ದೇಶ

ಅಗ್ನಿಪಥ್ ಯೋಜನೆಯಿಂದ ಯುವಕರ ಕನಸುಗಳನ್ನು ಸರ್ಕಾರ ನಾಶ ಮಾಡಿದೆ: ರಾಹುಲ್ ಗಾಂಧಿ ಕಿಡಿ

Ramyashree GN

ನವದೆಹಲಿ: ಅಗ್ನಿಪಥ್ ನೇಮಕಾತಿ ಯೋಜನೆಯನ್ನು ಪರಿಚಯಿಸುವ ಮೂಲಕ ಸರ್ಕಾರವು ಅಸಂಖ್ಯಾತ ಯುವಕರ ಕನಸುಗಳನ್ನು ನಾಶಪಡಿಸಿದೆ ಮತ್ತು ನಿರುದ್ಯೋಗದ ಸಮಸ್ಯೆಯನ್ನು 'ಬೀದಿಗಳಿಂದ ಸಂಸತ್ತಿನವರೆಗೆ' ಎಂದು ಧ್ವನಿ ಎತ್ತುತ್ತಿರುವವರಿಗೆ ತಮ್ಮ ಬೆಂಬಲ ಇರುತ್ತದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಹೇಳಿದ್ದಾರೆ. 

ಇನ್‌ಸ್ಟಾಗ್ರಾಮ್‌ ಪೋಸ್ಟ್‌ನಲ್ಲಿ, ಕಾಂಗ್ರೆಸ್ ನಾಯಕ ಬಿಹಾರದ ಚಂಪಾರಣ್‌ನ ಯುವಕರೊಂದಿಗಿನ ಸಂವಾದದ ಫೋಟೊಗಳನ್ನು ಹಂಚಿಕೊಂಡಿದ್ದಾರೆ. 

'ತಾತ್ಕಾಲಿಕ ನೇಮಕಾತಿ' ಒದಗಿಸಲು ಅಗ್ನಿವೀರ್ ಯೋಜನೆಯನ್ನು ಜಾರಿಗೆ ತರುವ ಮೂಲಕ ಭಾರತೀಯ ಸೇನೆ ಮತ್ತು ವಾಯುಪಡೆಯ ಖಾಯಂ ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸುವ ಮೂಲಕ ಕೇಂದ್ರ ಸರ್ಕಾರವು ಅಸಂಖ್ಯಾತ ಯುವಕರ ಕನಸುಗಳನ್ನು ನಾಶಪಡಿಸಿದೆ ಎಂದು ಹೇಳಿದ್ದಾರೆ.

‘ಸತ್ಯಾಗ್ರಹದ ನಾಡು’ ಚಂಪಾರಣ್‌ನಿಂದ 1,100 ಕಿಲೋಮೀಟರ್‌ಗಳಷ್ಟು ಪಾದಯಾತ್ರೆ ಮಾಡುತ್ತಾ ದೆಹಲಿಗೆ ಬಂದ ಯುವಕರ ಹೋರಾಟವನ್ನು ಮಾಧ್ಯಮಗಳು ತೋರಿಸದಿರುವುದು ಬೇಸರದ ಸಂಗತಿಯಾಗಿದೆ ಎಂದರು.

'ಉದ್ಯೋಗದ ಸಮಸ್ಯೆಯನ್ನು 'ಬೀದಿಗಳಿಂದ ಸಂಸತ್ತಿನವರೆಗೆ' ಎಂದು ಧ್ವನಿ ಎತ್ತುತ್ತಿರುವ ಯುವಕರೊಂದಿಗೆ ನಾವು ಇದ್ದೇವೆ' ಎಂದು ರಾಹುಲ್ ಗಾಂಧಿ ಹೇಳಿದರು.

ಜೂನ್ 14, 2022 ರಂದು ಘೋಷಿಸಲಾದ ಅಗ್ನಿಪಥ್ ಯೋಜನೆಯು ಹದಿನೇಳುವರೆ ಯಿಂದ 21 ವರ್ಷ ವಯಸ್ಸಿನ ಯುವಕರನ್ನು ಕೇವಲ ನಾಲ್ಕು ವರ್ಷಗಳ ಅವಧಿಗೆ ಸೇನೆಗೆ ನೇಮಕ ಮಾಡಿಕೊಳ್ಳಲು ಅವಕಾಶ ಕಲ್ಪಿಸುತ್ತದೆ. ಅವರಲ್ಲಿ ಶೇ 25 ರಷ್ಟನ್ನು ಇನ್ನೂ 15 ವರ್ಷಗಳವರೆಗೆ ಉಳಿಸಿಕೊಳ್ಳುವ ಅವಕಾಶವಿದೆ.

SCROLL FOR NEXT