ದೇಶ

ಅಯೋಧ್ಯೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ: ಮೊದಲ ವಿಮಾನದಲ್ಲಿ ಪ್ರಯಾಣಿಕರಿಂದ ಹನುಮಾನ್ ಚಾಲಿಸಾ ಪಠಣ

Srinivas Rao BV

ಅಯೋಧ್ಯೆ: ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೆ ಇನ್ನು ಕೆಲವೇ ದಿನಗಳು ಬಾಕಿ ಇವೆ. ಇದಕ್ಕೂ ಮುನ್ನ ಅಯೋಧ್ಯೆಯಲ್ಲಿ ಹೊಸ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ನವೀಕೃತ ರೈಲು ನಿಲ್ದಾಣಗಳನ್ನು ಇಂದು ಪ್ರಧಾನಿ ಮೋದಿ ಉದ್ಘಾಟಿಸಿದರು.

ಅಯೋಧ್ಯೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಾಲ್ಮೀಕಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂಬ ಹೆಸರು ನಾಮಕರಣ ಮಾಡಲಾಗಿದೆ. ಉದ್ಘಾಟನಾ ವಿಮಾನದಲ್ಲಿದ್ದ ಪ್ರಯಾಣಿಕರು ಹನುಮಾನ್ ಚಾಲಿಸಾ ಪಠಿಸಿದ್ದು ವಿಷೇಶವಾಗಿತ್ತು.  ಎಎನ್ಐ ಈ ವೀಡಿಯೋವನ್ನು ಪ್ರಕಟಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.  ವಿಮಾನದಲ್ಲಿ ಕುಳಿತಿದ್ದ ಪ್ರಯಾಣಿಕರು ಕೇಸರಿ ಶಾಲು ಧರಿಸಿ ಹನುಮಾನ್ ಚಾಲಿಸಾ ಪಠಿಸಿದ್ದಾರೆ. 

ಮಹರ್ಷಿ ವಾಲ್ಮೀಕಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು 1450 ಕೋಟಿ ರೂಪಾಯಿಗಳ ವೆಚ್ಚದಲ್ಲಿ ನಿರ್ಮಿಸಲಾಗಿದೆ. GRIHA 4-Star ಪ್ರಮಾಣಿತ ವಿಮಾನ ನಿಲ್ದಾಣ ಇದಾಗಿದ್ದು, ವಾರ್ಷಿಕ 10 ಲಕ್ಷ ಮಂದಿ ಪ್ರಯಾಣಿಕರನ್ನು ನಿಭಾಯಿಸುವ ಸಾಮರ್ಥ್ಯ ಹೊಂದಿದೆ.

SCROLL FOR NEXT