ಹೊತ್ತಿ ಉರಿದ ಬಸ್ 
ದೇಶ

ಮಧ್ಯಪ್ರದೇಶ: ಬಸ್‌, ಟ್ರಕ್‌ ನಡುವೆ ಅಪಘಾತ; 12 ಮಂದಿ ಸಜೀವ ದಹನ, ಮೃತರ ಕುಟುಂಬಕ್ಕೆ ತಲಾ 4 ಲಕ್ಷ ರು ಪರಿಹಾರ

ಮಧ್ಯಪ್ರದೇಶದಲ್ಲಿ ಬುಧವಾರ ತಡರಾತ್ರಿ ಖಾಸಗಿ ಬಸ್ ಹಾಗೂ ಡಂಪರ್ ಟ್ರಕ್ ನಡುವೆ ಅಪಘಾತ ಸಂಭವಿಸಿ, 12 ಮಂದಿ ಸಜೀವ ದಹನವಾಗಿದ್ದಾರೆ.

ಗುನ: ಮಧ್ಯಪ್ರದೇಶದಲ್ಲಿ ಬುಧವಾರ ತಡರಾತ್ರಿ ಖಾಸಗಿ ಬಸ್ ಹಾಗೂ ಡಂಪರ್ ಟ್ರಕ್ ನಡುವೆ ಅಪಘಾತ ಸಂಭವಿಸಿ, 12 ಮಂದಿ ಸಜೀವ ದಹನವಾಗಿದ್ದಾರೆ.

ಈ ಘಟನೆ ಗುನ ಜಿಲ್ಲೆಯ ಗುಣ-ಅರೋನ್ ಮಾರ್ಗದಲ್ಲಿ ಸಂಭವಿಸಿದೆ. ಬಸ್ ಹಾಗೂ ಟ್ರಕ್ ನಡುವಿನ ಅಪಘಾತದಲ್ಲಿ ಬಸ್ ಹೊತ್ತಿ ಉರಿದಿದೆ. ಬಸ್ಸಿನಲ್ಲಿದ್ದ 12 ಪ್ರಯಾಣಿಕರು ಸಜೀವ ದಹನಗೊಂಡು, 17 ಜನ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಗುನ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. 5 ಜನರ ಪರಿಸ್ಥಿತಿ ಚಿಂತಾಜನಕವಾಗಿದೆ. ಉಳಿದವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ತರುಣ್ ರಥಿ ತಿಳಿಸಿದ್ದಾರೆ.

ಪ್ರಸ್ತುತ 17 ಮಂದಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ, ಬಸ್ ಮತ್ತು ಟ್ರಕ್ ಅಪಘಾತದಲ್ಲಿ ಹದಿಮೂರು ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಮೃತದೇಹಗಳು ಬೆಂಕಿಯಲ್ಲಿ ಗುರುತಿಸಲಾಗದಷ್ಟು ಸುಟ್ಟು ಕರಕಲಾಗಿದ್ದು, ಅವುಗಳನ್ನು ಗುರುತಿಸಲು ಡಿಎನ್‌ಎ ಪರೀಕ್ಷೆ ನಡೆಸಲಾಗುವುದು.  ಅಪಘಾತ ಸ್ಥಳದಿಂದ ಎಲ್ಲಾ ದೇಹಗಳನ್ನು ಹೊರತೆಗೆಯಲಾಗಿದೆ. ಅಪಘಾತಕ್ಕೆ ಕಾರಣವನ್ನು ಕಂಡುಹಿಡಿಯಲು ಪರಿಶೀಲನೆ ಡೆಯುತ್ತಿದೆ ಎಂದು ಅವರು ಹೇಳಿದರು. ಘಟನೆಯ ಸಮಯದಲ್ಲಿ ಬಸ್‌ನಲ್ಲಿ ಸುಮಾರು 30 ಪ್ರಯಾಣಿಕರಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಘಟನೆಯ ಕುರಿತು ತನಿಖೆಗೆ ಆದೇಶಿಸಿದ್ದಾರೆ ಮತ್ತು ಮೃತರ ಕುಟುಂಬಕ್ಕೆ ತಲಾ 4 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ ತಲಾ 50,000 ರೂಪಾಯಿಗಳನ್ನು ಘೋಷಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT