ಅಯೋಧ್ಯ ರಾಮ ಮಂದಿರದ ಪ್ರದೇಶ (ಸಂಗ್ರಹ ಚಿತ್ರ) 
ದೇಶ

ಅಯೋಧ್ಯೆ ಟ್ರಸ್ಟ್ ಹೆಸರಿನಲ್ಲಿ ವಂಚಕರಿಂದ ಜನರಿಗೆ ಮೋಸ: ವಿಹೆಚ್ ಪಿ

ಅಯೋಧ್ಯೆ ರಾಮ ಮಂದಿರ ಟ್ರಸ್ಟ್ ನ ಹೆಸರಿನಲ್ಲಿ ಕೆಲವು ವ್ಯಕ್ತಿಗಳು ಜನರನ್ನು ವಂಚಿಸುತ್ತಿದ್ದಾರೆ.

ನವದೆಹಲಿ: ಅಯೋಧ್ಯೆ ರಾಮ ಮಂದಿರ ಟ್ರಸ್ಟ್ ನ ಹೆಸರಿನಲ್ಲಿ ಕೆಲವು ವ್ಯಕ್ತಿಗಳು ಜನರನ್ನು ವಂಚಿಸುತ್ತಿದ್ದಾರೆ ಎಂದು ವಿಶ್ವಹಿಂದೂ ಪರಿಷತ್ ಆರೋಪಿಸಿದೆ. ಟ್ರಸ್ಟ್ ನ ಅನುಮತಿ ಇಲ್ಲದೇ ದೇಣಿಗೆ ಸಂಗ್ರಹಿಸುವ ಮೂಲಕ ಹಲವು ವ್ಯಕ್ತಿಗಳು ವಂಚನೆ ಮಾಡುತ್ತಿದ್ದಾರೆ. ಈ ವಿಷಯವನ್ನು ಸಿಎಂ ಯೋಗಿ ಆದಿತ್ಯನಾಥ್, ಕೇಂದ್ರ ಗೃಹ ಸಚಿವಾಲಯದ ಗಮನಕ್ಕೂ ತರಲಾಗಿದ್ದು, ಕ್ರಮಕ್ಕೆ ಆಗ್ರಹಿಸಲಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ಆರೋಪಿಸಿದೆ. 

ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ವಿಹೆಚ್ ಪಿಯ ರಾಷ್ಟ್ರೀಯ ವಕ್ತಾರ ವಿನೋದ್ ಬನ್ಸಾಲ್, ಮಂದಿರ ಟ್ರಸ್ಟ್ ಹೆಸರಿನಲ್ಲಿ ವಂಚನೆ ಮಾಡುತ್ತಿರುವ ಇಂತಹ ವಂಚಕರ ಬಗ್ಗೆ ಎಚ್ಚರದಿಂದ ಇರಲು ಜನತೆಗೆ ಮನವಿ ಮಾಡಿದ್ದಾರೆ. ಅವರು ಉತ್ತರ ಪ್ರದೇಶ ಪೊಲೀಸ್ ಮುಖ್ಯಸ್ಥರಿಗೆ ಕಳುಹಿಸಿದ ದೂರನ್ನು ಮೈಕ್ರೋಬ್ಲಾಗಿಂಗ್ ಸೈಟ್‌ನಲ್ಲಿ ಹಂಚಿಕೊಂಡಿದ್ದಾರೆ, ಅದರ ಪ್ರತಿಯನ್ನು ಆದಿತ್ಯನಾಥ್ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೂ ಕಳಿಸಲಾಗಿದೆ.

'ಎಚ್ಚರ! ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ನಕಲಿ ಗುರುತಿನ ಚೀಟಿ ಹೊಂದಿರುವವರು ಜನರನ್ನು ವಂಚಿಸಲು  ಪ್ರಯತ್ನಿಸುತ್ತಿದ್ದಾರೆ' ಎಂದು ವಿಎಚ್‌ಪಿ ವಕ್ತಾರ ಬನ್ಸಾಲ್ ತಿಳಿಸಿದ್ದಾರೆ.

ಅಯೋಧ್ಯೆಯ ರಾಮ ಮಂದಿರದಲ್ಲಿ ಜನವರಿ 22 ರಂದು ನಡೆಯುವ ಶಂಕುಸ್ಥಾಪನೆ ಸಮಾರಂಭಕ್ಕೆ ಪ್ರತ್ಯೇಕ ಸಮಿತಿ ರಚಿಸಲು ಮತ್ತು ಹಣವನ್ನು ಸಂಗ್ರಹಿಸಲು ಯಾರಿಗೂ ಅನುಮತಿ ನೀಡಲಾಗಿಲ್ಲ ಎಂದು ಎಕ್ಸ್‌ ಪೋಸ್ಟ್‌ನಲ್ಲಿ ವಿಎಚ್‌ಪಿ ಇತ್ತೀಚೆಗೆ ಹೇಳಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT