ಸಾಂದರ್ಭಿಕ ಚಿತ್ರ 
ದೇಶ

ದೆಹಲಿ: ಐಬಿ ನಿರ್ದೇಶಕರ ನಿವಾಸದಲ್ಲಿ ಗುಂಡು ಹಾರಿಸಿಕೊಂಡು ಸಿಆರ್‌ಪಿಎಫ್ ಎಎಸ್‌ಐ ಆತ್ಮಹತ್ಯೆ 

ಗುಪ್ತಚರ ಬ್ಯೂರೋ ನಿರ್ದೇಶಕರ ಮನೆಯಲ್ಲಿ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ 53 ವರ್ಷದ  ಸಿಆರ್ ಪಿಎಫ್ ಎಎಸ್ ಐ ಒಬ್ಬರು  ತಮ್ಮ ಸರ್ವೀಸ್ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ನವದೆಹಲಿ: ಗುಪ್ತಚರ ಬ್ಯೂರೋ ನಿರ್ದೇಶಕರ ಮನೆಯಲ್ಲಿ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ 53 ವರ್ಷದ  ಸಿಆರ್ ಪಿಎಫ್ ಎಎಸ್ ಐ ಒಬ್ಬರು  ತಮ್ಮ ಸರ್ವೀಸ್ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಶುಕ್ರವಾರ ಸಂಜೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.  ಮೃತರನ್ನು ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಸಹಾಯಕ ಸಬ್ ಇನ್ಸ್‌ಪೆಕ್ಟರ್ ರಾಜಬೀರ್ ಸಿಂಗ್ ಎಂದು ಗುರುತಿಸಲಾಗಿದೆ.

ಗುಪ್ತಚರ ಬ್ಯೂರೋ ನಿರ್ದೇಶಕರ ನಿವಾಸದಲ್ಲಿ ಗಾರ್ಡ್ ಆಗಿ ಅವರನ್ನು ನಿಯೋಜಿಸಲಾಗಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಇಂದು ಮರಣೋತ್ತರ ಪರೀಕ್ಷೆ ನಡೆಸಲಾಗುವುದು, ನಂತರ ಅವರ ಮೃತದೇಹವನ್ನು ಅವರ ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

ದಿಢೀರ್‌ ದೆಹಲಿಗೆ ತೆರಳಿದ ನಾಗೇಂದ್ರ; ಹೈಕಮಾಂಡ್ ಅಂಗಳದಲ್ಲಿ ರಾಜೀನಾಮೆ ಭವಿಷ್ಯ!

ಚಾಣಕ್ಯನ ಅರ್ಥಶಾಸ್ತ್ರದಲ್ಲಿ ಸಾಲದ ಪರಿಕಲ್ಪನೆ ಹೀಗಿತ್ತು ! (ಹಣಕ್ಲಾಸು)

ದೆಹಲಿ: ಫ್ರೆಂಡ್​ಶಿಪ್ ನಿರಕಾರಿಸಿದ್ದಕ್ಕೆ 21 ವರ್ಷದ ಮಾಡೆಲ್'ನನ್ನು ಆಕೆಯ ಮನೆಗೆ ನುಗ್ಗಿ ಹತ್ಯೆಗೈದು ಜಿಮ್ ಟ್ರೇನರ್!