ಬ್ಯಾಂಕ್ ಸಿಬ್ಬಂದಿಗೆ ಥಳಿತದ ಚಿತ್ರ 
ದೇಶ

ಬ್ಯಾಂಕ್ ಆಫ್ ಇಂಡಿಯಾ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ ಗ್ರಾಹಕ! ವಿಡಿಯೋ ವೈರಲ್

ಬ್ಯಾಂಕ್ ಸಿಬ್ಬಂದಿಗೆ ಗ್ರಾಹಕನೊಬ್ಬ ಮನಬಂದಂತೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಗುಜರಾತ್ ನಲ್ಲಿ ನಡೆದಿದೆ. ಬ್ಯಾಂಕ್ ಆಫ್ ಇಂಡಿಯಾ ನಾಡಿಯಾಡ್ ಶಾಖೆಯಲ್ಲಿ ಈ ಘಟನೆ ನಡೆದಿದೆ.

ನಾಡಿಯಾದ್: ಬ್ಯಾಂಕ್ ಸಿಬ್ಬಂದಿಗೆ ಗ್ರಾಹಕನೊಬ್ಬ ಮನಬಂದಂತೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಗುಜರಾತ್ ನಲ್ಲಿ ನಡೆದಿದೆ. ಬ್ಯಾಂಕ್ ಆಫ್ ಇಂಡಿಯಾ ನಾಡಿಯಾಡ್ ಶಾಖೆಯಲ್ಲಿ ಈ ಘಟನೆ ನಡೆದಿದೆ.

ಕೊನೆಗೆ ಇಬ್ಬರು ಶಂಕಿತರನ್ನು ಪೊಲೀಸರು ಬಂಧಿಸಿದ್ದು, ಎಸ್ ಸಿ-ಎಸ್ ಟಿ  ದೌರ್ಜನ್ಯ ತಡೆ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಹಲ್ಲೆಗೊಳಗಾದ ಬ್ಯಾಂಕ್ ಸಿಬ್ಬಂದಿಯನ್ನು  ಮನೀಶ್ ಧಂಗರ್ ಎಂದು ಗುರುತಿಸಲಾಗಿದೆ. 

ಗ್ರಾಹಕ ಸಮರ್ಥ್ ಬ್ರಹ್ಮಭಟ್ ತನ್ನಗೆ 2-3 ಬಾರಿ ಕಪಾಳಕ್ಕೆ ಹೊಡೆದು, ಒದ್ದಿರುವುದಾಗಿ  ಪೊಲೀಸ್ ದೂರಿನಲ್ಲಿ ಮನೀಶ್ ಧಂಗರ್  ಆರೋಪಿಸಿದ್ದಾರೆ. ಇತರ ಬ್ಯಾಂಕ್ ಉದ್ಯೋಗಿಗಳು ಸಮರ್ಥನನ್ನು ತಡೆಯಲು ಪ್ರಯತ್ನಿಸಿದಾಗ, ಆರೋಪಿಯ ಜೊತೆಗಿದ್ದ ಅವನ ಸ್ನೇಹಿತ ಪಾರ್ಥ್ ಕೂಡ ನನಗೆ ಒದ್ದಿರುವುದಾಗಿ ಎಂದು ಧಂಗರ್ ಪೊಲೀಸರಿಗೆ ತಿಳಿಸಿದ್ದಾರೆ.

ಬ್ಯಾಂಕ್‌ನಿಂದ ಸಾಲ ಪಡೆದಿರುವ ಆರೋಪಿ ಸಮರ್ಥ್ ತನ್ನ ಮನೆ ವಿಮಾ ಪಾಲಿಸಿಯ ಪ್ರತಿಯನ್ನು ಪ್ರಸ್ತುತಪಡಿಸಲು ನಿರಂತರವಾಗಿ ಕೇಳಿದ್ದರಿಂದ ಅಸಮಾಧಾನಗೊಂಡಿದ್ದ, ವಿಮಾ ಪಾಲಿಸಿಯನ್ನು ಸಲ್ಲಿಸುವುದಿಲ್ಲ ಎಂದು ಫೋನ್ ಮೂಲಕ ಬೆದರಿಕೆ ಹಾಕಿದ್ದ ಎಂದು ಧಂಗರ್ ತಿಳಿಸಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ