ಸಾಂದರ್ಭಿಕ ಚಿತ್ರ 
ದೇಶ

ಅಮೆರಿಕದಲ್ಲಿ ಭೀಕರ ಅಪಘಾತ: ಆಂಧ್ರಪ್ರದೇಶ ಶಾಸಕನ 6 ಮಂದಿ ಸಂಬಂಧಿಕರ ಸಾವು

ಅಮೆರಿಕದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಆಂಧ್ರಪ್ರದೇಶ ಶಾಸಕರೊಬ್ಬರ 6 ಮಂದಿ ಸಂಬಂಧಿಕರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ನವದೆಹಲಿ: ಅಮೆರಿಕದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಆಂಧ್ರಪ್ರದೇಶ ಶಾಸಕರೊಬ್ಬರ 6 ಮಂದಿ ಸಂಬಂಧಿಕರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಅಮೆರಿಕದ ಟೆಕ್ಸಾಸ್‌ನಲ್ಲಿ ಮಂಗಳವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಆಂಧ್ರಪ್ರದೇಶದ ವೈಎಸ್ಆರ್‌ಸಿಪಿ ಶಾಸಕ ಪಿ.ವೆಂಕಟ ಸತೀಶ್ ಕುಮಾರ್ ಅವರ ಆರು ಮಂದಿ ಸಂಬಂಧಿಕರು ಮೃತಪಟ್ಟಿದ್ದಾರೆ. ಮೃತರನ್ನು ಶಾಸಕರ ಚಿಕ್ಕಪ್ಪ ನಾಗೇಶ್ವರ ರಾವ್, ಸೀತಾ ಮಹಾಲಕ್ಷ್ಮಿ, ನವೀನ, ಕೃತಿಕ್ ಮತ್ತು ನಿಶಿತಾ ಎಂಬ ಯುವತಿ ಎಂದು ಗುರುತಿಸಲಾಗಿದೆ.

ಕ್ರಿಸ್ ಮಸ್ ಹಿನ್ನಲೆಯಲ್ಲಿ ಸ್ಥಳೀಯ ಮೃಗಾಲಯಕ್ಕೆ ಹೋಗಿ ವಾಪಸ್ ಬರುತ್ತಿದ್ದಾಗ ಟೆಕ್ಸಾಸ್‌ನ ಕ್ಲೆಬೂರ್ನ್ ನಗರದ ಜಾನ್ಸನ್ ಕೌಂಟಿಯಲ್ಲಿ ಎದುರಿನಿಂದ ಬಂದ ಟ್ರಕ್, ಕಾರಿಗೆ ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ ಕಾರಿನಲ್ಲಿದ್ದ ಏಳು ಮಂದಿ ಪೈಕಿ ಆರು ಮಂದಿ ಮೃತಪಟ್ಟಿದ್ದು, ತೀವ್ರವಾಗಿ ಗಾಯಗೊಂಡ ಲೋಕೇಶ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಶಾಸಕ ವೆಂಕಟ ಸತೀಶ್ ಮಾಹಿತಿ ನೀಡಿದ್ದು, ಮೃತದೇಹಗಳನ್ನು ಭಾರತಕ್ಕೆ ತರಲು ಉತ್ತರ ಅಮೆರಿಕದ ತೆಲುಗು ಅಸೋಸಿಯೇಷನ್ (ಟಿಎಎನ್ಎ) ಸಂಘಟನೆ ಸಹಾಯ ಮಾಡುತ್ತಿದೆ ಎಂದು ಹೇಳಿದ್ದಾರೆ.

ಆಂಧ್ರಪ್ರದೇಶದ ಮುಮ್ಮಿಡಿವರಂ ಕ್ಷೇತ್ರದ ಶಾಸಕರಾದ ಸತೀಶ್ ಕುಮಾರ್, "ನಾವು ಮೃತದೇಹಗಳನ್ನು ದೇಶಕ್ಕೆ ತರಲು ಪ್ರಯತ್ನಿಸುತ್ತಿದ್ದೇವೆ... ಆದರೆ ಲೋಕೇಶ್ ಇನ್ನೂ ಚಿಕಿತ್ಸೆ ಪಡೆಯುತ್ತಿರುವುದರಿಂದ, ತಡವಾಗುತ್ತಿದೆ. ಶವಗಳ ಹಸ್ತಾಂತ್ರ ಪ್ರಕ್ರಿಯೆ ಚಾಲ್ತಿಯಲ್ಲಿದೆ ಎಂದು ಸತೀಶ್ ಕುಮಾರ್ ಹೇಳಿದರು.

ಟ್ರಕ್‌ನಲ್ಲಿದ್ದ ಇಬ್ಬರೂ ಗಾಯಗೊಂಡಿದ್ದು, ಟ್ರಕ್ ಚಾಲನೆ ಮಾಡುತ್ತಿದ್ದವರ ಅಚಾತುರ್ಯದಿಂದಲೇ ಅಪಘಾತ ಸಂಭವಿಸಿದೆ ಎಂದು ಅಮೆರಿಕದ ಮಾಧ್ಯಮಗಳು ವರದಿ ಮಾಡಿವೆ. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಖ್ಯಮಂತ್ರಿ ಬದಲಾವಣೆ: ದೆಹಲಿಯಲ್ಲಿ ಕಾಂಗ್ರೆಸ್‌ ಮ್ಯಾರಥಾನ್‌ ಮೀಟಿಂಗ್ ಬಳಿಕ ಕೆ.ಸಿ ವೇಣುಗೋಪಾಲ್ ಹೇಳಿದ್ದೇನು? Video

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

ಬಕ್ರೀದ್ ಮೇಕೆ ವಿಷಯವಾಗಿ ಮುಂಬೈ ಸೊಸೈಟಿಯಲ್ಲಿ ಭಾರಿ ವಿವಾದ; VHP ಕಾರ್ಯಕರ್ತರ ಮೇಲೆ ಬ್ಲೇಡ್ ನಿಂದ ಹಲ್ಲೆ!

IPL 2026 Qualifier 1: ರಜತ್ ಪಟಿದಾರ್ ಸ್ಫೋಟಕ ಬ್ಯಾಟಿಂಗ್, GTಗೆ ಗೆಲ್ಲಲು 255 ರನ್ ಬೃಹತ್ ಗುರಿ ನೀಡಿದ RCB

SCROLL FOR NEXT