ಭಾರೀ ಮಳೆಯಿಂದಾಗಿ ಬಸ್ ನಿಲ್ದಾಣದಲ್ಲಿ ನಿಂತಿರುವ ಬಸ್ ಗಳು 
ದೇಶ

ತಮಿಳುನಾಡು: ಅಕಾಲಿಕ ಮಳೆ, ನಾಗಪಟ್ಟಣಂನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ತಮಿಳುನಾಡಿನಲ್ಲಿ ಬುಧವಾರ ರಾತ್ರಿಯಿಂದ  ಅಕಾಲಿಕ ಮಳೆ ಸುರಿಯುತ್ತಿದ್ದು, ನಾಗಪಟ್ಟಣಂನಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.  ತಿರುವರೂರು ಜಿಲ್ಲೆಯ ಶಾಲೆಗಳಿಗೂ ಗುರುವಾರ ರಜೆ ಘೋಷಿಸಲಾಗಿದೆ. 

ನಾಗಪಟ್ಟಣಂ: ತಮಿಳುನಾಡಿನಲ್ಲಿ ಬುಧವಾರ ರಾತ್ರಿಯಿಂದ  ಅಕಾಲಿಕ ಮಳೆ ಸುರಿಯುತ್ತಿದ್ದು, ನಾಗಪಟ್ಟಣಂನಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.  ತಿರುವರೂರು ಜಿಲ್ಲೆಯ ಶಾಲೆಗಳಿಗೂ ಗುರುವಾರ ರಜೆ ಘೋಷಿಸಲಾಗಿದೆ. 

ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಶ್ರೀಲಂಕಾ ಕರಾವಳಿಯಿಂದ ಸುಮಾರು 80 ಕಿಮೀ  ಮತ್ತು ತಮಿಳುನಾಡಿನ ಕಾರೈಕಲ್‌ನಿಂದ 400 ಕಿಮೀ ದೂರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ ಮಳೆಯಾಗುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.  

ಇದರಿಂದಾಗಿ ನಾಗಪಟ್ಟಣಂ, ಮೈಲಾಡುತುರೈ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಬಸ್ ಗಳು ನಿಲ್ದಾಣದಲ್ಲಿಯೇ ನಿಂತಿದ್ದು, ಸಂಪರ್ಕ ಕಡಿತಗೊಂಡಿದ್ದು, ಒಂದು ದಿನದ ಮಟ್ಟಿಗೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. 

ವಾಯುಭಾರ ಕುಸಿತದಿಂದಾಗಿ ಇಂದು  ದಕ್ಷಿಣ ತಮಿಳುನಾಡಿನ ಹಲವೆಡೆ ಹಗುರದಿಂದ ಸಾಧಾರಣ ಮಳೆ ಅಥವಾ ಉತ್ತರ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ನಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇಂದು ಮತ್ತು ನಾಳೆ ಸಮುದ್ರದಲ್ಲಿ ಬಿರುಗಾಳಿ ಹೆಚ್ಚಾಗಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಂಪುಟ ಸಲಹೆ ಮೇರೆಗೆ KPSC ಅಧ್ಯಕ್ಷ ಸಾಹುಕಾರ್ ರನ್ನು ಮತ್ತೆ ಅಮಾನತು ಮಾಡಿದ ರಾಜ್ಯಪಾಲರು!

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

Chhattisgarh: ಹೊಲದಿಂದ ಮನೆಗೆ ಮರಳುತ್ತಿದ್ದ ಮಹಿಳೆಗೆ ಸಿಡಿಲು ಬಡಿದು ಸಾವು, Video

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!