ದೇವೇಂದ್ರ ಫಡ್ನವೀಸ್ 
ದೇಶ

ಫಡ್ನವೀಸ್ ತವರಿನಲ್ಲಿ ಬಿಜೆಪಿ ಬೆಂಬಲಿತ ಶಿಕ್ಷಕ ಕ್ಷೇತ್ರದ ಅಭ್ಯರ್ಥಿಗೆ ಸೋಲು

ಪರಿಷತ್ ನ ಶಿಕ್ಷಕರ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ತವರಿನಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ತೀವ್ರ ಮುಖಭಂಗವಾಗಿದೆ. 

ನಾಗ್ಪುರ: ಪರಿಷತ್ ನ ಶಿಕ್ಷಕರ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ತವರಿನಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ತೀವ್ರ ಮುಖಭಂಗವಾಗಿದೆ. 
 
ನಾಗ್ಪುರ ವಿಭಾಗದ ಶಿಕ್ಷಕರ ಸ್ಥಾನದಲ್ಲಿ ವಿಪಕ್ಷ ಮಹಾ ವಿಕಾಸ್ ಅಘಾಡಿ (ಎಂವಿಎ)ಯ ಅಭ್ಯರ್ಥಿ ವಿರುದ್ಧ ಬಿಜೆಪಿ ಅಭ್ಯರ್ಥಿ ಸೋಲು ಕಂಡಿದ್ದಾರೆ. 

ನಾಗ್ಪುರ ವಿಭಾಗದ ಶಿಕ್ಷಕರ ಕ್ಷೇತ್ರ ಡಿಸಿಎಂ ಫಡ್ನವೀಸ್ ತವರು ಕ್ಷೇತ್ರವಾಗಿದೆ.  ಇನ್ನು ಕೊಂಕಣ ವಿಭಾಗದ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಜ್ಞಾನೇಶ್ವರ್ ಗೆಲುವು ಸಾಧಿಸಿದ್ದಾರೆ.

ನಾಗ್ಪುರ ಶಿಕ್ಷಕರ ಕ್ಷೇತ್ರದಲ್ಲಿ ಸುಧಾಕರ್ ಅದ್ಬಾಲ್ ಎಂಬ ಎಂವಿಎ ಬೆಂಬಲಿತ ಅಭ್ಯರ್ಥಿ ಗೆಲುವು ಸಾಧಿಸಿದ್ದು ಬಿಜೆಪಿ ಬೆಂಬಲಿತ ಅಭ್ಯರ್ಥಿ  ನಾಗೋರಾವ್ ಗನಾರ್ ಪರಾಭವಗೊಂಡಿದ್ದಾರೆ. ನಾಗೋರಾವ್ ಈ ಕ್ಷೇತ್ರದ ಹಾಲಿ ಎಂಎಲ್ ಸಿ ಆಗಿದ್ದರು. ನಾಗ್ಪುರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ತವರು ಪ್ರದೇಶವಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತದಾರರ ಪಟ್ಟಿ ಪರಿಷ್ಕರಣೆ'ಯಲ್ಲಿ ಅಕ್ರಮ ಆರೋಪ; CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ, INDIA ಒಕ್ಕೂಟದಿಂದ ‘ಪ್ರಜಾಪ್ರಭುತ್ವ ಉಳಿಸಿ’ ಪಾದಯಾತ್ರೆ ಆರಂಭ..!

11/9 ಮಾದರಿಯಲ್ಲೇ ಇಸ್ರೇಲ್ ಧ್ವಂಸಕ್ಕೆ ಸಂಚು..! ಫ್ಲೈದುಬೈ ಏರ್‌ಲೈನ್ಸ್ ಸೇರಿದ್ದೇ ಆ ಕ್ರೂರ ಉದ್ದೇಶಕ್ಕಾಗಿ; ಸತ್ಯ ಬಾಯಿಬಿಟ್ಟ ಕಿಲ್ಲರ್ ಪೈಲಟ್ ಹಮಾಮ್..!

"ನಾಯಕತ್ವ ಮುಗಿದಿದೆ, ಜರ್ನಿ ಮುಂದುವರಿಯುತ್ತೆ": ಭಾವನಾತ್ಮಕ ಸಂದೇಶದೊಂದಿಗೆ captaincyಗೆ ಗುಡ್‌ಬೈ ಹೇಳಿದ Harmanpreet Kaur..!

FlyDubai ವಿಮಾನ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ: ಇದು ನನ್ನ ವೈಯಕ್ತಿಕ ನಂಬಿಕೆ; ಡೊನಾಲ್ಡ್ ಟ್ರಂಪ್

ಕಾಕ್‌ಪಿಟ್ ದಾಳಿ ಬಳಿಕ 150ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಫ್ಲೈದುಬೈ ವಿಮಾನವನ್ನು ಹೊಡೆದುರುಳಿಸಲು ಇಸ್ರೇಲ್ ಸಿದ್ಧವಾಗಿತ್ತು: ವರದಿ