ಸಾಂದರ್ಭಿಕ ಚಿತ್ರ 
ದೇಶ

COVID-19: ಕಳೆದ 24 ಗಂಟೆಗಳಲ್ಲಿ 702 ಮಂದಿಗೆ ಕೋವಿಡ್ ಪಾಸಿಟಿವ್, ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ

ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 702 ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿವೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 4,097ಕ್ಕೆ ಏರಿಕೆಯಾಗಿದೆ ಎಂದು  ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಮಾಹಿತಿ ನೀಡಿದೆ. 

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 702 ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿವೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 4,097ಕ್ಕೆ ಏರಿಕೆಯಾಗಿದೆ ಎಂದು  ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಮಾಹಿತಿ ನೀಡಿದೆ. 

ಮುಂಜಾನೆ 8 ಗಂಟೆಗೆ ಲಭ್ಯವಾದ ಅಧಿಕೃತ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಆರು ಮಂದಿ ಕೊರೊನಾವೈರಸ್ ಸೋಂಕಿನಿಂದ ಮೃತಪಟ್ಟಿದ್ದಾರೆ. ಈ ಪೈಕಿ ಮಹಾರಾಷ್ಟ್ರದಲ್ಲಿ ಇಬ್ಬರು ಮತ್ತು ದೆಹಲಿ, ಕರ್ನಾಟಕ, ಕೇರಳ ಮತ್ತು ಪಶ್ಚಿಮ ಬಂಗಾಳದಲ್ಲಿ ತಲಾ ಒಬ್ಬರು ಸಾವಿಗೀಡಾಗಿದ್ದಾರೆ.

2020ರ ಆರಂಭದಲ್ಲಿ ಸಾಂಕ್ರಾಮಿಕ ರೋಗ ಕಾಣಿಸಿಕೊಂಡಿತು. ಕಳೆದ ನಾಲ್ಕು ವರ್ಷಗಳಲ್ಲಿ ದೇಶದಾದ್ಯಂತ ಒಟ್ಟು ಸೋಂಕು ಪ್ರಕರಣಗಳ ಸಂಖ್ಯೆ 4,50,10,944 ಕ್ಕೆ ಏರಿಕೆಯಾಗಿದ್ದು, ಈವರೆಗೆ ಮೃತಪಟ್ಟವರ ಸಂಖ್ಯೆ 5,33,346 ಕ್ಕೆ ಏರಿದೆ. 

ಸಚಿವಾಲಯದ ವೆಬ್‌ಸೈಟ್ ಪ್ರಕಾರ, ಸೋಂಕಿನಿಂದ ಚೇತರಿಸಿಕೊಂಡ ಜನರ ಸಂಖ್ಯೆ 4.4 ಕೋಟಿಗೂ ಹೆಚ್ಚಿದ್ದು, ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.81 ರಷ್ಟಿದೆ.

ದೇಶದಲ್ಲಿ ಇದುವರೆಗೆ 220.67 ಕೋಟಿ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ನೀಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ