ನರೇಂದ್ರ ಮೋದಿ 
ದೇಶ

ಮೋದಿ ಸರ್ಕಾರ ಅದಾನಿಯಂತಹ ಮುಜುಗರದ ವಿಷಯಗಳ ಕುರಿತ ಚರ್ಚೆಯಿಂದ ತಪ್ಪಿಸಿಕೊಳ್ಳುತ್ತಿದೆ: ತರೂರ್

ಕೇಂದ್ರ ಸರ್ಕಾರ ಅದಾನಿ ಗ್ರೂಪ್ ಷೇರುಗಳ ಕುಸಿತದ ಬಗ್ಗೆ ಸಂಸತ್ತಿನಲ್ಲಿ ಚರ್ಚೆಗೆ ಅನುಮತಿ ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್ ಸಂಸದ ಶಶಿ ತರೂರ್, ಮೋದಿ ಸರ್ಕಾರ ಅದಾನಿಯಂತಹ ಮುಜುಗರದ...

ನವದೆಹಲಿ: ಕೇಂದ್ರ ಸರ್ಕಾರ ಅದಾನಿ ಗ್ರೂಪ್ ಷೇರುಗಳ ಕುಸಿತದ ಬಗ್ಗೆ ಸಂಸತ್ತಿನಲ್ಲಿ ಚರ್ಚೆಗೆ "ಅನುಮತಿ ನೀಡುತ್ತಿಲ್ಲ" ಎಂದು ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್ ಸಂಸದ ಶಶಿ ತರೂರ್, ಮೋದಿ ಸರ್ಕಾರ ಅದಾನಿಯಂತಹ ಮುಜುಗರದ ವಿಷಯಗಳ ಕುರಿತ ಚರ್ಚೆಯಿಂದ ತಪ್ಪಿಸಿಕೊಳ್ಳುತ್ತಿದೆ ಎಂದು ಶುಕ್ರವಾರ ಆರೋಪಿಸಿದ್ದಾರೆ.

ಅದಾನಿ ವಿಚಾರ ಸರ್ಕಾರಕ್ಕೆ ಮುಜುಗರ ಉಂಟು ಮಾಡಬಹುದು ಎಂದು ಭಾವಿಸಿರುವ ಸರ್ಕಾರ, ಪ್ರತಿಪಕ್ಷಗಳ ಚರ್ಚೆಯ ಬೇಡಿಕೆಯನ್ನು ತಳ್ಳಿಹಾಕುತ್ತಿದೆ" ಎಂದು ಕಾಂಗ್ರೆಸ್ ನಾಯಕ ಹೇಳಿದ್ದಾರೆ.

ಆದರೆ, ಪ್ರತಿಪಕ್ಷಗಳು ಪ್ರತಿಭಟನೆ ಕೈಬಿಟ್ಟು ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಅವಕಾಶ ನೀಡಬೇಕು ಎಂದು ಸರ್ಕಾರ ಒತ್ತಾಯಿಸಿದೆ.

ಸಂಸತ್ತು ದೇಶ ಎದುರಿಸುತ್ತಿರುವ ಸಮಸ್ಯೆಗಳನ್ನು ಚರ್ಚಿಸುವ ಸ್ಥಳವಾಗಿದೆ. ದುಃಖದ ಸಂಗತಿಯೆಂದರೆ, ನಮ್ಮ ಸರ್ಕಾರಕ್ಕೆ ಚರ್ಚಿಸುವ ಯೋಗ್ಯತೆ ಕಾಣಿಸುತ್ತಿಲ್ಲ. ಹಾಗಾಗಿ ಅವರು (ಚರ್ಚೆಗಳನ್ನು) ಸ್ಥಗಿತಗೊಳಿಸುತ್ತಿದ್ದಾರೆ. ಪರಿಣಾಮವಾಗಿ ನಾವು ಈಗಾಗಲೇ ಎರಡು ದಿನಗಳನ್ನು ಕಳೆದುಕೊಂಡಿದ್ದೇವೆ" ಎಂದು ತರೂರ್ ವಾಗ್ದಾಳಿ ನಡೆಸಿದರು.

"ಎಲ್ಲ ವಿರೋಧ ಪಕ್ಷಗಳು ಒಗ್ಗಟ್ಟಾಗಿ ಈ(ಅದಾನಿ ಗ್ರೂಪ್ ಸಮಸ್ಯೆ) ದೇಶದ ನಾಗರಿಕರ ಮೇಲೆ ಪರಿಣಾಮ ಬೀರುವ ಅತ್ಯಂತ ಮಹತ್ವದ ವಿಷಯದ ಬಗ್ಗೆ ಚರ್ಚಿಸಲು ಬಯಸುತ್ತಿವೆ. ಅಲ್ಲದೆ ಸರ್ಕಾರ ಅನುಮತಿಸಬೇಕಾದ ಸಾಕಷ್ಟು ಪ್ರಾಮುಖ್ಯತೆಯ ವಿಷಯ ಇದಾಗಿದೆ" ಎಂದು ತರೂರ್ ಸಂಸತ್ ಭವನದಲ್ಲಿ ಪಿಟಿಐಗೆ ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

42 ಎಸೆತ, 102 ರನ್: ವಿರಾಟ್ ಕೊಹ್ಲಿಯ ಸಾರ್ವಕಾಲಿಕ ದಾಖಲೆಯೇ ಉಡೀಸ್‌ ಮಾಡಿದ ಶ್ರೇಯಸ್ ಅಯ್ಯರ್‌!