ದೇಶ

ಸುಪ್ರೀಂ ಕೋರ್ಟ್ ಗೆ 7 ನ್ಯಾಯಾಧೀಶರ ಹೆಸರನ್ನು ಕೊಲಿಜಿಯಂ ಶಿಫಾರಸು ಮಾಡಿದೆ: ಕೇಂದ್ರ

Lingaraj Badiger

ನವದೆಹಲಿ: ಸುಪ್ರೀಂ ಕೋರ್ಟ್‌ನಲ್ಲಿ ಖಾಲಿ ಇರುವ ಎಲ್ಲಾ ನ್ಯಾಯಾಧೀಶರ ಹುದ್ದೆಗಳನ್ನು ಭರ್ತಿ ಮಾಡಲು ಸುಪ್ರೀಂ ಕೋರ್ಟ್ ಕೊಲಿಜಿಯಂ(ಎಸ್‌ಸಿಸಿ) ಇತ್ತೀಚೆಗೆ ಏಳು ನ್ಯಾಯಾಧೀಶರ ಹೆಸರನ್ನು ಶಿಫಾರಸು ಮಾಡಿದೆ ಎಂದು ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ಕಿರಣ್ ರಿಜಿಜು ಗುರುವಾರ ಸಂಸತ್ತಿಗೆ ತಿಳಿಸಿದ್ದಾರೆ.

ಇಂದು ಸಂಸದ ಜಾನ್ ಬ್ರಿಟ್ಟಾಸ್ ಕೇಳಿದ ಪ್ರಶ್ನೆ ಉತ್ತರಿಸಿದ ಕಿರಣ್ ರಿಜಿಜು ಅವರು, ಪ್ರಸ್ತುತ ಸುಪ್ರೀಂ ಕೋರ್ಟ್ ನಲ್ಲಿ 27 ನ್ಯಾಯಾಧೀಶರ ಕಾರ್ಯನಿರ್ವಹಿಸುತ್ತಿದ್ದು, ಏಳು ಹುದ್ದೆಗಳು ಖಾಲಿ ಉಳಿದಿವೆ ಎಂದು ಹೇಳಿದರು.

ಜನವರಿ 30 ರವರೆಗೆ ವಿವಿಧ ಹೈಕೋರ್ಟ್‌ಗಳಲ್ಲಿ ಒಟ್ಟು 1,108 ನ್ಯಾಯಾಧೀಶರ ಪೈಕಿ 775 ನ್ಯಾಯಾಧೀಶರು ಕಾರ್ಯನಿರ್ವಹಿಸುತ್ತಿದ್ದಾರೆ. ಹೈಕೋರ್ಟ್‌ಗಳಲ್ಲಿ 333 ನ್ಯಾಯಾಧೀಶರ ಹುದ್ದೆಗಳು ಖಾಲಿ ಇವೆ ಎಂದು ರಿಜಿಜು ಸಂಸತ್ತಿಗೆ ಮಾಹಿತಿ ನೀಡಿದರು.

"ಹೈಕೋರ್ಟ್ ಕೊಲಿಜಿಯಂಗಳು ಶಿಫಾರಸು ಮಾಡಿರುವ 142 ಪ್ರಸ್ತಾವನೆಗಳು ಪ್ರಕ್ರಿಯೆಯ ವಿವಿಧ ಹಂತಗಳಲ್ಲಿವೆ. ಈ 142 ರಲ್ಲಿ 4 ಪ್ರಸ್ತಾವನೆಗಳು ಸುಪ್ರೀಂ ಕೋರ್ಟ್ ಕೊಲಿಜಿಯಂನಲ್ಲಿ ಬಾಕಿ ಉಳಿದಿವೆ ಮತ್ತು 138 ಸರ್ಕಾರದಲ್ಲಿ ಪ್ರಕ್ರಿಯೆಯ ವಿವಿಧ ಹಂತಗಳಲ್ಲಿವೆ" ಎಂದು ಅವರು ಹೇಳಿದರು.

ಸುಪ್ರೀಂ ಕೋರ್ಟ್ ಕೊಲಿಜಿಯಂ ಮಂಗಳವಾರ ಅಲಹಾಬಾದ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಾಜೇಶ್ ಬಿಂದಾಲ್ ಮತ್ತು ಗುಜರಾತ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರನ್ನು ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾಗಿ ನೇಮಕ ಮಾಡುವಂತೆ ಶಿಫಾರಸು ಮಾಡಿದೆ.

SCROLL FOR NEXT