮತ್ತು ಇತರ ನಾಯಕರಿಗೆ ಹೋಲಿಕೆ ಮಾಡಿದಲ್ಲಿ ಭಾರಿ ಅಂತರದಿಂದ ಮುನ್ನಡೆಯಲಿದ್ದಾರೆ.
 
ಪ್ರಧಾನಿ ಮೋದಿ ನಂತರದ ಸ್ಥಾನದಲ್ಲಿ ಬ್ರೆಜಿಲ್ ನ ಅಧ್ಯಕ್ಷ ಜೈರ್ ಬೋಲ್ಸನಾರೊ ಅವರ ಯೂಟ್ಯೂಬ್ ಚಾನಲ್ ಗೆ 64 ಲಕ್ಷ ಚಂದಾದಾರರಿದ್ದಾರೆ.  ಮೂರನೇ ಸ್ಥಾನದಲ್ಲಿ ಉಕ್ರೇನ್ ಅಧ್ಯಕ್ಷ ವೊಲೊದಿಮಿರ್ ಝೆಲೆನ್ಸ್ಕಿ ಇದ್ದಾರೆ. ಅಮೇರಿಕಾ ಅಧ್ಯಕ್ಷ ಜೋ ಬೈಡನ್ ಯೂಟ್ಯೂಬ್ ಚಾನಲ್ ಗೆ 7.94 ಲಕ್ಷ ಚಂದಾದಾರರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel

ಜೈ ಜವಾನ್, ಜೈ ಕಿಸಾನ್: ಐತಿಹಾಸಿಕ ಶತಕದ ಬಳಿಕ ಹೊಸ ಟ್ಯಾಟೂ ರಿವೀಲ್ ಮಾಡಿದ Dhruv Jurel