ದೇಶ

ಯುಎಲ್ಎಫ್ಎ ವಿಸರ್ಜನೆಯಾಗಲಿದೆ: ಐತಿಹಾಸಿಕ ಶಾಂತಿ ಒಪ್ಪಂದದ ಬಗ್ಗೆ ಅಮಿತ್ ಶಾ

Srinivas Rao BV

ನವದೆಹಲಿ: ಕೇಂದ್ರ ಹಾಗೂ ಅಸ್ಸಾಂ ಸರ್ಕಾರಗಳೊಂದಿಗೆ ಅಸ್ಸಾಂ ನ ಯುಎಲ್ಎಫ್ಎ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದೆ. ಈಶಾನ್ಯ ಪ್ರದೇಶದಲ್ಲಿ ಅತಿ ದೊಡ್ಡ ದಂಗೆಕೋರ ಗುಂಪುಗಳಲ್ಲಿ ಒಂದು ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಕೇಂದ್ರ ಸರ್ಕಾರದೊಂದಿಗೆ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿವೆ.

ಪರೇಶ್ ಬರುವಾ ನೇತೃತ್ವದ ಉಲ್ಫಾ (ಸ್ವತಂತ್ರ) ಬಣ ಮಾತುಕತೆಗೆ ವಿರೋಧ ವ್ಯಕ್ತಪಡಿಸಿದೆ. ಅಸ್ಸಾಂನ ಅತ್ಯಂತ ಹಳೆಯ ದಂಗೆಕೋರ ಗುಂಪಿನೊಂದಿಗಿನ ಶಾಂತಿ ಒಪ್ಪಂದವು ಅಕ್ರಮ ವಲಸೆ, ಸ್ಥಳೀಯ ಸಮುದಾಯಗಳಿಗೆ ಭೂಮಿಯ ಹಕ್ಕುಗಳು ಮತ್ತು ಅಸ್ಸಾಂನ ಅಭಿವೃದ್ಧಿಗೆ ಹಣಕಾಸಿನ ಪ್ಯಾಕೇಜ್‌ನಂತಹ ಸಮಸ್ಯೆಗಳನ್ನು ಪರಿಹರಿಸುವ ಗುರಿಯನ್ನು ಹೊಂದಿದೆ.

ಗೃಹ ಸಚಿವ ಅಮಿತ್ ಶಾ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದು, ಯುಎಲ್ಎಫ್ಎ ಎಲ್ಲಾ ಸಮಂಜಸವಾದ ಬೇಡಿಕೆಗಳನ್ನು ಕಾಲಮಿತಿಯಲ್ಲಿ ಪೂರೈಸುವುದನ್ನು ಕೇಂದ್ರವು ಖಚಿತಪಡಿಸುತ್ತದೆ ಮತ್ತು ಸಂಘಟನೆಯಾಗಿ ಯುಎಲ್ಎಫ್ಎ ನ್ನು ವಿಸರ್ಜಿಸಲಾಗುವುದು ಎಂದು ಅಮಿತ್ ಶಾ ಹೇಳಿದ್ದಾರೆ.

"ಶಾಂತಿ ಪ್ರಕ್ರಿಯೆಯ ಯಶಸ್ಸನ್ನು ಖಾತ್ರಿಪಡಿಸಿಕೊಳ್ಳುವುದಕ್ಕೆ ಕೇಂದ್ರದಲ್ಲಿ ಅವರ ನಂಬಿಕೆಯನ್ನು ಗೌರವಿಸಲಾಗುವುದು ಎಂದು ಯುಎಲ್ಎಫ್ಎ ನಾಯಕತ್ವಕ್ಕೆ ನಾವು ಭರವಸೆ ನೀಡಲು ಬಯಸುತ್ತೇವೆ" ಎಂದು ಅಮಿತ್ ಶಾ ಹೇಳಿದ್ದಾರೆ ಮತ್ತು ಈ ಯಶಸ್ಸು ಈಶಾನ್ಯದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ತಂದ ಕೀರ್ತಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಸಲ್ಲುತ್ತದೆ. ಅಸ್ಸಾಂನ ಅತ್ಯಂತ ಹಳೆಯ ದಂಗೆಕೋರ ಗುಂಪು ಯುಎಲ್ಎಫ್ಎ ಹಿಂಸಾಚಾರದ ಹಾದಿಯನ್ನು ತ್ಯಜಿಸಲು ಒಪ್ಪಿಕೊಂಡಿದೆ ಎಂದು ತಿಳಿಸಿದ್ದಾರೆ.

ಅಸ್ಸಾಂ ಮತ್ತು ಇತರ ಈಶಾನ್ಯ ರಾಜ್ಯಗಳ ಹಲವು ಪ್ರದೇಶಗಳಿಂದ ಸಶಸ್ತ್ರ ಪಡೆಗಳ (ವಿಶೇಷ) ಅಧಿಕಾರಗಳ ಕಾಯಿದೆಯನ್ನು (ಎಎಫ್‌ಎಸ್‌ಪಿಎ) ತೆಗೆದುಹಾಕಿರುವುದು ಈ ಪ್ರದೇಶದಲ್ಲಿ ಬಂಡಾಯವು ಬಹುತೇಕ ನಿರ್ನಾಮವಾಗಿದೆ ಎಂಬುದಕ್ಕೆ ಪುರಾವೆಯಾಗಿದೆ ಎಂದು ಅಮಿತ್ ಶಾ ಹೇಳಿದ್ದಾರೆ.

SCROLL FOR NEXT