ದೇಶ

ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಏರಿಕೆ: 743 ಕೇಸ್ ಪತ್ತೆ, 7 ಸಾವು

Manjula VN

ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಆರಿಕೆಯಾಗುತ್ತಿದ್ದು, 225 ದಿನಗಳ ಬಳಿಕ ಇದೇ ಮೊದಲ ಬಾರಿಗೆ 24 ಗಂಟೆಗಳ ಅವಧಿಯಲ್ಲಿ 225ಕ್ಕೂ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.

ಈ ಮೂಲಕ ಈವರೆಗೆ  4,50,12,431 ಮಂದಿಗೆ ಕೋವಿಡ್ ತಗುಲಿದೆ. ಇದೇ ಅವಧಿಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,997ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 7 ಮಂದಿ ಸಾವಿಗೀಡಾಗಿದ್ದು, ಈವರೆಗೆ ಮೃತಪಟ್ಟವರ ಒಟ್ಟು ಸಂಖ್ಯೆ 5,33,358ಕ್ಕೆ ಏರಿಕೆಯಾಗಿದೆ.

ಮೃತಪಟ್ಟಿರುವ 7 ಮಂದಿಯ ಪೈಕಿ ಕೇರಳದಲ್ಲಿ ಮೂರು, ಕರ್ನಾಟಕ ಎರಡು ಮತ್ತು ಛತ್ತೀಸ್‌ಗಢ ಮತ್ತು ತಮಿಳುನಾಡಿನಿಂದ ತಲಾ ಒಬ್ಬರು ಸಾವನ್ನಪ್ಪಿದ್ದಾರೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

ರಾಷ್ಟ್ರೀಯ ಕೋವಿಡ್-19 ಚೇತರಿಕೆ ದರ 98.81ರಷ್ಟಿದ್ದು, ಈವರೆಗೆ  4,44,75,076 ಮಂದಿ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ.

ಸಚಿವಾಲಯದ ವೆಬ್‌ಸೈಟ್‌ನಲ್ಲಿ ನೀಡಿರುವ ಮಾಹಿತಿ ಪ್ರಕಾರ, ದೇಶದಾದ್ಯಂತ ನಡೆಯುತ್ತಿರುವ ಲಸಿಕಾ ಅಭಿಯಾನದ ಅಡಿಯಲ್ಲಿ 220.67 ಕೋಟಿಗೂ ಅಧಿಕ ಮಂದಿಗೆ ಲಸಿಕೆಗಳನ್ನು ವಿತರಿಸಲಾಗಿದೆ ಎಂದು ತಿಳಿದುಬಂದಿದೆ.

SCROLL FOR NEXT