ಸಾಂದರ್ಭಿಕ ಚಿತ್ರ 
ದೇಶ

ನವದೆಹಲಿ: ಡ್ರಗ್ಸ್ ಖರೀದಿಗೆ ಹಣ ಕೊಡಲಿಲ್ಲವೆಂದು ತಂದೆಯನ್ನೇ ಕೊಂದ ಪುತ್ರ, ಬಂಧನ

ಡ್ರಗ್ಸ್ ಖರೀದಿಗೆ ಹಣ ಕೊಡಲಿಲ್ಲವೆಂದು ತನ್ನ ತಂದೆಯನ್ನೇ ಕೊಂದ ಪುತ್ರನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.  ಮೃತರನ್ನು ಶಕುರ್‌ಪುರ ಗ್ರಾಮದ ನಿವಾಸಿ ಸುರೇಶ್ ಕುಮಾರ್ ಎಂದು ಗುರುತಿಸಲಾಗಿದೆ.

ನವದೆಹಲಿ: ಡ್ರಗ್ಸ್ ಖರೀದಿಗೆ ಹಣ ಕೊಡಲಿಲ್ಲವೆಂದು ತನ್ನ ತಂದೆಯನ್ನೇ ಕೊಂದ ಪುತ್ರನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.  ಮೃತರನ್ನು ಶಕುರ್‌ಪುರ ಗ್ರಾಮದ ನಿವಾಸಿ ಸುರೇಶ್ ಕುಮಾರ್ ಎಂದು ಗುರುತಿಸಲಾಗಿದೆ.

ವಾಯುವ್ಯ ದೆಹಲಿಯ ಸುಭಾಷ್ ಪ್ಲೇಸ್‌ನಲ್ಲಿ ಜಗಳ ನಡೆದಿರುವ ಬಗ್ಗೆ ಮಾಹಿತಿ ದೊರೆತ ನಂತರ ಪೊಲೀಸರು ಅಲ್ಲಿಗೆ ಧಾವಿಸಿದಾಗ ಸುರೇಶ್ ಗಾಯಗೊಂಡಿರುವುದು ತಿಳಿದುಬಂದಿದೆ. ಗಾಯದ ನೋವಿನಿಂದ ಬಳುತ್ತಿದ್ದ ಅವರ ಒಂದು ಕಿವಿಯಿಂದ ರಕ್ತ ಸ್ರಾವವಾಗುತ್ತಿತ್ತು. ಕೂಡಲೇ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಲ್ಲಿ ಅವರು ಮೃತಪಟ್ಟಿರುವುದಾಗಿ  ವೈದ್ಯರು ಘೋಷಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ.

ತನಿಖೆ ವೇಳೆ ಮೃತ ವ್ಯಕ್ತಿ ತನ್ನ ಮಗ ಅಜಯ್ ಜೊತೆಗೆ ಹಣದ ವಿಚಾರವಾಗಿ ಜಗಳವಾಡಿರುವುದು ತಿಳಿದುಬಂದಿದೆ. ವಾಗ್ವಾದ ತಾರಕಕ್ಕೇರಿದಾಗ ಡ್ರಗ್ಸ್ ಖರೀದಿಸಲು ಹಣ ನೀಡಲು ನಿರಾಕರಿಸಿದ ತಂದೆ ಮೇಲೆ ಅಜಯ್ ಹಲ್ಲೆ ನಡೆಸಿದ್ದಾನೆ ಎಂದು ಅವರು ಹೇಳಿದರು.

ಆರೋಪಿ ಅಜಯ್ ನನ್ನು ಬಂಧಿಸಲಾಗಿದ್ದು, ಆತನ ವಿರುದ್ಧ ಐಪಿಸಿ ಸೆಕ್ಷನ್ 302 (ಕೊಲೆ) ಅಡಿ ಪ್ರಕರಣ ದಾಖಲಿಸಲಾಗಿದೆ. ಮುಂದಿನ ತನಿಖೆ ನಡೆಯುತ್ತಿದೆ ಎಂದು ಎಂದು ಡಿಸಿಪಿ ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

'ತಂದಿಟ್ಟ ಗಿಡ ಮನೆಗೇ ಹಾನಿ ಮಾಡಿದ್ರೆ..'; 'ನೋ ಕ್ಲಾಸ್', BiggBoss ಇತಿಹಾಸದ ಅತಿದೊಡ್ಡ ನಿರ್ಧಾರದ ಸುಳಿವು ನೀಡಿದ ಕಿಚ್ಚಾ ಸುದೀಪ್

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌‌ವೇಯಲ್ಲಿ ಅಪಘಾತಕ್ಕೆ ಬಿಗ್ ಟ್ವಿಸ್ಟ್: ಸ್ನೇಹಿತನಿಂದಲೇ ಭೂಮಿಕಾ ಕೊಲೆ?

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!