ಸಾಂದರ್ಭಿಕ ಚಿತ್ರ 
ದೇಶ

ಬಿಎಚ್‌ಯು ಕ್ಯಾಂಪಸ್‌ ನಲ್ಲಿ ಐಐಟಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಮೂವರ ಬಂಧನ

ಬನಾರಸ್ ಹಿಂದೂ ವಿವಿ ಅವರಣದಲ್ಲಿ ಐಐಟಿ ವಿದ್ಯಾರ್ಥಿನಿ ಮೇಲೆ ನಡೆದಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಾರಣಾಸಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ವಾರಣಾಸಿ: ಬನಾರಸ್ ಹಿಂದೂ ವಿವಿ ಅವರಣದಲ್ಲಿ ಐಐಟಿ ವಿದ್ಯಾರ್ಥಿನಿ ಮೇಲೆ ನಡೆದಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಾರಣಾಸಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಿಎಚ್‌ಯು ಕ್ಯಾಂಪಸ್‌ನಲ್ಲಿ ಐಐಟಿಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಇಲ್ಲಿನ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. ಬಂಧಿತರನ್ನು ಕುನಾಲ್ ಪಾಂಡೆ, ಆನಂದ್ ಅಲಿಯಾಸ್ ಅಭಿಷೇಕ್ ಚೌಹಾಣ್ ಹಾಗೂ ಸಕ್ಷಮ್ ಪಟೇಲ್ ಎಂದು ಗುರುತಿಸಲಾಗಿದೆ ಎಂದು ಲಂಕಾ ಪೊಲೀಸ್ ಠಾಣೆಯ ಎಸ್‌ಎಚ್‌ಒ ಶಿವಕಾಂತ್ ಮಿಶ್ರಾ ತಿಳಿಸಿದ್ದಾರೆ.

ಏನಿದು ಘಟನೆ?
ದೂರುದಾರರ ಪ್ರಕಾರ, ನವೆಂಬರ್1 ರ ರಾತ್ರಿ ಅತ್ಯಾಚಾರ ಘಟನೆ ನಡೆದಿತ್ತು. ಸಂತ್ರಸ್ತೆ ತನ್ನ ಸ್ನೇಹಿತನೊಂದಿಗೆ ಹಾಸ್ಟೆಲ್‌ನಿಂದ ಹೊರಗೆ ಹೋಗಿದ್ದಳು. ಆಗ ಬೈಕ್ ನಲ್ಲಿ ಬಂದ ಮೂವರು ವ್ಯಕ್ತಿಗಳು, ಸ್ನೇಹಿತನಿಂದ ಬೇರ್ಪಡಿಸಿ ಅವಳನ್ನು ಬಲವಂತವಾಗಿ ಕರೆದೊಯ್ದು ಅತ್ಯಾಚಾರವೆಸಗಿದ್ದರು. ಬಳಿಕ ಆರೋಪಿಗಳು ಆಕೆಯನ್ನು ವಿವಸ್ತ್ರಗೊಳಿಸಿ, ವಿಡಿಯೊ ಮಾಡಿ ಫೋಟೋ ತೆಗೆದಿದ್ದಾರೆ. ಸುಮಾರು 15 ನಿಮಿಷಗಳ ನಂತರ ಆಕೆಯ ಫೋನ್ ನಂಬರ್‌ ತೆಗೆದುಕೊಂಡು ಹೋಗಲು ಬಿಟ್ಟರು ಎಂದು ದೂರುದಾರರು ತಿಳಿಸಿದ್ದಾರೆ.

ಸಂತ್ರಸ್ತೆಯ ದೂರಿನ ಆಧಾರದ ಮೇಲೆ, ಐಪಿಸಿಯ ಸೆಕ್ಷನ್ 354 (ಮಹಿಳೆ ಮೇಲೆ ದೌರ್ಜನ್ಯ), ಸಾಮೂಹಿಕ ಅತ್ಯಾಚಾರ ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಲಂಕಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

SCROLL FOR NEXT