ಸಾಂದರ್ಭಿಕ ಚಿತ್ರ 
ದೇಶ

ಕಾಶ್ಮೀರ: ಪರ್ಫೂಮ್ ಬಾಂಬ್ ಹೊಂದಿದ್ದ ಸರ್ಕಾರಿ ಶಾಲೆಯ ಶಿಕ್ಷಕನ ಬಂಧನ

ವೈಷ್ಣೋದೇವಿ ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಬಸ್‌ನಲ್ಲಿ ಒಂದು ಸ್ಫೋಟ ಸೇರಿದಂತೆ ಹಲವು ಸ್ಫೋಟಗಳಲ್ಲಿ ಭಾಗಿಯಾದ ಆರೋಪದ ಮೇಲೆ ಲಷ್ಕರ್-ಎ-ತೊಯ್ಬಾ-ಭಯೋತ್ಪಾದಕನಾಗಿ ಬದಲಾಗಿರುವ ಸರ್ಕಾರಿ ಶಾಲೆಯ ಶಿಕ್ಷಕನನ್ನು...

ಶ್ರೀನಗರ: ವೈಷ್ಣೋದೇವಿ ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಬಸ್‌ನಲ್ಲಿ ಒಂದು ಸ್ಫೋಟ ಸೇರಿದಂತೆ ಹಲವು ಸ್ಫೋಟಗಳಲ್ಲಿ ಭಾಗಿಯಾದ ಆರೋಪದ ಮೇಲೆ ಲಷ್ಕರ್-ಎ-ತೊಯ್ಬಾ-ಭಯೋತ್ಪಾದಕನಾಗಿ ಬದಲಾಗಿರುವ ಸರ್ಕಾರಿ ಶಾಲೆಯ ಶಿಕ್ಷಕನನ್ನು ಬಂಧಿಸಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮಹಾನಿರ್ದೇಶಕ ದಿಲ್ಬಾಗ್ ಸಿಂಗ್ ಅವರು ಗುರುವಾರ ತಿಳಿಸಿದ್ದಾರೆ.

ಜಮ್ಮುವಿನ ನರ್ವಾಲ್‌ನಲ್ಲಿ ಇತ್ತೀಚೆಗೆ ನಡೆದ ಅವಳಿ ಸ್ಫೋಟ ಪ್ರಕರಣದ ತನಿಖೆಯ ನಂತರ ರಿಯಾಸಿ ಜಿಲ್ಲೆಯ ನಿವಾಸಿ ಆರಿಫ್‌ನನ್ನು ಬಂಧಿಸಲಾಗಿದೆ.

ಬಂಧಿತ ಆರಿಫ್ ನಿಂದ ಪರ್ಫೂಮ್ ಬಾಟಲಿಯೊಳಗೆ ಅಳವಡಿಸಲಾದ ಸುಧಾರಿತ ಸ್ಫೋಟಕ ಸಾಧನವನ್ನು (ಐಇಡಿ) ವಶಪಡಿಸಿಕೊಳ್ಳಲಾಗಿದೆ ಎಂದು ಸಿಂಗ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಕೇಂದ್ರಾಡಳಿತ ಪ್ರದೇಶದಲ್ಲಿ ಇಂತಹ ಬಾಂಬ್ ವಶಪಡಿಸಿಕೊಂಡಿರುವುದು ಇದೇ ಮೊದಲು ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮುಖ್ಯಸ್ಥರು ಹೇಳಿದ್ದಾರೆ.

ಆರಿಫ್ ತನ್ನ ಪಾಕಿಸ್ತಾನಿ ಉಗ್ರರ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದ್ದಾನೆ ಮತ್ತು ಕಳೆದ ಮೇನಲ್ಲಿ ವೈಷ್ಣೋದೇವಿ ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಬಸ್‌ನಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ತಾನು ಭಾಗಿಯಾಗಿದ್ದಾಗಿ ಒಪ್ಪಿಕೊಂಡಿದ್ದಾನೆ ಎಂದು ಸಿಂಗ್ ತಿಳಿಸಿದ್ದಾರೆ. ಬಸ್ ಸ್ಫೋಟದಲ್ಲಿ ನಾಲ್ಕು ಮೃತಪಟ್ಟಿದ್ದರು ಮತ್ತು 24 ಜನ ಗಾಯಗೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!