ಮೊರ್ಬಿ ಸೇತುವೆ ಕುಸಿತ 
ದೇಶ

ಮೊರ್ಬಿ ಸೇತುವೆ ಕುಸಿತ: ಒರೆವಾ ಎಂಡಿ ಸೇರಿ 7 ಆರೋಪಿಗಳ ಜಾಮೀನು ಅರ್ಜಿ ತಿರಸ್ಕೃತ

135 ಮಂದಿ ಸಾವಿಗೆ ಕಾರಣವಾದ ಗುಜರಾತ್‌ನ ಮೊರ್ಬಿಯ ತೂಗು ಸೇತುವೆ ಕುಸಿತ ಪ್ರಕರಣದಲ್ಲಿ ಆರೋಪಿಗಳಾಗಿರುವ ಒರೆವಾ ಗ್ರೂಪ್‌ನ ಇಬ್ಬರು ನಿರ್ದೇಶಕರು ಸೇರಿದಂತೆ ಒಟ್ಟು ಏಳು ಮಂದಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸೆಷನ್ಸ್‌ ನ್ಯಾಯಾಲಯ ಶನಿವಾರ ತಿರಸ್ಕರಿಸಿದೆ.

ಮೊರ್ಬಿ: 135 ಮಂದಿ ಸಾವಿಗೆ ಕಾರಣವಾದ ಗುಜರಾತ್‌ನ ಮೊರ್ಬಿಯ ತೂಗು ಸೇತುವೆ ಕುಸಿತ ಪ್ರಕರಣದಲ್ಲಿ ಆರೋಪಿಗಳಾಗಿರುವ ಒರೆವಾ ಗ್ರೂಪ್‌ನ ಇಬ್ಬರು ನಿರ್ದೇಶಕರು ಸೇರಿದಂತೆ ಒಟ್ಟು ಏಳು ಮಂದಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸೆಷನ್ಸ್‌ ನ್ಯಾಯಾಲಯ ಶನಿವಾರ ತಿರಸ್ಕರಿಸಿದೆ.

ಮೊರ್ಬಿಯ ಜಿಲ್ಲಾ ಪ್ರಧಾನ ಹಾಗೂ ಸೆಷನ್ಸ್‌ ಕೋರ್ಟ್‌ ನ್ಯಾಯಾದೀಶ ಪಿ.ಸಿ.ಜೋಶಿ ಅವರು ಆರೋಪಿಗಳ ಜಾಮೀನು ಅರ್ಜಿ ತಿರಸ್ಕರಿಸಿ ಆದೇಶ ಹೊರಡಿಸಿದ್ದು, ಆರೋಪಿಗಳು ಇದಕ್ಕೂ ಮುನ್ನ ಸಲ್ಲಿಸಿದ್ದ ಅರ್ಜಿಗಳು ಸಹ ಸೆಷನ್ಸ್‌ ಹಾಗೂ ಹೈಕೋರ್ಟ್‌ಗಳಲ್ಲಿ ತಿರಸ್ಕೃತಗೊಂಡಿವೆ.

135 ಜನರ ಸಾವಿಗೆ ಕಾರಣವಾಗಿದ್ದ ಈ ಸೇತುವೆ ಕುಸಿತ ಪ್ರಕರಣದ ಆರೋಪಪಟ್ಟಿಯನ್ನು ಪೊಲೀಸರು ಜನವರಿ 27ರಂದು ಸಲ್ಲಿಸಿದ್ದರು. ಗಡಿಯಾರ ತಯಾರಿಕೆ ಕಂಪೆನಿ ಒರೆವಾ ಗ್ರೂಪ್‌ನ ವ್ಯವಸ್ಥಾಪಕ ನಿರ್ದೇಶಕ (ಎಂ.ಡಿ.) ಜಯಸುಖ್‌ ಪಟೇಲ್‌ ಅವರನ್ನು ಪ್ರಕರಣದ 10ನೇ ಆರೋಪಿ ಎಂದು ಉಲ್ಲೇಖಿಸಲಾಗಿತ್ತು. ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್‌ (ಸಿಜೆಎಂ) ಎಂ.ಜೆ. ಖಾನ್‌ ಅವರು ಪಟೇಲ್‌ ವಿರುದ್ಧ ಬಂಧನ ವಾರಂಟ್ ಹೊರಡಿಸಿದ್ದರು. ಇದರ ಬೆನ್ನಲ್ಲೇ ಪಟೇಲ್‌ ಅವರು ಜನವರಿ 31ರಂದು ಸೆಷನ್ಸ್‌ ನ್ಯಾಯಾಲಯದೆದುರು ಶರಣಾಗಿದ್ದರು. ಅವರನ್ನು ಫೆಬ್ರುವರಿ 8ರ ವರೆಗೆ ಪೊಲೀಸರ ವಶಕ್ಕೆ ನೀಡಲಾಗಿತ್ತು. 

ಇದರ ನಡುವೆಯೇ ಮೊರ್ಬಿ ಕೋರ್ಟ್ ಆರೋಪಿಗಳ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.

ಎಲ್ಲ ಆರೋಪಿಗಳ ವಿರುದ್ಧ ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಆರೋಪಿಗಳು ಹಣದ ಆಸೆಗಾಗಿ ಮೊರ್ಬಿ ಸೇತುವೆ ನಿರ್ಮಾಣ ಕಾರ್ಯದಲ್ಲಿ ಬೇಜವಾಬ್ದಾರಿ ತೋರಿದ್ದಾರೆ. ಇದು ದುರಂತಕ್ಕೆ ಕಾರಣ ಎಂದು ಚಾರ್ಜ್‌ಶೀಟ್‌ನಲ್ಲಿ ಆರೋಪಿಸಲಾಗಿದೆ.

ಮಚ್ಚು ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಶತಮಾನಗಳಷ್ಟು ಹಳೆಯದಾದ ಮೊರ್ಬಿ ಸೇತುವೆ ನಿರ್ವಹಣೆಯ ಒಪ್ಪಂದವನ್ನು ಒರೆವಾ ಗ್ರೂಪ್‌ ವಹಿಸಿಕೊಂಡಿತ್ತು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT