ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಮಧ್ಯ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರಗಳಲ್ಲೂ ಎಎಪಿ ಸ್ಪರ್ಧೆ

ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವು ಎಲ್ಲಾ 230 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ಪಕ್ಷದ ಪದಾಧಿಕಾರಿಯೊಬ್ಬರು ಶನಿವಾರ ಹೇಳಿದ್ದಾರೆ.

ಎಎಪಿ ಪಕ್ಷದ ಚಿಹ್ನೆ ಸಾಂದರ್ಭಿಕ ಚಿತ್ರ
Lingaraj Badiger
Updated On : 5 Feb 2023, 12:03 am

ಭೋಪಾಲ್: ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವು ಎಲ್ಲಾ 230 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ಪಕ್ಷದ ಪದಾಧಿಕಾರಿಯೊಬ್ಬರು ಶನಿವಾರ ಹೇಳಿದ್ದಾರೆ.

ಅರವಿಂದ್ ಕೇಜ್ರಿವಾಲ್ ನೇತೃತ್ವದ ಪಕ್ಷವು, ವಿಧ್ವಂಸಕ ರಾಜಕಾರಣ ಮಾಡುತ್ತಿರುವ ಭಾರತೀಯ ಜನತಾ ಪಕ್ಷ ಮತ್ತು ಪ್ರತಿಪಕ್ಷ ಕಾಂಗ್ರೆಸ್ ವಿರುದ್ಧ ಸ್ಪರ್ಧಿಸಲಿದ್ದು, ದೆಹಲಿ ಮಾದರಿ ಆಡಳಿತ ನೀಡಲಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಅಸೆಂಬ್ಲಿ ಚುನಾವಣೆ 2023: ಎಲ್ಲಾ 224 ಕ್ಷೇತ್ರಗಳಲ್ಲಿ ಸ್ಪರ್ಧೆ- ಎಎಪಿ

Advertisement

Advertisement

ಇತ್ತೀಚಿನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಎಪಿ ಸಾಧನೆಯನ್ನು ಉಲ್ಲೇಖಿಸಿದ ಎಎಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಸಂದೀಪ್ ಪಾಠಕ್ ಅವರು, ಮಧ್ಯ ಪ್ರದೇಶದಲ್ಲಿ ಎಎಪಿ ಮುಂದಿನ ಸರ್ಕಾರ ರಚಿಸಲಿದೆ ಎಂದಿದ್ದಾರೆ.

"ನಾವು ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ನಿಲ್ಲಿಸುತ್ತೇವೆ ಮತ್ತು ನಮ್ಮ ಎಲ್ಲಾ ಶಕ್ತಿಯೊಂದಿಗೆ ಚುನಾವಣೆಯಲ್ಲಿ ಹೋರಾಡುತ್ತೇವೆ" ಎಂದು ಪಾಠಕ್ ಭೋಪಾಲ್‌ನಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments