ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ರಾಜಸ್ಥಾನ: ಮೀನಾ, ರಾಥೋಡ್ ಸೇರಿ 22 ಶಾಸಕರು ನೂತನ ಸಚಿವರಾಗಿ ಪ್ರಮಾಣ

ರಾಜಸ್ಥಾನ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ಅವರು ಶನಿವಾರ ತಮ್ಮ ಸಚಿವ ಸಂಪುಟ ವಿಸ್ತರಣೆ ಮಾಡಿದ್ದು, ಮಾಜಿ ಕೇಂದ್ರ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್ ಮತ್ತು ಬಿಜೆಪಿಯ ಹಿರಿಯ ನಾಯಕ ಕಿರೋಡಿ ಲಾಲ್ ಮೀನಾ ಸೇರಿದಂತೆ 12...

ರಾಜ್ಯವರ್ಧನ್ ಸಿಂಗ್ ರಾಥೋಡ್
Lingaraj Badiger
Updated On : 30 Dec 2023, 6:30 pm

ಜೈಪುರ: ರಾಜಸ್ಥಾನ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ಅವರು ಶನಿವಾರ ತಮ್ಮ ಸಚಿವ ಸಂಪುಟ ವಿಸ್ತರಣೆ ಮಾಡಿದ್ದು, ಮಾಜಿ ಕೇಂದ್ರ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್ ಮತ್ತು ಬಿಜೆಪಿಯ ಹಿರಿಯ ನಾಯಕ ಕಿರೋಡಿ ಲಾಲ್ ಮೀನಾ ಸೇರಿದಂತೆ 12 ಶಾಸಕರು ನೂತನ ಸಚಿವಾರಿ ಪ್ರಮಾಣ ವಚನ ಸ್ವೀಕರಿಸಿದರು.

ಇಂದು ರಾಜಭವನದಲ್ಲಿ ನಡೆದ ಪ್ರಮಾಣವಚನ ಸ್ವೀಕರಾ ಸಮಾರಂಭದಲ್ಲಿ 10 ಶಾಸಕರು ರಾಜ್ಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

ಇದನ್ನು ಓದಿ: ಹಿಂದಿನ ಸರ್ಕಾರಗಳ ಎಲ್ಲಾ ಯೋಜನೆಗಳೂ ಮುಂದುವರೆಯಲಿವೆ: ರಾಜಸ್ಥಾನ ಸಿಎಂ​

Advertisement

Advertisement

ರಾಜ್ಯಪಾಲ ಕಲ್ರಾಜ್ ಮಿಶ್ರಾ ಅವರು ನೂತನ ಸಚಿವರಿಗೆ ಪ್ರಮಾಣ ವಚನ ಬೋಧಿಸಿದರು.

ಕಿರೋಡಿ ಲಾಲ್ ಮೀನಾ, ಮದನ್ ದಿಲಾವರ್, ರಾಜ್ಯವರ್ಧನ್ ಸಿಂಗ್ ರಾಥೋಡ್, ಗಜೇಂದ್ರ ಸಿಂಗ್ ಖಿಮ್ಸರ್, ಬಾಬುಲಾಲ್ ಖರಾಡಿ, ಜೋಗರಾಮ್ ಪಟೇಲ್, ಸುರೇಶ್ ಸಿಂಗ್ ರಾವತ್, ಅವಿನಾಶ್ ಗೆಹ್ಲೋಟ್, ಜೋರಾರಾಮ್ ಕುಮಾವತ್, ಹೇಮಂತ್ ಮೀನಾ, ಕನ್ಹಯ್ಯಾ ಲಾಲ್ ಚೌಧರಿ ಮತ್ತು ಸುಮಿತ್ ಗೋಡಾರ ಅವರು ಕ್ಯಾಬಿನೆಟ್‌ ದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement