ರಾಹುಲ್ ಗಾಂಧಿ 
ದೇಶ

ಜನವರಿ 14 ರಿಂದ ರಾಹುಲ್ ಗಾಂಧಿ ಸಾರಥ್ಯದಲ್ಲಿ ಮಣಿಪುರದಿಂದ- ಮುಂಬೈಗೆ 'ಭಾರತ್​ ನ್ಯಾಯ ಯಾತ್ರೆ'

ಲೋಕಸಭೆ ಚುನಾವಣೆಗೆ ಸಿದ್ಧವಾಗುತ್ತಿರುವ ಕಾಂಗ್ರೆಸ್​, ಸಂಸದ ರಾಹುಲ್​ ಗಾಂಧಿ ಅವರ ಭಾರತ್​ ಜೋಡೋ ಯಾತ್ರೆಯ ಮುಂದುವರಿದ ಭಾಗ ಎಂಬಂತೆ ಜನವರಿ 14 ರಿಂದ ಮಾರ್ಚ್ 20 ರವರೆಗೆ ಮಣಿಪುರದಿಂದ ಮುಂಬೈಗೆ 'ಭಾರತ್ ನ್ಯಾಯ ಯಾತ್ರೆ' ನಡೆಸಲು ಮುಂದಾಗಿದೆ.

ನವದೆಹಲಿ: ಲೋಕಸಭೆ ಚುನಾವಣೆಗೆ ಸಿದ್ಧವಾಗುತ್ತಿರುವ ಕಾಂಗ್ರೆಸ್​, ಸಂಸದ ರಾಹುಲ್​ ಗಾಂಧಿ ಅವರ ಭಾರತ್​ ಜೋಡೋ ಯಾತ್ರೆಯ ಮುಂದುವರಿದ ಭಾಗ ಎಂಬಂತೆ ಜನವರಿ 14 ರಿಂದ ಮಾರ್ಚ್ 20 ರವರೆಗೆ ಮಣಿಪುರದಿಂದ ಮುಂಬೈಗೆ 'ಭಾರತ್ ನ್ಯಾಯ ಯಾತ್ರೆ' ನಡೆಸಲು ಮುಂದಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರು, ಕಾಂಗ್ರೆಸ್​ ದೇಶಾದ್ಯಂತ ಸಂಘಟನೆ ನಡೆಸುತ್ತಿದೆ. ಮಣಿಪುರದಲ್ಲಾದ ಸಂಷರ್ಘ ಮತ್ತು ಪ್ರಾಣ ಹಾನಿಯ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡುವ ಸಲುವಾಗಿ ಭಾರತ್​ ನ್ಯಾಯ ಯಾತ್ರೆ ನಡೆಸಲಾಗುವುದು. ಇದರಲ್ಲಿ ಪಕ್ಷದ ನಾಯಕರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಜನವರಿ 14ರಿಂದ ಮಾರ್ಚ್ 20ರವರೆಗೆ ಮಣಿಪುರದಿಂದ ಮುಂಬೈವರೆಗೆ ಭಾರತ್ ನ್ಯಾಯ ಯಾತ್ರೆ ನಡೆಸಲು ಎಐಸಿಸಿ ನಿರ್ಧರಿಸಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಸುದ್ದಿಗೋಷ್ಠಿ ವೇಳೆ ಅಧಿಕೃತವಾಗಿ ಪ್ರಕಟಿಸಿದರು.

ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯಿಂದ ಉತ್ತಮ ಅನುಭವವಾಗಿದೆ, ಮುಂದಿನ ಯಾತ್ರೆಗೆ ಇದು ದಾರಿ ದೀಪವಾಗಿದೆ. ಭಾರತ ನ್ಯಾಯ ಯಾತ್ರೆ ವೇಳೆ, ಯುವಕರು, ಮಹಿಳೆಯರು ಮತ್ತು ಅಂಚಿನಲ್ಲಿರುವ ಜನರೊಂದಿಗೆ ಸಂವಾದ ನಡೆಸಲಿದೆ. ಹೊಸ ಯಾತ್ರೆಯು 6,200 ಕಿ.ಮೀ. ದೂರ ಕ್ರಮಿಸಲಿದೆ.

ಮಣಿಪುರ, ನಾಗಾಲ್ಯಾಂಡ್, ಅಸ್ಸೋಂ, ಮೇಘಾಲಯ, ಪಶ್ಚಿಮ ಬಂಗಾಳ, ಬಿಹಾರ, ಜಾರ್ಖಂಡ್, ಒಡಿಶಾ, ಛತ್ತೀಸ್‌ಗಢ, ಯುಪಿ, ಎಂಪಿ, ರಾಜಸ್ಥಾನ, ಗುಜರಾತ್ ಮತ್ತು ಅಂತಿಮವಾಗಿ ಮಹಾರಾಷ್ಟ್ರ ಸೇರಿದಂತೆ ಇನ್ನಿತರ ರಾಜ್ಯಗಳನ್ನು ಪ್ರಯಾಣಿಸುತ್ತದೆ. ಈ ಯಾತ್ರೆ ಬಸ್ ಮೂಲಕ ಈ ಬಾರಿಯ ಯಾತ್ರೆ ನಡೆಯಲಿದೆ ಎಂದು  ಮಾಹಿತಿ ನೀಡಿದ್ದಾರೆ. ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಜನವರಿ 14 ರಂದು ಮಣಿಪುರದಿಂದ ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!